WhatsApp Group                             Join Now            
   
                    Telegram Group                             Join Now            
Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ, ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಪ್ರವೇಶವಾಗಿದ್ದು, ಇದೀಗ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದೆ. ಒಂದು ಕಡೆ ಈ ವರುಣ ರೈತರ ಮುಖದಲ್ಲಿ ಮಂದಹಾಸ ಉಂಟು ಮಾಡುತ್ತಿದ್ದರೆ, ಇನ್ನೊಂದು ಕಡೆ ಭಾರತೀಯ ಹವಾಮಾನ ಇಲಾಖೆ ಭಾರಿ ಎಚ್ಚರಿಕೆ ನೀಡಿದೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಹೌದು ರೈತ ಮಿತ್ರರೇ, ಈಗಾಗಲೇ ಜೂನ್ 1 ರಿಂದ ಇಲ್ಲಿಯವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಇದೇ ರೀತಿಯ ವಾತಾವರಣ ಮುಂದುವರೆದರೆ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯ ವಾತಾವರಣ ನಿರ್ಮಾಣವಾಗಲಿದೆ.

ಇದನ್ನೂ ಓದಿ: ಸಾಲಮನ್ನಾ: ರೈತರ 2 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಲು ಮುಂದಾದ ಸರ್ಕಾರ| ಯಾವ ಯಾವ ರೈತರ ಸಾಲ ಮನ್ನಾ ಆಗಲಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಅಲ್ಲದೆ ಕಳೆದ ಕೆಲವು ದಿನದಿಂದ ಬ್ರೇಕ್ ತೆಗೆದುಕೊಂಡಿದ್ದ ಮಳೆರಾಯ ಇದೀಗ ಮತ್ತೊಮ್ಮೆ ಗುಡುಗು, ಮಿಂಚು ಸಹಿತ ಘರ್ಜಿಸಲು ಸಜ್ಜಾಗಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು ರೈತ ಬಾಂಧವರೇ ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾರಿ ಗುಡುಗು,ಮಿಂಚು ಸಹಿತ ಮಳೆಯ ಮುನ್ಸೂಚನೆ ಇದ್ದು, ರೈತರು ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಇರಲು ಸೂಚಿಸಲಾಗಿದೆ.

ಇದನ್ನೂ ಓದಿ: ಬೆಳೆ ಪರಿಹಾರ ಹಣ: ಹಣ ಜಮಾ ಆಗಿರುವ ಎಲ್ಲಾ ರೈತರ ಪಟ್ಟಿ ಬಿಡುಗಡೆ ! ಇದರಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಯಾವ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ?

      
                    WhatsApp Group                             Join Now            
   
                    Telegram Group                             Join Now            

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ ಜಿಲ್ಲೆಗಳು ಹೆಚ್ಚಿನ ಮಳೆಯನ್ನು ಪಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಜಿಲ್ಲೆಯಲ್ಲಿರುವ ಎಲ್ಲಾ ಅಂಗನವಾಡಿಗಳಿಗೆ ಕೂಡ ರಜೆ ಘೋಷಣೆ ಮಾಡಲಾಗಿದೆ.

ಇನ್ನು ಮತ್ತೋರ್ವ ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಭಾರಿ ಮಳೆಯ ಮುನ್ಸೂಚನೆ ಇದ್ದು ಇಲ್ಲಿಯೂ ಕೂಡ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಮೀನುಗಾರರಿಗೆ ಈ ಸಂದರ್ಭದಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಹಾಗೂ ವೃದ್ಧರಿಗೆ ಮಕ್ಕಳಿಗೆ ಅನಾವಶ್ಯಕವಾಗಿ ಮಳೆಯಲ್ಲಿ ತಿರುಗದಂತೆ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: FID Number: ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು FID ನಂಬರ್ ಕಡ್ಡಾಯ! ನಿಮ್ಮ FID ನಂಬರ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಇನ್ನು ಮಲೆನಾಡು, ಉತ್ತರ ಒಳಭಾಗದ ಜಿಲ್ಲೆಗಳಾದ ಧಾರವಾಡ,ಶಿವಮೊಗ್ಗ,ಹಾವೇರಿ,ಹಾಸನ,ಬಳ್ಳಾರಿ, ಕೊಪ್ಪಳ,ಬೆಳಗಾವಿ, ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಗಳಲ್ಲಿಯೂ ಸರಾಸರಿಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ವರದಿ ಮಾಡಲಾಗಿದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

By

Leave a Reply

Your email address will not be published. Required fields are marked *