ಮಿನಿ ಟ್ರ್ಯಾಕ್ಟರ್ ಖರೀದಿಗೆ ಶೇ.50 ರಷ್ಟು ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ಅಂಕಣದಲ್ಲಿ ನಾವು ರಾಜ್ಯ ಸರ್ಕಾರದಿಂದ ಇತ್ತೀಚೆಗೆ ಕುರಿ ಸಾಕಾಣಿಕೆ ಮಾಡುವವರಿಗೆ ಇರುವ ಸಬ್ಸಿಡಿ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದ್ದೇವು.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ಅಂಕಣದಲ್ಲಿ ನಾವು ರಾಜ್ಯ ಸರ್ಕಾರದಿಂದ ಇತ್ತೀಚೆಗೆ ಕುರಿ ಸಾಕಾಣಿಕೆ ಮಾಡುವವರಿಗೆ ಇರುವ ಸಬ್ಸಿಡಿ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದ್ದೇವು.

Thank you for reading this post, don't forget to subscribe!

ಈ ಅಂಕಣದಲ್ಲಿ ನಾವು ತೋಟಗಾರಿಕಾ ಇಲಾಖೆ ವತಿಯಿಂದ ಸಿಗಲಿರುವ ಮಹತ್ವದ ಸಬ್ಸಿಡಿಗಳಲ್ಲಿ ಒಂದಾದ ಮಿನಿ ಟ್ರ್ಯಾಕ್ಟರ್ ಸಬ್ಸಿಡಿ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಇದನ್ನೂ ಓದಿ: ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ!

ಆತ್ಮೀಯ ರೈತರೇ ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗೆ ತಂತ್ರಜ್ಞಾನದ ಮೊರೆ ಹೋಗುತ್ತಿದ್ದೂ, ಇದು ಇತ್ತೀಚಿನ ಹಲವು ಯೋಜನೆಗಳಲ್ಲಿ ನಿಮ್ಮ ಗಮನಕ್ಕೆ ಬಂದಿರಬಹುದು.

ಇನ್ನು ಕೃಷಿ ವಿಚಾರದಲ್ಲಿ ಅದರಲ್ಲೂ ತೋಟಗಾರಿಕೆ ಬೆಳೆ ಮಾಡುವ ರೈತರಿಗೆ ತಂತ್ರಜ್ಞಾನ ನಿಜಕ್ಕೂ ಒಂದು ವರದಾನವಾಗಿದೆ ಎಂದರೆ ತಪ್ಪೇನಿಲ್ಲ. ಏಕೆಂದರೆ ಬದಲಾಗುತ್ತಿರುವ ಕೃಷಿ ಪದ್ಧತಿಯಲ್ಲಿ ಹಾಗೂ ಯುವಪೀಳಿಗೆಯ ಕೃಷಿ ಬಗ್ಗೆ ಆಸಕ್ತಿ ಇಲ್ಲದೇ ಇರುವ ಕಾರಣ ತೋಟಗಾರಿಕೆ ಬೆಳೆ ಅಷ್ಟೇ ಅಲ್ಲದೆ ಇತರೆ ಗದ್ದೆಗಳಲ್ಲೂ ಕೆಲಸ ಮಾಡಲು ಆಳುಗಳ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಇದನ್ನೂ ಓದಿ: ಬರ ಪರಿಹಾರ ಹಣ: ಇಲ್ಲಿಯವರೆಗೆ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಈ ಸಮಸ್ಯೆಗೆ ಪರಿಹಾರವಾಗಿ ಕೃಷಿ ವಿಜ್ಞಾನಿಗಳು ತೋಟಗಾರಿಕಾ ಬೆಳೆಗಳನ್ನು ಬೆಳೆಯುವ ರೈತರಿಗಾಗಿ ಹಲವು ಯಂತ್ರೋಪಕರಣಗಳನ್ನು ಕಂಡು ಹಿಡಿದಿದ್ದಾರೆ. ಇದರಲ್ಲಿ ಪ್ರಮುಖವಾದ ಯಂತ್ರೋಪಕರಣ ಎಂದರೆ ಅದು ಮಿನಿ ಟ್ರ್ಯಾಕ್ಟರ್.

ಹೌದು ರೈತ ಮಿತ್ರರೇ, ಮಿನಿ ಟ್ರ್ಯಾಕ್ಟರ್ ಬಂದ ನಂತರ ತೋಟಗಾರಿಕಾ ಬೆಳೆಗಳನ್ನು ಬೆಳೆಯುವ ರೈತರ ಆದಾಯ ಹೆಚ್ಚಿದ್ದು, ಅವರ ಇನ್ನಿತರ ಕೆಲಸದ ಆಳುಗಳ ಸಮಸ್ಯೆಗೂ ಪರಿಹಾರ ಸಿಕ್ಕಿದೆ. ಈ ಕಾರಣದಿಂದ ಸರ್ಕಾರವೂ ರೈತರಿಗೆ ಹೆಚ್ಚು ಹೆಚ್ಚು ಮಿನಿ ಟ್ರ್ಯಾಕ್ಟರ್ ಬಳಸುವಂತೆ ಪ್ರೇರೇಪಣೆ ನೀಡಲು ಸಬ್ಸಿಡಿ ನೀಡುತ್ತಿದೆ. ಇದೀಗ ರಾಜ್ಯ ಸರ್ಕಾರದ ತೋಟಗಾರಿಕಾ ಇಲಾಖೆಯ ಅಡಿಯಲ್ಲಿ ಮಿನಿ ಟ್ರ್ಯಾಕ್ಟರ್ ಖರೀದಿಸಲು ಬಯಸುವ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ. ಇದರ ಅಡಿಯಲ್ಲಿ ರೈತರಿಗೆ ಶೇಕಡಾ 50 ರಷ್ಟು ಸಬ್ಸಿಡಿ ಆಧಾರದಲ್ಲಿ ಮಿನಿ ಟ್ರ್ಯಾಕ್ಟರ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ವರ್ಷಕ್ಕೆ 6,000 ರೂ.ಬದಲು 8,000 ರೂ. ಹಣ ನೀಡಲು ಮುಂದಾದ ಕೇಂದ್ರ ಸರ್ಕಾರ! ಯಾವಾಗಿನಿಂದ ಬರುತ್ತೆ?

ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ?

  • ಅರ್ಜಿ ನಮೂನೆ
  • ಹೊಲದ ಉತಾರಿ
  • ಆಧಾರ್ ಕಾರ್ಡ್ ಝಾರಕ್ಸ್
  • ಪಾಸ್ ಬುಕ್ ಝೆರಾಕ್ಸ್
  • ಇತ್ತೀಚಿನ ಭಾವಚಿತ್ರ
  • ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮಾತ್ರ)

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago