ಇದೀಗ ರಾಜ್ಯ ಸರ್ಕಾರದ ತೋಟಗಾರಿಕಾ ಇಲಾಖೆಯ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟವೇಟರ್ ಖರೀದಿಸಲು ಬಯಸುವ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ. ಇದರ ಅಡಿಯಲ್ಲಿ ರೈತರಿಗೆ ಶೇಕಡಾ 90 ರಷ್ಟು ಸಬ್ಸಿಡಿ ಆಧಾರದಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟವೇಟರ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ಅಂಕಣದಲ್ಲಿ ನಾವು ರಾಜ್ಯ ಸರ್ಕಾರದಿಂದ ಇತ್ತೀಚೆಗೆ ಕುರಿ ಸಾಕಾಣಿಕೆ ಮಾಡುವವರಿಗೆ ಇರುವ ಸಬ್ಸಿಡಿ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದ್ದೇವು.
Thank you for reading this post, don't forget to subscribe!ಈ ಅಂಕಣದಲ್ಲಿ ನಾವು ತೋಟಗಾರಿಕಾ ಇಲಾಖೆ ವತಿಯಿಂದ ಸಿಗಲಿರುವ ಮಹತ್ವದ ಸಬ್ಸಿಡಿಗಳಾದ ಪವರ್ ಟಿಲ್ಲರ್,ರೋಟೋವೇಟರ್,ಮಿನಿ ಟ್ರ್ಯಾಕ್ಟರ್ ಸಬ್ಸಿಡಿ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ರೈತರೇ ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗೆ ತಂತ್ರಜ್ಞಾನದ ಮೊರೆ ಹೋಗುತ್ತಿದ್ದೂ, ಇದು ಇತ್ತೀಚಿನ ಹಲವು ಯೋಜನೆಗಳಲ್ಲಿ ನಿಮ್ಮ ಗಮನಕ್ಕೆ ಬಂದಿರಬಹುದು.
ಇನ್ನು ಕೃಷಿ ವಿಚಾರದಲ್ಲಿ ಅದರಲ್ಲೂ ತೋಟಗಾರಿಕೆ ಬೆಳೆ ಮಾಡುವ ರೈತರಿಗೆ ತಂತ್ರಜ್ಞಾನ ನಿಜಕ್ಕೂ ಒಂದು ವರದಾನವಾಗಿದೆ ಎಂದರೆ ತಪ್ಪೇನಿಲ್ಲ. ಏಕೆಂದರೆ ಬದಲಾಗುತ್ತಿರುವ ಕೃಷಿ ಪದ್ಧತಿಯಲ್ಲಿ ಹಾಗೂ ಯುವಪೀಳಿಗೆಯ ಕೃಷಿ ಬಗ್ಗೆ ಆಸಕ್ತಿ ಇಲ್ಲದೇ ಇರುವ ಕಾರಣ ತೋಟಗಾರಿಕೆ ಬೆಳೆ ಅಷ್ಟೇ ಅಲ್ಲದೆ ಇತರೆ ಗದ್ದೆಗಳಲ್ಲೂ ಕೆಲಸ ಮಾಡಲು ಆಳುಗಳ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಈ ಸಮಸ್ಯೆಗೆ ಪರಿಹಾರವಾಗಿ ಕೃಷಿ ವಿಜ್ಞಾನಿಗಳು ತೋಟಗಾರಿಕಾ ಬೆಳೆಗಳನ್ನು ಬೆಳೆಯುವ ರೈತರಿಗಾಗಿ ಹಲವು ಯಂತ್ರೋಪಕರಣಗಳನ್ನು ಕಂಡು ಹಿಡಿದಿದ್ದಾರೆ. ಇದರಲ್ಲಿ ಪ್ರಮುಖವಾದ ಯಂತ್ರೋಪಕರಣಗಳು ಎಂದರೆ ಅದು ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೊಟೊವೇಟರ್.
