ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರು ಇಂದು ಕೇಂದ್ರ ಅಥವಾ ರಾಜ್ಯ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ಅವರ ಬಳಿ ತಮ್ಮ ಹೆಸರಿನ ಅಧಿಕೃತ ಪಹಣಿ ಪತ್ರ (ಉತಾರಿ) ಇರುವುದು ಕಡ್ಡಾಯವಾಗಿದೆ.
Thank you for reading this post, don't forget to subscribe!ಆದರೆ ಹಲವು ಕಾರಣಗಳಿಂದ ಕೆಲವು ರೈತರ ಬಳಿ ಉತಾರಿ (pahani) ಇರುವುದಿಲ್ಲ. ಅದು ಕಳೆದು ಹೋಗಿರಬಹುದು ಅಥವಾ ಬೆಂಕಿ ಅವಘಡದಲ್ಲಿ ಸಿಕ್ಕು ಸುಟ್ಟು ಹೋಗಿರಬಹುದು ಅಥವಾ ಮಳೆಗೆ ಕೊಚ್ಚಿ ಹೋಗಿರಬಹುದು.
ಇದನ್ನೂ ಓದಿ: ಈ ವರ್ಷ ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ 777 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಸರ್ಕಾರ ! ನಿಮ್ಮ ಬೆಳೆ ಹಾನಿಯಾಗಿದ್ದರೆ ಈ ಕೂಡಲೇ ಈ ಕೆಲಸ ಮಾಡಿ
ಹೀಗೆ ನಾನಾ ಕಾರಣಗಳಿಂದ ರೈತರ ಪಹಣಿ ಪತ್ರ ಕಳೆದು ಹೋಗಿದ್ದರೆ ಈಗ ಸುಲಭವಾಗಿ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು ಮತ್ತು ನಿಮ್ಮ ಹೆಸರಿಗೆ ಎಷ್ಟು ಜಮೀನಿದೆ ಮತ್ತು ಜಂಟಿಯಾಗಿದ್ದರೆ ಯಾರ ಯಾರ ಹೆಸರಿಗಿದೆ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು.
ಹಾಗಾದರೆ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಪಹಣಿ ಪತ್ರ (ಉತಾರಿ) ಡೌನ್ಲೋಡ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ.ಆದ್ದರಿಂದ ತಪ್ಪದೇ ಕೊನೆಯವೆಗೂ ಓದಿರಿ.
ಮೊಬೈಲ್ ನಲ್ಲಿ ಪಹಣಿ ಪತ್ರ ಡೌನ್ಲೋಡ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://landrecords.karnataka.gov.in/service64/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಖಾತಾ ಪ್ರತಿ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಖಾತಾ ಸಂಖ್ಯೆ ಅಥವಾ ಸರ್ವೇ ನಂಬರ್ ಹಾಕಿ ನಿಮ್ಮ ಪಹಣಿ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು.ಅದರಲ್ಲಿ ನಿಮಗೆ ನಿಮ್ಮ ಜಮೀನಿನ ಖಾತಾ ಸಂಖ್ಯೆ ಗೊತ್ತಿದ್ದರೆ ಅದನ್ನು ಆಯ್ಕೆ ಮಾಡಿಕೊಳ್ಳಿ.ಇಲ್ಲದಿದ್ದರೆ ಸರ್ವೇ ನಂಬರ್ ಹಾಕಿ.ನಾನು ನಿಮಗೆ ಎರಡನ್ನು ಹಾಕಿ ತೋರಿಸುತ್ತೇನೆ.
ಹಂತ -4) ನೀವು ಕೆಳಗೆ ತೋರಿಸಿದಂತೆ ಖಾತಾ ಸಂಖ್ಯೆಯ ಮೂಲಕ ಹುಡುಕಿ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ ನಂತರ ನಿಮ್ಮ ಜಮೀನಿನ ಖಾತಾ ಸಂಖ್ಯೆ ನಮೂದಿಸಿ, ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪಹಣಿ ಪತ್ರ ಡೌನ್ಲೋಡ್ ಆಗುತ್ತದೆ.

