Categories: information

ಖಾತಾ ನಂಬರ್ ಪ್ರಕಾರ ನಿಮಗೆಷ್ಟು ಜಮೀನಿದೆ? ಇಲ್ಲೇ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ.ರೈತರು ಸರ್ವೆ ನಂಬರ್ ಹಾಕಿ ಖಾತಾ ನಂಬರ್ ಪ್ರಕಾರ ತಮ್ಮ ಹೆಸರಿಗೆ ಎಷ್ಟು ಎಕರೆ ಜಮೀನಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹಾಗಾದರೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ.ರೈತರು ಸರ್ವೆ ನಂಬರ್ ಹಾಕಿ ಖಾತಾ ನಂಬರ್ ಪ್ರಕಾರ ತಮ್ಮ ಹೆಸರಿಗೆ ಎಷ್ಟು ಎಕರೆ ಜಮೀನಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹಾಗಾದರೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ.

Thank you for reading this post, don't forget to subscribe!

ಹೌದು,  ಬಹುತೇಕ ರೈತರಿಗೆ ತಮ್ಮ ಜಮೀನಿನ ಸರ್ವೆ ನಂಬರ್ ಗೊತ್ತಿರುತ್ತದೆ. ಆದರೆ ಖಾತಾ ನಂಬರ್ ಗೊತ್ತಿರುವುದಿಲ್ಲ. ಇಲ್ಲಿ ಸರ್ವೆ ನಂಬರ್ ಹಾಕಿ ಖಾತಾ ನಂಬರ್ ತಿಳಿದುಕೊಳ್ಳುವುದರ ಜೊತೆಗೆ ಖಾತಾ ನಂಬರ್ ಪ್ರಕಾರ ತಮ್ಮ ಹೆಸರಿಗೆ ಎಷ್ಚು ಎಕರೆ ಜಮೀನಿದೆ ಎಂಬುದನ್ನು ಸಹ ಪರಿಶೀಲಿಸಬಹುದು. ಖಾತಾ ನಂಬರ್ ತಿಳಿದುಕೊಳ್ಳುವುದು ಹೇಗೆ? ಅದೇ ರೀತಿ ಖಾತಾ ನಂಬರ್ ಪ್ರಕಾರ ಜಮೀನು ಎಷ್ಚು ಎಕರೆಯಿದೆ ಎಂಬುದನ್ನು ಚೆಕ್ ಮಾಡುವುದು ಹೇಗಪ್ಪಾ ಅಂದುಕೊಂಡಿದ್ದೀರಾ… ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Check here your and khata number ಖಾತಾ ನಂಬರ್ ಹಾಗೂ ಖಾತಾ ನಂಬರ್ ಪ್ರಕಾರ ಜಮೀನು ಎ ಚೆಕ್ ಮಾಡುವುದು ಹೇಗೆ?

ರೈತರು ತಮ್ಮ ಬಳಿಯಿರುವ ಫೋನ್ ನಲ್ಲೆ ಖಾತಾ ನಂಬರ್ ಹಾಗೂ ಖಾತಾ ನಂಬರ್ ಪ್ರಕಾರ ತಮ್ಮ ಹೆಸರಿಗೆ ಎ ಎಕರೆ ಜಮೀನಿದೆ ಎಂಬುದನ್ನು ಚೆಕ್ ಮಾಡಲು ಈ

https://landrecords.karnataka.gov.in/service64/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಖಾತಾ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು Search by Survey Number ಆಯ್ಕೆ ಮಾಡಿಕೊಳ್ಳಬೇಕು. ನಂತರ ರೈತರು ತಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಹೋಬಳಿ ಆಯ್ಕೆ ಮಾಡಿಕೊಂಡು ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು.

ಇದಾದ ಮೇಲೆ ಸರ್ವೆ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. Go ಮೇಲೆ ಕ್ಲಿಕ್ ಮಾಡಬೇಕು.  Surnoc ಕಾಲಂ ನಲ್ಲಿ ಸ್ಟಾರ್ (*) ಆಯ್ಕೆ ಮಾಡಿಕೊಳ್ಳಬೇಕು. Hissa No. ಕಾಲಂನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

ಅಲ್ಲಿ ಸರ್ವೆ ನಂಬರ್, ಸ್ವಾದೀನದಾರರ ಮತ್ತು ತಂದೆಯ ಹೆಸರು, ವಿಸ್ತೀರ್ಣ ಹಾಗೂ ಖಾತೆ ನಂಬರ್ ಕಾಣುತ್ತದೆ. ರೈತರ ಹೆಸರು ಮುಂದುಗಡೆ ಕಾಣುವ ಖಾತೆ ನಂಬರ್ ರೈತರು ನಮೂದಿಸಿದ ಸರ್ವೆ ನಂಬರಿನ ಖಾತಾ ನಂಬರ್ ಆಗಿರುತ್ತದೆ.

ಖಾತಾ ನಂಬರ್ ಪ್ರಕಾರ ಎಷ್ಚು ಎಕರೆ ಜಮೀನಿದೆ ಎಂಬುದನ್ನು ಚೆಕ್ ಮಾಡಲು ಸರ್ವೆ ನಂಬರ್ ಹಿಂದಿರುವ Select ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಖಾತಾ ನಂಬರ್ ಕಾಣುತ್ತದೆ. ಅದರ ಕೆಳಗಡೆ ಕಾಣುವ Preview ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಖಾತಾ ಅಂದರೆ ಜಮೀನಿನ ಪಟ್ಟಾ ಪುಸ್ತಕದ ಪ್ರತಿ ಕಾಣುತ್ತದೆ. ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ನಿಮ್ಮಸರ್ವೆ ನಂಬರ್ ಹಾಗೂ ನಿಮ್ಮ ಹೆಸರು ಮತ್ತು ತಂದೆಯ ಹೆಸರು ಕಾಣುತ್ತದೆ. ಅದರ ಮುಂದುಗಡೆ ಖಾತಾ ನಂಬರ್ ಪ್ರಕಾರ ನಿಮ್ಮ ಹೆಸರಿಗೆ ಎಷ್ಚು ಎಕರೆ ಜಮೀನಿದೆ ಎಂಬುದು ಕಾಣುತ್ತದೆ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago