ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳವಾರ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ ಕೆಲವೆಡೆ ರಾಶಿ ರಾಶಿ ಆಲಿಕಲ್ಲು ಬಿದ್ದ ಪರಿಣಾಮದಿಂದಾಗಿ ರಾಜ್ಯದ ಜನರು ಪುಳಕಿತಗೊಂಡರು.
ಬೀದರ್, ಕಲಬುರಗಿ, ಗದಗ, ವಿಜಯಪುರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಬೆಳಗಾವಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಾರ್ಚ್ 18 ರಿಂದ 22 ರವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ಮೊಬೈಲ್ ನಲ್ಲೇ ಸಿಡಿಲಿ ಮಾಹಿತಿ ಪಡೆಯಲು ದಾಮಿನಿ ಯಾಪ್ ಎನ್ನು ಅಭಿವೃದ್ಧಿ ಪಡಿಸಲಾಗಿದೆ. ಇದು ನಮ್ಮ ಸುತ್ತಮುತ್ತಲಿನ 20 ರಿಂದ 40 ಕಿ.ಮೀ ವ್ಯಾಪ್ತಿಯಲ್ಲಿ ಸಿಡಿಲು ಬಡೆಯುವ ಮುನ್ಸೂಚನೆಯನ್ನು 30 ರಿಂದ 40 ನಿಮಿಶಗಳ ಮುಂಚಿತವಾಗಿ ಎಚ್ಚರಿಕೆ ಸಂದೇಶಗಳ ಮೂಲಕ ನೀಡುತ್ತದೆ.
ದಾಮಿನಿ ಯಾಪ್ ನ್ನು ಗೂಗಲ್ ಪ್ಲೇ ಸ್ಟೋರ್ ಮೂಲಕ Damini ಎಂದು ಟೈಪ್ ಮಾಡಿ ನಿಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಬಹುದು. ಜಿಪಿಎಸ್ ಆನ್ ಮಾಡಿ ನಿಮ್ಮ ಸ್ಥಳದ ಮಾಹಿತಿಯನ್ನು ಲಾಗಿನ್ ಮಾಡಿಕೊಳ್ಳಬೇಕು. ಯಾಪ್ ನಲ್ಲಿ ಕೆಂಪು ಬಣ್ಣದ ಎಚ್ಚರಿಕೆ ಬಂದರೆ ಸಿಡಿಲು ಬಡಿಯುವ ಸಾಧ್ಯತೆ ಇರುತ್ತದೆ. ಕೂಡಲೇ ಸುರಕ್ಷಿತ ಸ್ಥಳಕ್ಕೆ ಹೋಗಬಹುದು.
ಮುಂಗಾರು ಪೂರ್ವದಲ್ಲಿ ಗುಡುಗು ಸಿಡಿಲ ಸಹಿತ ಮಳೆಯಾಗುತ್ತಿದ್ದು, ಇದರಿಂದ ರಾಜ್ಯದಲ್ಲಿ ಸಾವು ನೋವುಗಳು ಕಂಡು ಬರುತ್ತದೆ. ಇದರ ಪ್ರಭಾವ ರಾಜ್ಯದ ರೈತರು ಮತ್ತು ಸಾರ್ವಜನಿಕರ ಮೇಲೆ ಬೀಳುತ್ತದೆ. ಸಿಡಿಲಿನಿಂದ ರಾಜ್ಯದಲ್ಲಿ ನೂರಾರು ರೈತರು ಸಾವನ್ನಪ್ಪುತ್ತಾರೆ. ಈ ಸಾವು ನೋವಗಳನ್ನು ತಡೆಯುವುದಕ್ಕಾಗಿ ರಾಜ್ಯ ಸರ್ಕಾರವು ದಾಮಿನಿ ಎಂಬ ಯಾಪ್ ನ್ನು ಅಭಿವೃದ್ಧಿಪಡಿಸಿದೆ. ರೈತರು, ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಮಿಂಚು ಬರುವ ಮುನ್ಸೂಚನೆಯನ್ನು ತಿಳಿದುಕೊಳ್ಳಲು ದಾಮಿನಿ ಯಾಪ್ ನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ…
ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್‌ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ,…
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ…
ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ…
ಮೊಬೈಲ್‌ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ…
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ಇತ್ತೀಚೆಗೆ ಕಳೆದ…