Categories: information

ಇಂದಿನಿಂದ ಏಪ್ರೀಲ್ 8 ರವರೆಗೆ ಈ ಜಿಲ್ಲೆಗಳಲ್ಲಿ ಮಳೆ

ರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರೀಲ್ 8 ರವರೆಗೆ ವಿವಿಧೆಡೆ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Spread the love

ರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರೀಲ್ 8 ರವರೆಗೆ ವಿವಿಧೆಡೆ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದೆ. ಕೆಲವು ಕಡೆ ಗುಡುಗು ಸಿಡಿಲಿನಿಂದ ಪ್ರಾಣಾಪಾಯವಾಗುತ್ತಿದ್ದರೆ ಇನ್ನೂ ಕೆಲವು ಕಡೆ ಬಿಸಲಿನಿಂದ ಬಸವಳಿದ ಜನರಿಗೆ ತಂಪೆರೆಯುತ್ತಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳು, ದಕ್ಷಿಣ ಒಳನಾಡು ಸೇರಿದಂತೆ ಕರಾವಳಿಯ ಎರಡು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳವರೆಗೆ ಮಳೆಯಾಗಲಿದೆ.  ಹೌದು, ಏಪ್ರೀಲ್ 8 ರವರೆಗೆ ರಾಜ್ಯದ 18 ಜಿಲ್ಲೆಗಳಿಗೆ ಗುಡುಗು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Thank you for reading this post, don't forget to subscribe!

ಇಂದು ಎಲ್ಲೆಲ್ಲಿ ಮಳೆಯಾಗಲಿದೆ ?

ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಮಳೆಯಾಗಲಿದೆ. ಪ್ರತಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಏಪ್ರೀಲ್ 5 ರಂದು ಎಲ್ಲೆಲ್ಲಿ ಮಳೆಯಾಗಿದೆ ?

ಏಪ್ರೀಲ್ 5 ರಂದು ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ವಿಜಯನಗರ, ಕೊಪ್ಪಳ, ಗದಗ, ಬಳ್ಳಾರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಗುಗುಡು ಸಹಿತ ಕೆಲವು ಸ್ಥಳಗಳಲ್ಲಿ ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಮಳೆಯಾಗಲಿದೆ.

ಏಪ್ರೀಲ್ 6, 7 ಹಾಗೂ 8 ರಂದು ಎಲ್ಲೆಲ್ಲಿ ಮಳೆಯಾಗಲಿದೆ ?

ಏಪ್ರೀಲ್ 6, 7 ಹಾಗೂ 8 ರಂದು ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೀದರ್, ಕಲಬುರಗಿ, ಯಾದಗಿರಿ, ಬಳ್ಳಾರಿ, ರಾಯಚೂರು, ವಿಜನಗರ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಬಿರುಗಾಳಿಯೊಂದಿಗೆ ಹಗುರದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ

ಓದುಗರಲ್ಲಿ ವಿನಂತಿ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

Premada Oorali: ಪ್ರೇಮದ ಊರಲಿ ಮೂವಿ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟಾಗಿದೆ ಗೊತ್ತಾ?

ಪ್ರೇಮದ ಊರಲಿ ಸಿನಿಮಾ ಇಲ್ಲಿಯವರೆಗೆ ಭಾರತದಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ ಎಂಬುದರ ಬಗ್ಗೆ ಈ ಆರ್ಟಿಕಲ್ ನಲ್ಲಿ ಮಾಹಿತಿ ಕೊಟ್ಟಿದ್ದೇವೆ.…

57 years ago

PMkisan amount will be released next week ಪಿಎಂ ಕಿಸಾನ್ 24ನೇ ಕಂತಿನ ಹಣ ಅಕ್ಟೋಬರ್ 30 ರಂದು ಬಿಡುಗಡೆ

ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಅಕ್ಟೋಬರ್ 30ರಂದು ಬಿಡುಗಡೆಯಾಗಲಿದೆಯೇ? ರೈತರ ಖಾತೆಗೆ ₹2,000 ಜಮೆಯಾಗುವ ಮಾಹಿತಿ, ಪಿಎಂ…

57 years ago

ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…

57 years ago

ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…

57 years ago

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…

57 years ago

ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!

ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…

57 years ago