Categories: information

ಇಂದಿನಿಂದ ನಾಲ್ಕು ದಿನ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಲ್ಲೆಲ್ಲಿ ಮಳೆ ಇಲ್ಲಿದೆ ಮಾಹಿತಿ!

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Spread the love

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳವಾರ ರಾಜ್ಯದ  17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ ಕೆಲವೆಡೆ ರಾಶಿ ರಾಶಿ ಆಲಿಕಲ್ಲು ಬಿದ್ದ ಪರಿಣಾಮದಿಂದಾಗಿ ರಾಜ್ಯದ ಜನರು ಪುಳಕಿತಗೊಂಡರು.

Thank you for reading this post, don't forget to subscribe!

ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಬೀದರ್, ಕಲಬುರಗಿ, ಗದಗ, ವಿಜಯಪುರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಬೆಳಗಾವಿ ಜಿಲ್ಲೆ ಸೇರಿದಂತೆ ಉತ್ತರ  ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಾರ್ಚ್ 18 ರಿಂದ 22 ರವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ? 92433 45433 ಈ ನಂಬರಿಗೆ ಕರೆ ಮಾಡಿ

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ಮೊಬೈಲ್ ನಲ್ಲೇ ಸಿಡಿಲಿನ ಮಾಹಿತಿ ಪಡೆಯಿರಿ

ಮೊಬೈಲ್ ನಲ್ಲೇ ಸಿಡಿಲಿ ಮಾಹಿತಿ ಪಡೆಯಲು ದಾಮಿನಿ ಯಾಪ್ ಎನ್ನು ಅಭಿವೃದ್ಧಿ ಪಡಿಸಲಾಗಿದೆ. ಇದು ನಮ್ಮ ಸುತ್ತಮುತ್ತಲಿನ 20 ರಿಂದ 40 ಕಿ.ಮೀ ವ್ಯಾಪ್ತಿಯಲ್ಲಿ ಸಿಡಿಲು ಬಡೆಯುವ ಮುನ್ಸೂಚನೆಯನ್ನು 30 ರಿಂದ 40 ನಿಮಿಶಗಳ ಮುಂಚಿತವಾಗಿ ಎಚ್ಚರಿಕೆ ಸಂದೇಶಗಳ ಮೂಲಕ ನೀಡುತ್ತದೆ.

ದಾಮಿನಿ ಯಾಪ್ ನ್ನು ಗೂಗಲ್ ಪ್ಲೇ ಸ್ಟೋರ್ ಮೂಲಕ Damini ಎಂದು ಟೈಪ್ ಮಾಡಿ ನಿಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಬಹುದು. ಜಿಪಿಎಸ್ ಆನ್ ಮಾಡಿ ನಿಮ್ಮ ಸ್ಥಳದ ಮಾಹಿತಿಯನ್ನು ಲಾಗಿನ್ ಮಾಡಿಕೊಳ್ಳಬೇಕು. ಯಾಪ್ ನಲ್ಲಿ ಕೆಂಪು ಬಣ್ಣದ ಎಚ್ಚರಿಕೆ ಬಂದರೆ ಸಿಡಿಲು ಬಡಿಯುವ ಸಾಧ್ಯತೆ ಇರುತ್ತದೆ. ಕೂಡಲೇ ಸುರಕ್ಷಿತ ಸ್ಥಳಕ್ಕೆ ಹೋಗಬಹುದು.

ಮುಂಗಾರು ಪೂರ್ವದಲ್ಲಿ ಗುಡುಗು ಸಿಡಿಲ ಸಹಿತ ಮಳೆಯಾಗುತ್ತಿದ್ದು, ಇದರಿಂದ ರಾಜ್ಯದಲ್ಲಿ ಸಾವು ನೋವುಗಳು ಕಂಡು ಬರುತ್ತದೆ. ಇದರ ಪ್ರಭಾವ ರಾಜ್ಯದ ರೈತರು ಮತ್ತು ಸಾರ್ವಜನಿಕರ ಮೇಲೆ ಬೀಳುತ್ತದೆ. ಸಿಡಿಲಿನಿಂದ ರಾಜ್ಯದಲ್ಲಿ ನೂರಾರು ರೈತರು ಸಾವನ್ನಪ್ಪುತ್ತಾರೆ. ಈ ಸಾವು ನೋವಗಳನ್ನು ತಡೆಯುವುದಕ್ಕಾಗಿ ರಾಜ್ಯ ಸರ್ಕಾರವು ದಾಮಿನಿ ಎಂಬ ಯಾಪ್ ನ್ನು ಅಭಿವೃದ್ಧಿಪಡಿಸಿದೆ. ರೈತರು, ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಮಿಂಚು ಬರುವ ಮುನ್ಸೂಚನೆಯನ್ನು ತಿಳಿದುಕೊಳ್ಳಲು ದಾಮಿನಿ ಯಾಪ್ ನ್ನು ಡೌನ್ಲೋಡ್ ಮಾಡಿಕೊಳ್ಳಬಹುದು

ಓದುಗರಲ್ಲಿ ವಿನಂತಿ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

57 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

57 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

57 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

57 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

57 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

57 years ago