ಹಂತ -5) ಒಂದು ವೇಳೆ ನಿಮಗೆ ನಿಮ್ಮ ಜಮೀನಿನ ಖಾತಾ ಸಂಖ್ಯೆ ಗೊತ್ತಿಲ್ಲದಿದ್ದರೆ ಕೆಳಗೆ ತೋರಿಸಿದಂತೆ ಸರ್ವೇ ಸಂಖ್ಯೆಯ ಮೂಲಕ ಹುಡುಕಿ ಮೇಲೆ ಕ್ಲಿಕ್ ಮಾಡಿ. ನಂತರ ಕೆಳಗೆ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ ಅನಂತರ ನಿಮ್ಮ ಜಮೀನಿನ ಸರ್ವೇ ನಂಬರ್ ಹಾಕಿ, ಸರ್ನೋಕ್ ಇದ್ದಲ್ಲಿ* ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಹಿಸ್ಸಾ ನಂಬರ್ ಹಾಕಿ,ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪಹಣಿ ಪತ್ರ ಡೌನ್ಲೋಡ್ ಆಗುತ್ತದೆ.

ಇದನ್ನೂ ಓದಿ: ಮನೆ ಕಟ್ಟಬೇಕೆನ್ನುವವರಿಗೆ ಸರ್ಕಾರದಿಂದ ಸಿಗಲಿದೆ 1 ಲಕ್ಷ ರೂಪಾಯಿ ಹೆಚ್ಚುವರಿ ಸಹಾಯ ಧನ! ಈಗಲೇ ಅರ್ಜಿ ಸಲ್ಲಿಸಿ
ಈ ರೀತಿಯಾಗಿ ನೀವು ನಿಮ್ಮ ಮನೆಯಲ್ಲಿ ಕುಳಿತು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ನಿಮ್ಮ ಜಮೀನಿನ ಪಹಣಿ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ವಿದ್ಯಾರ್ಥಿಗಳು ತಮ್ಮ ರ್ಯಾಂಕ್, ಅಂಕಗಳು ಹಾಗೂ ಸ್ಕೋರ್ಕಾರ್ಡ್ನ್ನು ಆನ್ಲೈನ್ನಲ್ಲಿ ಪರಿಶೀಲಿಸಬಹುದು. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ಇದು ಮಹತ್ವದ ಹಂತವಾಗಿದೆ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ ಹೆಚ್ಚು ಸುರಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾವಿರಾರು ರೈತರ ಬೆಳೆಗಳು ಹಾನಿಗೆ ಒಳಗಾಗಿವೆ.
- Trump Warns Oman Over Hormuz Strait Mediation With IranAmid escalating tensions in the Strait of Hormuz, the United States has launched fresh strikes on Iran following alleged drone threats targeting American vessels. Explosions were reported near Bandar Abbas as regional security concerns continue to intensify.
- ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ ಊಹಾಪೋಹಗಳ ನಡುವೆ ಸಂವಿಧಾನಾತ್ಮಕ ಪ್ರಕ್ರಿಯೆ ಹೇಗಿರುತ್ತದೆ ಎಂಬುದರ ಬಗ್ಗೆ ಇದೀಗ ಕುತೂಹಲ ಹೆಚ್ಚಾಗಿದೆ.
- ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj Mishra ರಾತ್ರೋರಾತ್ರಿ ಮುಂಬೈಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ. ಕಾಂಗ್ರೆಸ್ ಒಳರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ.
- Milk-Curd: ಹಾಲಿನ ಜೊತೆ ಮೊಸರೂ ಕುಡೀತೀರಾ? ಇದು ಎಷ್ಟು ಡೇಂಜರ್ ಗೊತ್ತಾ?ಹಾಲಿನ ಜೊತೆ ಮೊಸರು ಸೇವಿಸುವ ಅಭ್ಯಾಸ ಇದೆಯಾ? ಆಯುರ್ವೇದದ ಪ್ರಕಾರ ಈ ಫುಡ್ ಕಾಂಬಿನೇಷನ್ ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡಬಹುದು. ಗ್ಯಾಸ್ಟ್ರಿಕ್, ಅಜೀರ್ಣ, ಹೊಟ್ಟೆ ಉಬ್ಬರ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು. ಹಾಲು-ಮೊಸರು ಒಂದೇ ವೇಳೆ ಸೇವಿಸುವ ಮುನ್ನ ಈ ಮಾಹಿತಿ ತಿಳಿದುಕೊಳ್ಳಿ.
