ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಮಳೆ ಅಂದಾಜಿಗಿಂತ ಅಧಿಕವಾಗಿ ಸುರಿದಿದ್ದು ಈಗಾಗಲೇ ಸಾಕಷ್ಟು ರೈತರ ಬೆಳೆಗಳು ಹಾನಿಗೊಳಗಾಗಿವೆ. ಈ ಸಂದರ್ಭದಲ್ಲಿ ಹಿಂಗಾರು ಮಳೆ ಆರಂಭವಾಗಿದ್ದು, ಒಂದೆಡೆ ಇದು ರೈತರಿಗೆ ಖುಷಿ ತಂದರೆ ಮತ್ತೊಂದೆಡೆ ಬೆಳೆ ಹಾನಿಗೊಳಗಾದ ರೈತರಿಗೆ ಇದು ಸಂಕಷ್ಟ ತಂದೊಡ್ಡಿದೆ.
Thank you for reading this post, don't forget to subscribe!ಇನ್ನು ಹಿಂಗಾರು ಮಳೆ ಅಂದಾಜಿನಂತೆ ಆರಂಭವಾಗಿದ್ದು ಇಂದಿನಿಂದ ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!
ಹೌದು ರೈತ ಮಿತ್ರರೇ, ರಾಜ್ಯದ ಹಲವೆಡೆ ಇಂದಿನಿಂದ 4 ದಿನ ಮಿಂಚು ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯಾವ ಯಾವ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ ಮತ್ತು ಯಾವ ಯಾವ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ನೀಡಲಾಗಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿರಿ.
ಯಾವ ಯಾವ ಜಿಲ್ಲೆಯಲ್ಲಿ ಯಾವ ಯಾವ ಅಲರ್ಟ್ ನೀಡಲಾಗಿದೆ?
ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಶನಿವಾರ ಯೆಲ್ಲೋ ಅಲರ್ಟ್ ನೀಡಲಾಗಿತ್ತು. ಇನ್ನು ದಕ್ಷಿಣ ಕನ್ನಡ ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರ ಮಳೆ ವ್ಯಾಪಿಸಿಕೊಳ್ಳುವ ಸಂಭವವಿದ್ದು, ಈ ಭಾಗದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೈಸೂರು, ಚಾಮರಾಜನಗರ ಜಿಲ್ಲೆಯ ಜತೆಗೆ ಮಂಡ್ಯ, ಹಾಸನ, ತುಮಕೂರು,ಕೊಡಗು, ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉಳಿದ ಜಿಲ್ಲೆಗಳಲ್ಲಿ ಸಾಧರಣಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ಇಂದು 18 ನೇ ಕಂತಿನ ಹಣ ಜಮಾ ! ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಇನ್ನು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಾದ ಬೆಳಗಾವಿ,ಧಾರವಾಡ,ಬಾಗಲಕೋಟೆ,ವಿಜಯಪುರ, ರಾಯಚೂರು ,ಕಲಬುರ್ಗಿ,ಯಾದಗಿರಿ ಸೇರಿದಂತೆ ಮುಂತಾದ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದೆ ಎಂದು ವರದಿ ನೀಡಲಾಗಿದೆ. ಈ ಭಾಗದ ಪ್ರದೇಶದಲ್ಲಿ ಕೆಲವೆಡೆ ಗುಡುಗು ಮಿಂಚು ಸಹಿತ ಭಾರಿ ಮಳೆಯೂ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode