ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ, ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಪ್ರವೇಶವಾಗಿದ್ದು, ಇದೀಗ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದೆ. ಒಂದು ಕಡೆ ಈ ವರುಣ ರೈತರ ಮುಖದಲ್ಲಿ ಮಂದಹಾಸ ಉಂಟು ಮಾಡುತ್ತಿದ್ದರೆ, ಇನ್ನೊಂದು ಕಡೆ ಭಾರತೀಯ ಹವಾಮಾನ ಇಲಾಖೆ ಭಾರಿ ಎಚ್ಚರಿಕೆ ನೀಡಿದೆ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ, ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಪ್ರವೇಶವಾಗಿದ್ದು, ಇದೀಗ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದೆ. ಒಂದು ಕಡೆ ಈ ವರುಣ ರೈತರ ಮುಖದಲ್ಲಿ ಮಂದಹಾಸ ಉಂಟು ಮಾಡುತ್ತಿದ್ದರೆ, ಇನ್ನೊಂದು ಕಡೆ ಭಾರತೀಯ ಹವಾಮಾನ ಇಲಾಖೆ ಭಾರಿ ಎಚ್ಚರಿಕೆ ನೀಡಿದೆ.
Thank you for reading this post, don't forget to subscribe!ಹೌದು ರೈತ ಮಿತ್ರರೇ, ಈಗಾಗಲೇ ಜೂನ್ 1 ರಿಂದ ಇಲ್ಲಿಯವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಇದೇ ರೀತಿಯ ವಾತಾವರಣ ಮುಂದುವರೆದರೆ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯ ವಾತಾವರಣ ನಿರ್ಮಾಣವಾಗಲಿದೆ. ಅಲ್ಲದೆ ಕಳೆದ 3-4 ದಿನದಿಂದ ಬ್ರೇಕ್ ತೆಗೆದುಕೊಂಡಿದ್ದ ಮಳೆರಾಯ ಇದೀಗ ಮತ್ತೊಮ್ಮೆ ಗುಡುಗು, ಮಿಂಚು ಸಹಿತ ಘರ್ಜಿಸಲು ಸಜ್ಜಾಗಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ದೇಶದ 9.3 ಕೋಟಿ ರೈತರ ಖಾತೆಗೆ ಇವತ್ತು 17 ನೇ ಕಂತಿನ ಹಣ ಜಮಾ ! ನಿಮ್ಮ ಹಣ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಹೌದು ಸ್ನೇಹಿತರೆ, ಮಳೆರಾಯನ ಅಬ್ಬರ ದಿನಂದಿಂದ ದಿನಕ್ಕೆ ಹೆಚ್ಚಲಿದ್ದು, ಮುಂದಿನ 3 ದಿನ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಆದ ಕಾರಣ ರೈತರು ಹಾಗೂ ಸಾರ್ವಜನಿಕರು ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಈ ಮೂಲಕ ಹವಾಮಾನ ಇಲಾಖೆ ತಿಳಿಸಿದೆ. ಗಂಟೆಗೆ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಇದು ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡುವ ಸಂಭವ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ.
ಇದನ್ನೂ ಓದಿ: ರೇಷನ್ ಕಾರ್ಡ್: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ದಿನಾಂಕ ಫಿಕ್ಸ್? ಯಾವ ಯಾವ ದಾಖಲೆಗಳು ಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಹಾಗಾಗಿ ಸಾಧ್ಯವಾದಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಒಳ್ಳೆಯದು ಎಂದು ಇಲಾಖೆ ತಿಳಿಸಿದೆ. ಇನ್ನು ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ ರೈತರು ತಮ್ಮ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, ಬಿತ್ತನೆಯ ಕಾರ್ಯ ಭರದಿಂದ ಸಾಗಿದೆ. ಈ ನಡುವೆ ರೈತರಿಗೂ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ತಿಳಿಸಿದೆ.
ಭಾರತಿಯ ಹವಾಮಾನ ಇಲಾಖೆಯ ವರದಿ ಪ್ರಕಾರ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ,ಉಡುಪಿ ಜಿಲ್ಲೆಗಳಲ್ಲಿ ಎಂದಿಗಿಂತ ಹೆಚ್ಚು ಮಳೆಯಾಗಲಿದೆ. ಜೊತೆಗೆ ದಕ್ಷಿಣ ಒಳನಾಡು ಪ್ರದೇಶಗಳಾದ ಕೊಡಗು,ಶಿವಮೊಗ್ಗ, ಚಿಕ್ಕ ಮಗಳೂರು,ಮೈಸೂರು, ಚಾಮರಾಜನಗರ, ತುಮಕೂರು, ಹಾಸನ,ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಬರ ಪರಿಹಾರ: 17 ಲಕ್ಷ ರೈತರ ಖಾತೆಗೆ 3,000 ಹಣ ಜಮಾ! ನಿಮಗೂ ಬಂತಾ ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಹಾಗಾಗಿ ಈ ಜಿಲ್ಲೆಯ ರೈತರು,ಸಾರ್ವಜನಿಕರು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹವಾಮಾನ ಇಲಾಖೆ ಆಗ್ರಹಿಸಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…