- ಪೋಷಕರೇ ಗಮನಿಸಿ : `CET’ ಸರ್ಕಾರಿ ಕೋಟಾದ ಸೀಟು ಪಡೆದರೂ ಕಾಲೇಜುಗಳು ಹೆಚ್ಚು ಶುಲ್ಕ ಕೇಳಿದರೆ ಜಸ್ಟ್ ಹೀಗೆ ದೂರು ನೀಡಿ.!CET ಮೂಲಕ ಸರ್ಕಾರಿ ಕೋಟಾದ ಸೀಟು ಪಡೆದ ವಿದ್ಯಾರ್ಥಿಗಳಿಂದ ಕೆಲ ಕಾಲೇಜುಗಳು ಹೆಚ್ಚುವರಿ ಶುಲ್ಕ ಕೇಳುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಕೇಳಿದರೆ ಪೋಷಕರು ಹಾಗೂ ವಿದ್ಯಾರ್ಥಿಗಳು ತಕ್ಷಣವೇ KEA ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಅಧಿಕೃತವಾಗಿ ದೂರು ಸಲ್ಲಿಸಬಹುದು. ದೂರು ನೀಡುವ ಸರಳ ವಿಧಾನ ಹಾಗೂ ಅಗತ್ಯ ದಾಖಲೆಗಳ ಮಾಹಿತಿ ಇಲ್ಲಿದೆ.
- ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ ಮುನ್ಸೂಚನೆ, ಯೆಲ್ಲೂ ಅಲರ್ಟ್ ಘೋಷಣೆರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
- BREAKING NEWS : ಮುಖ್ಯಮಂತ್ರಿ ಸ್ಥಾನಕ್ಕೆ ಪರಮೇಶ್ವಸರ್ ಹೆಸರು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ.!ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ ಎನ್ನುವ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಿರ್ಧಾರ ಏನು ಎಂಬುದರ ಮೇಲೆ ರಾಜ್ಯ ರಾಜಕೀಯದ ಕುತೂಹಲ ಹೆಚ್ಚಾಗಿದೆ.
- Karnataka Politics: ಡಿ.ಕೆ ಶಿವಕುಮಾರ್ಗೆ ಪಟ್ಟಾಭಿಷೇಕದ ಜೊತೆ ಸಿದ್ದರಾಮಯ್ಯ ನಾಲ್ವರು ಆಪ್ತರಿಗೆ ಡಿಸಿಎಂ ಹುದ್ದೆ ಸಾಧ್ಯತೆಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ನಾಯಕತ್ವ ಬದಲಾವಣೆ ಚರ್ಚೆ ಮತ್ತಷ್ಟು ತೀವ್ರಗೊಂಡಿದೆ. ಡಿ.ಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಪಟ್ಟಾಭಿಷೇಕ ಸಾಧ್ಯತೆ ಎನ್ನಲಾಗುತ್ತಿದ್ದರೆ, ಸಿದ್ದರಾಮಯ್ಯ ಆಪ್ತ ನಾಲ್ವರು ನಾಯಕರಿಗೆ ಡಿಸಿಎಂ ಹುದ್ದೆ ನೀಡುವ ಫಾರ್ಮುಲಾ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆ ಶುರುವಾಗಿದೆ. ರಾಜ್ಯ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ವೇದಿಕೆ ಸಿದ್ಧವಾಗಿದೆಯೇ ಎಂಬ ಕುತೂಹಲ ಹೆಚ್ಚಾಗಿದೆ!
- ರಾಷ್ಟ್ರೀಯ ರಾಜಕಾರಣಕ್ಕೆ ಸಿದ್ದರಾಮಯ್ಯ? ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಹೈಕಮಾಂಡ್ ಸೂಚನೆ: ತೀವ್ರಗೊಂಡ ರಾಜಕೀಯ ಚಟುವಟಿಕೆ!ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ Siddaramaiah ಅವರನ್ನು ರಾಷ್ಟ್ರೀಯ ರಾಜಕಾರಣಕ್ಕೆ ಕಳುಹಿಸುವ ಬಗ್ಗೆ ಚರ್ಚೆಗಳು ಜೋರಾಗಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ ನೀಡಿದೆಯೆಂಬ ಮಾತುಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ಬೆಳವಣಿಗೆಗಳಿಂದ ರಾಜ್ಯ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಗರಿಗೆದರಿವೆ.











