Categories: information

ಸಾರ್ವಜನಿಕರೇ ಗಮನಿಸಿ ; ನಾಳೆ ದೇಶಾದ್ಯಂತ ‘ಮೆಡಿಕಲ್ ಶಾಪ್’ ಗಳು ಬಂದ್ |Medical Shop Closed

ಸಾರ್ವಜನಿಕರೇ ಗಮನಿಸಿ! ನಾಳೆ ದೇಶಾದ್ಯಂತ ಹಲವು ಮೆಡಿಕಲ್ ಶಾಪ್‌ಗಳು ಬಂದ್ ಆಗಲಿದ್ದು, ಔಷಧಿ ಖರೀದಿಸಲು ತೆರಳುವ ಮುನ್ನ ನಿಮ್ಮ ಪ್ರದೇಶದ ಅಂಗಡಿಗಳ ಸ್ಥಿತಿಯನ್ನು ಪರಿಶೀಲಿಸಿ. ತುರ್ತು ಅಗತ್ಯಗಳಿದ್ದರೆ ಇಂದೇ ಔಷಧಿಗಳನ್ನು ಖರೀದಿಸಿಕೊಳ್ಳುವುದು ಒಳಿತು.

Spread the love

ಔಷಧಗಳ ಆನ್‌ಲೈನ್ ಮಾರಾಟ (Online Pharmacy) ಮತ್ತು ಕಾರ್ಪೊರೇಟ್ ಕಂಪನಿಗಳ ಅನಾರೋಗ್ಯಕರ ಸ್ಪರ್ಧೆಯನ್ನು ವಿರೋಧಿಸಿ ಮೇ 20 ರಂದು ದೇಶಾದ್ಯಂತ 24 ಗಂಟೆಗಳ ಕಾಲ ಮೆಡಿಕಲ್ ಅಂಗಡಿಗಳು ಸಂಪೂರ್ಣ ಬಂದ್ ಆಗಲಿವೆ.

Thank you for reading this post, don't forget to subscribe!

ಹೌದು. ‘ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್’ (AIOCD) ಕರೆ ನೀಡಿರುವ ಈ ಮುಷ್ಕರಕ್ಕೆ ‘ಕರ್ನಾಟಕ ರಾಜ್ಯ ಕೆಮಿಸ್ಟ್ಸ್ ಮತ್ತು ಡ್ರಗಿಸ್ಟ್ಸ್ ಅಸೋಸಿಯೇಶನ್’ ಕೂಡ ಬೆಂಬಲ ವ್ಯಕ್ತಪಡಿಸಿದ್ದು, ಬೆಂಗಳೂರಿನ 26,000ಕ್ಕೂ ಹೆಚ್ಚು ಶಾಪ್‌ಗಳು ಸೇರಿದಂತೆ ರಾಜ್ಯಾದ್ಯಂತ ಔಷಧ ವ್ಯಾಪಾರ ಸ್ಥಗಿತಗೊಳ್ಳಲಿದೆ.

ಇ-ಪೋರ್ಟಲ್‌ಗಳಲ್ಲಿ ನಕಲಿ ಪ್ರಿಸ್ಕ್ರಿಪ್ಷನ್ ಬಳಸಿ ನಿಯಮಬಾಹಿರವಾಗಿ ಔಷಧ ವಿತರಿಸಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿರುವ ವ್ಯಾಪಾರಸ್ಥರು, ಸಾರ್ವಜನಿಕರು ತಮಗೆ ಅಗತ್ಯವಿರುವ ತುರ್ತು ಮತ್ತು ಜೀವ ರಕ್ಷಕ ಔಷಧಗಳನ್ನು ಮುಂಚಿತವಾಗಿಯೇ ಖರೀದಿಸಿಟ್ಟುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಔಷಧಗಳ ಆನ್‌ಲೈನ್ ಮಾರಾಟ ಮತ್ತು ಕಾರ್ಪೊರೇಟ್ ಕಂಪನಿಗಳ ಅನಾರೋಗ್ಯಕರ ಸ್ಪರ್ಧೆಯನ್ನು ವಿರೋಧಿಸಿ ಮೇ 20 ರಂದು ದೇಶಾದ್ಯಂತ 24 ಗಂಟೆಗಳ ಕಾಲ ಮೆಡಿಕಲ್ ಅಂಗಡಿಗಳು ಸಂಪೂರ್ಣ ಬಂದ್ ಆಗಲಿವೆ.’ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್’ (AIOCD) ಮತ್ತು ‘ಕರ್ನಾಟಕ ರಾಜ್ಯ ಕೆಮಿಸ್ಟ್ಸ್ ಮತ್ತು ಡ್ರಗಿಸ್ಟ್ಸ್ ಅಸೋಸಿಯೇಶನ್’ (KCDA) ಈ ಮುಷ್ಕರಕ್ಕೆ ಕರೆ ನೀಡಿವೆ.ಬೆಂಗಳೂರಿನ 26,000ಕ್ಕೂ ಹೆಚ್ಚು ಮೆಡಿಕಲ್ ಶಾಪ್‌ಗಳು ಸೇರಿದಂತೆ ರಾಜ್ಯದ ಹಾಗೂ ದೇಶದ ಲಕ್ಷಾಂತರ ಔಷಧ ಅಂಗಡಿಗಳು ಬಂದ್‌ಗೆ ಬೆಂಬಲ ಸೂಚಿಸಿವೆ.ಸಾರ್ವಜನಿಕರು ತಮಗೆ ಅಗತ್ಯವಿರುವ ತುರ್ತು ಔಷಧಗಳನ್ನು ಮುಂಚಿತವಾಗಿಯೇ ಖರೀದಿಸಿ ಇಟ್ಟುಕೊಳ್ಳುವಂತೆ ಔಷಧ ವ್ಯಾಪಾರಸ್ಥರ ಸಂಘ ಮನವಿ ಮಾಡಿದೆ.

