ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದಿಂದ ಕರ್ನಾಟಕ ರಾಜ್ಯದ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷದ ಮುಂಗಾರು ಮಳೆಯಿಂದ ಬೇಸತ್ತಿದ್ದ ರೈತಾಪಿ ಜನರಿಗೆ ಇನ್ನೇನು ಮಳೆಗಾಲ ಮುಗಿದೆ ಬಿಟ್ಟಿತು ಎನ್ನುವಷ್ಟರಲ್ಲಿ ಬಂಗಾಳ ಕೊಲ್ಲಿಯಲ್ಲಿ ಇದೀಗ ಚಂಡ ಮಾರುತ ಎದ್ದಿದೆ.
Thank you for reading this post, don't forget to subscribe!ಇದರಿಂದಾಗಿ ವಾಯುಭಾರ ಕುಸಿತವಾಗಿರುವ ಕಾರಣ ಕರ್ನಾಟಕದ ಕರಾವಳಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಮಿಂಚು ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಹಾಗಾದರೆ ಚಂಡಮಾರುತದಿಂದ ಉಂಟಾಗಿರುವ ವಾಯುಭಾರ ಕುಸಿತದಿಂದ ಉಂಟಾಗುತ್ತಿರುವ ಈ ಮಳೆಯಿಂದಾಗಿ ಎಲ್ಲೆಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದಿಂದ ಕರ್ನಾಟಕ ರಾಜ್ಯದ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಅದೇ ರೀತಿಯಾಗಿ ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಗದಗ, ಹಾವೇರಿ ಜಿಲ್ಲೆಯಲ್ಲಿ ಜೋರು ಮಳೆಯಾಗಲಿದ್ದು, ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಮುಂಜಾಗ್ರತೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.
ಭಾರತದ ಕೃಷಿಯಂತೂ ಮುಂಗಾರು ಮಳೆಯನ್ನೇ ನೆಚ್ಚಿದ್ದು, ಇಡಿಯ ದೇಶದ ಕೃಷಿ ಚಟುವಟಿಕೆಗಳಲ್ಲ ಮಾನ್ಸೂನ್ ಮೇಲೆ ನಿರ್ಧರಿತವಾಗುತ್ತವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬೆಳೆಯ ಇಳುವರಿ ಕೂಡ ಮಾನ್ಸೂನ್ ಮೇಲೆ ಅವಲಂಬಿತವಾಗಿದೆ.
ಹೀಗಿರುವಾಗ ರೈತರಿಗೆ ಮಳೆಯ ಕುರಿತು ಮಾಹಿತಿ ಇರುವುದು ಅವಶ್ಯಕವಾಗುತ್ತದೆ. ಮಳೆ ನೋಡಿಕೊಂಡು ತಮ್ಮ ಬಿತ್ತನೆ ಕಾರ್ಯ ಅಥವಾ ಇನ್ನಿತರ ಕೃಷಿ ಚಟುವಟಿಕೆಗಳನ್ನು ನಡೆಸಲು ಅವರಿಗೆ ಸಹಾಯವಾಗುತ್ತದೆ.
ಈ ಕಾರಣದಿಂದಲೆ ಕೇಂದ್ರ ಸರ್ಕಾರವು ‘ಮೇಘದೂತ ‘ ಎಂಬ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದು ಅದರ ಮೂಲಕ ನೀವು ನಿಮ್ಮ ಗ್ರಾಮದಲ್ಲಿ ಮಳೆಯಾಗುವ 5 ದಿನಗಳ ಮುಂಚೆಯೇ ಮಳೆಯ ಮಾಹಿತಿಯನ್ನು ಪಡೆಯಬಹುದು.
ಈ ಆ್ಯಪ್ ಅನ್ನು ಬಳಸುವುದು ಹೇಗೆ ? ಇದರಿಂದ ಮಳೆಯ ಮಾಹಿತಿಯನ್ನು ಪಡೆಯುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿದುಕೊಳ್ಳೋಣ. ತಪ್ಪದೇ ಈ ಅಂಕಣವನ್ನು ಕೊನೆಯವರೆಗೂ ಓದಿರಿ.
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಮೇಘದೂತ ಆ್ಯಪ್ ನ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ, ಪ್ಲೇಸ್ಟೊರಿನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.
ಹಂತ -2) ನಂತರ ಅಲ್ಲಿ ನೀವು ನಿಮ್ಮ ಭಾಷೆಯನ್ನು ಕನ್ನಡ ಎಂದು ಆಯ್ಕೆ ಮಾಡಿ.
ಹಂತ -3) ನಂತರ ಅಲ್ಲಿ ನೀವು ಮುಂದೆ ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ಅಲ್ಲಿ ನೀವು ಸೈನ್ ಅಫ್ ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ಅಲ್ಲಿ ನೀವು ನಿಮ್ಮ ಎಲ್ಲಾ ವಿವರಗಳನ್ನು ಸಲ್ಲಿಸಿ.
ಹಂತ -6) ನಂತರ ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಮತ್ತು ಭಾಷೆಯನ್ನು ಹಾಕಿ ಲಾಗಿನ್ ಮೇಲೆ ಕ್ಲಿಕ್ ಮಾಡಿ.
ಹಂತ -7) ನಂತರ ಅಲ್ಲಿ ನೀವು While Using the App ಮೇಲೆ ಕ್ಲಿಕ್ ಮಾಡಿ.
ಹಂತ -8) ನಂತರ ಅಲ್ಲಿ ನಿಮಗೆ ಕೆಳಗೆ ಮುನ್ಸೂಚನೆ ಎಂದು ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
ಹಂತ -9) ನಂತರ ಅಲ್ಲಿ ನಿಮಗೆ ನಿಮ್ಮ ಜಿಲ್ಲೆಯ ಸಂಪೂರ್ಣ ಹವಾಮಾನ ಮುನ್ಸೂಚನೆ ಸಿಗುತ್ತದೆ.
ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಗ್ರಾಮದ ಸಂಪೂರ್ಣ ಹವಾಮಾನ ವರದಿಯನ್ನು ತಿಳಿದುಕೊಳ್ಳಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…