ಹೌದು ರೈತ ಮಿತ್ರರೇ, ಈ ಯಂತ್ರೋಪಕರಣಗಳು ಬಂದ ನಂತರ ತೋಟಗಾರಿಕಾ ಬೆಳೆಗಳನ್ನು ಬೆಳೆಯುವ ರೈತರ ಆದಾಯ ಹೆಚ್ಚಿದ್ದು, ಅವರ ಇನ್ನಿತರ ಕೆಲಸದ ಆಳುಗಳ ಸಮಸ್ಯೆಗೂ ಪರಿಹಾರ ಸಿಕ್ಕಿದೆ. ಈ ಕಾರಣದಿಂದ ಸರ್ಕಾರವೂ ರೈತರಿಗೆ ಹೆಚ್ಚು ಹೆಚ್ಚು ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟವೇಟರ್ ಬಳಸುವಂತೆ ಪ್ರೇರೇಪಣೆ ನೀಡಲು ಸಬ್ಸಿಡಿ (Mini tractor subsidy) ನೀಡುತ್ತಿದೆ.
ಇದೀಗ ರಾಜ್ಯ ಸರ್ಕಾರದ ತೋಟಗಾರಿಕಾ ಇಲಾಖೆಯ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟವೇಟರ್ ಖರೀದಿಸಲು ಬಯಸುವ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ. ಇದರ ಅಡಿಯಲ್ಲಿ ರೈತರಿಗೆ ಶೇಕಡಾ 90 ರಷ್ಟು ಸಬ್ಸಿಡಿ ಆಧಾರದಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟವೇಟರ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ರೈತರ ಆದಾಯವನ್ನು ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ನೀಡಿರುವ ಸೂಚನೆಯಂತೆ ರಾಜ್ಯ ಸರ್ಕಾರವು ಇದೀಗ ರೈತರಿಗೆ ಯಂತ್ರೋಪಕರಣಗಳನ್ನು ಸಬ್ಸಿಡಿ ರೂಪದಲ್ಲಿ ನೀಡುತ್ತಿದೆ. ಅಂತೆಯೇ ಇದೀಗ ತೋಟಗಾರಿಕಾ ಇಲಾಖೆ ಯಂತ್ರೋಪಕರಣಗಳ ಮೇಲೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಿದೆ. ಸಬ್ಸಿಡಿಗಳ ಮಾಹಿತಿ ಇಲ್ಲಿದೆ ನೋಡಿ.
1.ಪವರ್ ಟಿಲ್ಲರ್ : ಇದರ ಮೇಲೆ ರಾಜ್ಯ ಸರ್ಕಾರವು ಶೇಕಡಾ 50 ರಷ್ಟು ಸಬ್ಸಿಡಿ ನೀಡುತ್ತಿದ್ದು, ರೈತರು 75,200 ರೂಪಾಯಿವರೆಗೆ ಸಹಾಯಧನವನ್ನು ಪಡೆಯಬಹುದು.
2. ಟ್ರಾಕ್ಟರ್ ಚಾಲಿತ ಎಂಬಿ ಪ್ಲೋ: ಸಾಮಾನ್ಯ ವರ್ಗದವರಿಗೆ 14,100 ರೂ, ರಿವರ್ಸಿಬಲ್ ಎಂ.ಬಿ. ಫ್ಲೋ ಗೆ 25,800 ರೂ ಸಬ್ಸಿಡಿ ದೊರೆಯುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಎಂ.ಬಿ. ಫ್ಲೋ 25,830 ರೂ ರಿವರ್ಸಿಬಲ್ ಎಂ.ಬಿ. ಫ್ಲೋ ಗೆ 51,300 ರೂ ಅರ್ಥಿಕ ನೆರವು ಪಡೆಯಬಹುದು.
3. ಮಿನಿ ಟ್ರಾಕ್ಟರ್: ಇದರ ಮೇಲೆ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 3 ಲಕ್ಷದವರೆಗೆ ಸಬ್ಸಿಡಿ ನೀಡುತ್ತಿದೆ. ಇನ್ನು ಸಾಮಾನ್ಯ ವರ್ಗದ ಜನರಿಗೆ 75,000 ರೂಪಾಯಿ ಸಹಾಯಧನ ನೀಡುತ್ತಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಮ್ಮ ಅರ್ಜಿ ಸಲ್ಲಿಸಿ ಸಬ್ಸಿಡಿ ಪಡೆಯಿರಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…
ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…
ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…
ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ನಿಮ್ಮ ರೇಷನ್ ಕಾರ್ಡ್ ಬಿಪಿಎಲ್ (BPL Card) ಇದೆಯೋ ಅಥವಾ ಎಪಿಎಲ್ (APL Card) ಆಗಿ ಪರಿವರ್ತನೆ ಆಗಿದೆಯೋ ಎಂಬುದನ್ನು…