ತುಂತುರು ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ರೈತರಿಗೆ ಭರ್ಜರಿ ಅವಕಾಶ ಲಭ್ಯವಾಗಿದೆ. ಕೃಷಿ ಇಲಾಖೆಯ ವತಿಯಿಂದ ತುಂತುರು ನೀರಾವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಿಂದ ನೀರಿನ ವ್ಯರ್ಥ ಕಡಿಮೆಯಾಗುವುದರ ಜೊತೆಗೆ ಬೆಳೆಗಳ ಉತ್ಪಾದಕತೆ ಹೆಚ್ಚಾಗಲಿದೆ. ಸಣ್ಣ ಹಾಗೂ ಅತಿಸಣ್ಣ ರೈತರಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಅರ್ಹ ರೈತರು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯೋಜನೆಗೆ ಸಂಬಂಧಿಸಿದ ಅರ್ಹತೆ, ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ರೈತರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಕಡಿಮೆ ವೆಚ್ಚದಲ್ಲಿ ಆಧುನಿಕ ನೀರಾವರಿ ವ್ಯವಸ್ಥೆ ಅಳವಡಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. 2025-26ನೇ ಸಾಲಿನ ಸೂಕ್ಷ್ಮ ನೀರಾವರಿ ಯೋಜನೆಗಳಡಿ ಹನಿ ನೀರಾರಿ ಹಾಗೂ ತುಂತುರು ನೀರಾವರಿಗೆ ಉಪಕರಣಗಳನ್ನು ಖರೀದಿಸಲು ಶೇ. 90 ರಷ್ಟು ಸಬ್ಸಿಡಿ ನೀಡಲಾಗುವುದು.
ಹೌದು 2025-26ನೇ ಸಾಲಿನ ಸೂಕ್ಷ್ಮ ನೀರಾವರಿ ಯೋಜನೆಗಳ ಪರಿಶಿಷ್ಟ ಜಾತಿ ರೈತರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರದ ಹೊಸ ಜಿಎಸ್.ಟಿ ಕಾಯ್ದೆಯನ್ವಯ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಉಪಕರಣಗಳ ಬೆಲೆ, ದರ ಕಡಿಮೆಯಾಗಿದ್ದು, ಪ್ರಸಕ್ತ, ಸಾಲಿನಲ್ಲಿ ಒಂದು ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಘಟಕ ಅಳವಡಿಸಿಕೊಂಡ ಪರಿಶಿಷ್ಟ ಜಾತಿ ರೈತರು ಹೆಚ್ಚುವರಿಯಾಗಿ ಇನ್ನೊಂದು ಹೆಕ್ಟೇರ್ ಪ್ರದೇಶಕ್ಕೆ ಸೂಕ್ತ ನೀರಾವರಿ ಘಟಕ ಅಳವಡಿಸಿಕೊಳ್ಳಲು ಅರ್ಹರಾಗಿರುತ್ತಾರೆ.
ಗದಗ ಜಿಲ್ಲೆಯ ಆಸಕ್ತ ಪರಿಶಿಷ್ಟ ಜಾತಿ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫಲಾನುಭವಿಗಳು ರೈತರಾಗಿದ್ದು, ಜಮೀನು ಅವರ ಹೆಸರಿನಲ್ಲಿರಬೇಕು. ಜಂಟಿ ಖಾತೆಯಲ್ಲಿದ್ದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ತರ ಪಡೆದಿರಬೇಕು. ಫಲಾನುಭವಿಗಳು ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಾಗಿರಬೇಕು. ಸೂಕ್ಷ್ಮ ನೀರಾವರಿ ಅಳವಡಿಸಿದ ನಂತರ ತೋಟಗಾರಿಕೆ ಬೆಳೆಗಳನ್ನೇ ಬೆಳೆಯಬೇಕು. ಫಲಾನುಭವಿಗಳು ನೀರಾವರಿ ಮೂಲವನ್ನು ಹೊಂದಿರಬೇಕು. ಎಲ್ಲಾ ವರ್ಗದ ರೈತರಿಗೆ ಮೊದಲ ಗರಿಷ್ಠ 2 ಹೆಕ್ಟೇರ್ ವರೆಗೆ ಶೇ. 90 ರಷ್ಟು ಸಹಾಯಧನ ನೀಡಲು ಅವಕಾಶವಿರುತ್ತದೆ. ಪರಿಶಿಷ್ಟ ಜಾತಿ ದವರಾಗಿದ್ದರೆ ಆರ್.ಡಿ ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಫ್ರೂಟ್ಸ್ ಐಡಿ ಹೊಂದಿರಬೇಕು. ರೈತರ ಬಳಿ ಆಧಾರ್ ಕಾರ್ಡ್ ಹೊಂದಿರಬೇಕು.
2025.26ನೇ ಸಾಲಿನಲ್ಲಿ ಹಿರೇಕೇರೂರ ಮತ್ತು ರಟ್ಟೀಹಳ್ಳಿ ತಾಲೂಕಿನ ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ಅರ್ಜಿ ಸಲ್ಲಿಸಿದ ಎಲ್ಲಾ ರೈತರಿಗೆ ಅವಕಾಶವಿರುತ್ತದೆ. ಈ ಯೋಜನೆಯಡಿ ರೈತರು ಕೃಷಿ ಕೊಂಡ, ಟಾರ್ಪಲಿನ್, ಲೈನಿಂಗ್, ಡೀಸೆಲ್ ಇಂಜಿನ್, ಬದು ನಿರ್ಮಾಣ, ತುಂತುರು ನೀರಾವರಿ ಘಟಕ ಮತ್ತು ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. .ಹೊಸದಾಗಿ ಅರ್ಜಿ ಸಲ್ಲಿಸುವ ಆಸಕ್ತ ರೈತ ಬಾಂಧವರು ಕೃಷಿ ಭಾಗ್ಯ ಯೋಜನೆಯಡಿ ಪ್ರಯೋಜನ ಪಡೆದುಕೊಳ್ಳಲು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಮಾರುತಿ ಅಂಗರಗಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಆಧಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್ ನಂತಹ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಬ್ಸಿಡಿ ಪಡೆಯಬಹುದು. ಇದು ಮಳೆ ನೀರು ಸಂಗ್ರಹಿಸಿ ಬೇಸಿಗೆಯಲ್ಲಿ ನೀರಾವರಿಗೆ ಅನುಕೂಲವಾಗುವುದು.
ಮಳೆ ನೀರನ್ನು ಸಂಗ್ರಹಿಸಿ, ಬೇಸಿಗೆ ಕಾಲದಲ್ಲಿ ತೋಟಗಾರಿಕೆ ಬೆಳೆಗಳಿಗೆ ನೀರು ಒದಗಿಸುವುದು. ಮಳೆಗಾಲದಲ್ಲಿ ಹೆಚ್ಚುವರಿ ನೀರನ್ನು ಸಂಗ್ರಹಿಸಿ ಬರಗಾಲದಲ್ಲಿ ಉಪಯೋಗಿಸುವುದು. ಯೋಜನೆಗಳು ಕಾಲಕಾಲಕ್ಕೆ ಬದಲಾಗುವುದು. ಆದ್ದರಿಂದ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಿ ನಿಖರ ಮಾಹಿತಿ ಪಡೆಯಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…