ಪ್ರತಿಭಟನೆಗೆ ಮುಖ್ಯ ಕಾರಣಗಳೇನು?

ಆನ್‌ಲೈನ್ ಮಾರಾಟದ ಹೊಡೆತ: ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಕೇಂದ್ರ ಸರ್ಕಾರವು ಆನ್‌ಲೈನ್ ವೇದಿಕೆಗಳಲ್ಲಿ ಔಷಧ ಮಾರಾಟಕ್ಕೆ ಅನುಮತಿ ನೀಡಿತ್ತು. ಪ್ರಸ್ತುತ ಆನ್‌ಲೈನ್ ಫಾರ್ಮಸಿಗಳು ಭಾರಿ ರಿಯಾಯಿತಿ (ಡಿಸ್ಕೌಂಟ್) ದರದಲ್ಲಿ ಮನೆಗೇ ತಲುಪಿಸುತ್ತಿರುವುದರಿಂದ ಸಾಂಪ್ರದಾಯಿಕ ಮತ್ತು ಸ್ಥಳೀಯ ಔಷಧ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ನಕಲಿ ಪ್ರಿಸ್ಕ್ರಿಪ್ಷನ್ ಆತಂಕ: ಇ-ಪೋರ್ಟಲ್‌ಗಳಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನ ಬಳಸಿ ನಕಲಿ ವೈದ್ಯರ ಪ್ರಿಸ್ಕ್ರಿಪ್ಷನ್‌ಗಳನ್ನು ಸೃಷ್ಟಿಸಿ ಆಯಂಟಿಬಯಾಟಿಕ್ ಹಾಗೂ ವ್ಯಸನಕ್ಕೆ ಕಾರಣವಾಗುವ ಔಷಧಗಳನ್ನು ಸುಲಭವಾಗಿ ಪಡೆಯಲಾಗುತ್ತಿದೆ. ಇದು ಯುವ ಪೀಳಿಗೆಯನ್ನು ದುಶ್ಚಟಗಳಿಗೆ ತಳ್ಳುವ ಅಪಾಯ ಹೊಂದಿದೆ.
ನಿಯಮಗಳ ಉಲ್ಲಂಘನೆ: ಔಷಧಗಳು ಸಾಮಾನ್ಯ ಗ್ರಾಹಕ ವಸ್ತುಗಳಲ್ಲ. ಅವುಗಳನ್ನು ಅರ್ಹ ಫಾರ್ಮಾಸಿಸ್ಟ್‌ಗಳ ಸಮ್ಮುಖದಲ್ಲಿ ಸುರಕ್ಷತಾ ನಿಯಮಗಳೊಂದಿಗೆ ನೀಡಬೇಕು. ಆದರೆ ಆನ್‌ಲೈನ್‌ನಲ್ಲಿ ಇಂತಹ ಯಾವುದೇ ಕಟ್ಟುನಿಟ್ಟಿನ ನಿಯಮಗಳು ಪಾಲನೆಯಾಗುತ್ತಿಲ್ಲ.
ಮಾಹಿತಿ ಕೊರತೆ: ಸ್ಥಳೀಯ ಅಂಗಡಿಗಳು ಯಾರಿಗೆ ಎಷ್ಟು ಔಷಧ ಮಾರಾಟ ಮಾಡಿದ್ದೇವೆ ಎಂಬ ಮಾಹಿತಿಯನ್ನು ಸರ್ಕಾರಕ್ಕೆ ನೀಡುತ್ತವೆ, ಆದರೆ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಇಂತಹ ಯಾವುದೇ ನಿಖರ ಮಾಹಿತಿಯನ್ನು ಹಂಚಿಕೊಳ್ಳುತ್ತಿಲ್ಲ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಿಎಸ್‌ಆರ್ 817 ಹಾಗೂ ಕೋವಿಡ್ ಅವಧಿಯಲ್ಲಿ ತರಲಾಗಿದ್ದ ನಿಯಮಗಳನ್ನು ತಕ್ಷಣ ಹಿಂಪಡೆಯಬೇಕು. ಕಾರ್ಪೊರೇಟ್ ಕಂಪನಿಗಳ ತೀವ್ರ ರಿಯಾಯಿತಿ ತಡೆಗಟ್ಟಲು ‘ಲೆವೆಲ್ ಪ್ಲೇಯಿಂಗ್ ಫೀಲ್ಡ್’ ನೀತಿ ಜಾರಿಗೊಳಿಸಬೇಕು. ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ವ್ಯಾಪಾರಿಗಳು ಎಚ್ಚರಿಸಿದ್ದಾರೆ. ಮೇ 20 ರಂದು ಔಷಧ ಅಂಗಡಿಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ.

ಓದುಗರಲ್ಲಿ ವಿನಂತಿ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

57 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

57 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

57 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

57 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

57 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

57 years ago