Categories: information

ಪ್ರಿಯಕರನನ್ನು ಸೇರಲು ಪಾಕಿಸ್ತಾನದಿಂದ ಭಾರತಕ್ಕೆ ಬಂದ ಪ್ರಿಯತಮೆ ! ಹೇಗಿದೆ ಗೊತ್ತಾ ಇವರ ಲೆಜೆಂಡ್ ಲವ್ ಸ್ಟೋರಿ?

ಪ್ರೀತಿಗೆ ಗಡಿ, ಭಾಷೆ, ಪ್ರಾಂತ್ಯಗಳ ಹಂಗಿಲ್ಲ ಎಂಬ ಮಾತು ಮತ್ತೇ ಮತ್ತೇ ಸಾಬೀತಾಗುತ್ತಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ಪಾಕಿಸ್ತಾನದಿಂದ ಭಾರತಕ್ಕೆ ಪ್ರೇಮಿಯನ್ನು ಅರಸಿ ಬಂದು ಸೀಮಾ ಹೈದರ್‌ ಸುದ್ದಿ. ಕೆಲ ವರ್ಷಗಳ ಹಿಂದೆ  ಭಾರತದಿಂದ ಅಂಜು ಎಂಬಾಕೆ ಪಾಕಿಸ್ತಾನಕ್ಕೆ ಹೋಗಿ ಪ್ರಿಯಕರನ ಸೇರಿದ್ದಳು.ಇದೀಗ ಅದೇ ರೀತಿ ಪಾಕಿಸ್ತಾನದ ಮಹಿಳೆಯೊಬ್ಬರು ಭಾರತಕ್ಕೆ ಬಂದು ಪ್ರಿಯಕರನ ಸೇರಿದ್ದಾರೆ.

Spread the love

ಪ್ರೀತಿಗೆ ಗಡಿ, ಭಾಷೆ, ಪ್ರಾಂತ್ಯಗಳ ಹಂಗಿಲ್ಲ ಎಂಬ ಮಾತು ಮತ್ತೇ ಮತ್ತೇ ಸಾಬೀತಾಗುತ್ತಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ಪಾಕಿಸ್ತಾನದಿಂದ ಭಾರತಕ್ಕೆ ಪ್ರೇಮಿಯನ್ನು ಅರಸಿ ಬಂದು ಸೀಮಾ ಹೈದರ್‌ ಸುದ್ದಿ. ಕೆಲ ವರ್ಷಗಳ ಹಿಂದೆ ಭಾರತದಿಂದ ಅಂಜು ಎಂಬಾಕೆ ಪಾಕಿಸ್ತಾನಕ್ಕೆ ಹೋಗಿ ಪ್ರಿಯಕರನ ಸೇರಿದ್ದಳು.ಇದೀಗ ಅದೇ ರೀತಿ ಪಾಕಿಸ್ತಾನದ ಮಹಿಳೆಯೊಬ್ಬರು ಭಾರತಕ್ಕೆ ಬಂದು ಪ್ರಿಯಕರನ ಸೇರಿದ್ದಾರೆ.

Thank you for reading this post, don't forget to subscribe!

ಹೌದು ಸ್ನೇಹಿತರೆ ಪಾಕಿಸ್ತಾನದ ಕರಾಚಿ ನಿವಾಸಿ ಜವೇರಿಯಾ ಖಾನುಮ್ ಎಂಬಾಕೆ ಅಮೃತಸರ ಜಿಲ್ಲೆಯ ಅಟ್ಟಾರಿಯಿಂದ ಭಾರತಕ್ಕೆ ಬಂದಿದ್ದಾರೆ. ಆಕೆ ತನ್ನ ಪ್ರಿಯಕರ ಕೋಲ್ಕತ್ತಾದ ಸಮೀರ್ ಖಾನ್‌ನನ್ನು ಸೇರಿದ್ದಾಳೆ. ವಾಘಾ-ಅಟ್ಟಾರಿ ಅಂತಾರಾಷ್ಟ್ರೀಯ ಗಡಿಯಿಂದ ಭಾರತಕ್ಕೆ ಬಂದಿದ್ದು, ಕೋಲ್ಕತ್ತಾ ನಿವಾಸಿ ಸಮೀರ್‌ನನ್ನು ಮುಂದಿನ ವರ್ಷದ ಜನವರಿಯಲ್ಲಿ ಮದುವೆಯಾಗಲಿದ್ದಾರೆ.

ಈ ಕಾರಣಕ್ಕಾಗಿ ಖಾನುಮ್‌ಗೆ 45 ದಿನಗಳ ವೀಸಾವನ್ನು ನೀಡಲಾಗಿದೆ. ಕೋವಿಡ್ ಸಾಂಕ್ರಾಮಿಕವು ಭಾರತಕ್ಕೆ ಬರುವ ಆಕೆಯ ಯೋಜನೆಗೆ ಐದು ವರ್ಷಗಳ ಕಾಲ ಅಡ್ಡಗಾಲಾಗಿತ್ತು. ಮುಂದಿನ ವರ್ಷ ಜನವರಿಯಲ್ಲಿ ನಾವು ಮದುವೆಯಾಗುತ್ತೇವೆ ಎಂದು ಮಾಧ್ಯಮಗಳಿಗೆ ಜೋಡಿ ಪ್ರತಿಕ್ರಿಯಿಸಿದೆ.

“ನನಗೆ 45 ದಿನಗಳ ವೀಸಾ ನೀಡಲಾಗಿದೆ. ನಾನು ಇಲ್ಲಿಗೆ ಬಂದಿದ್ದಕ್ಕೆ ತುಂಬಾ ಸಂತೋಷವಾಗಿದೆ. ಆಗಮನದ ನಂತರ ನಾನು ಇಲ್ಲಿ ತುಂಬಾ ಪ್ರೀತಿಯನ್ನು ಪಡೆಯುತ್ತಿದ್ದೇನೆ. ಐದು ವರ್ಷದ ನಂತರ ನನಗೆ ವೀಸಾ ಸಿಕ್ಕಿದೆ. ಇದನ್ನು ನಂಬಲಾಗುತ್ತಿಲ್ಲ” ಎಂದು ಖಾನುಮ್‌ ತಿಳಿಸಿದ್ದಾರೆ.

“2018 ರ ಸಂದರ್ಭದಲ್ಲಿ ಆಕೆ ಮೇಲೆ ನನಗೆ ಪ್ರೀತಿಯಾಯಿತು. ಜರ್ಮನಿಯಲ್ಲಿ ಓದುತ್ತಿದ್ದ ನಾನು ಭಾರತಕ್ಕೆ ವಾಪಸ್‌ ಬಂದೆ. ನನ್ನ ತಾಯಿಯ ಫೋನ್‌ನಲ್ಲಿ ಅವಳ ಫೋಟೋವನ್ನು ನೋಡಿದೆ. ನಾನು ಜವೇರಿಯಾಳನ್ನು ಮದುವೆಯಾಗುತ್ತೇನೆಂದು ನನ್ನ ತಾಯಿಗೆ ಹೇಳಿದೆ” ಎಂದು ಪ್ರಿಯಕರ ಸಮೀರ್‌ ಖಾನ್‌ ತಿಳಿಸಿದ್ದಾರೆ. ಹೀಗೆ ಕಾಲ ಕಾಲಕ್ಕೆ ಪ್ರೀತಿಯು ತನ್ನ ಮಹಿಮೆಯನ್ನು ಹಲವು ರೀತಿಯಲ್ಲಿ ತೋರಿಸುತ್ತಲೇ ಇರುತ್ತದೆ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ಈ ಸುದ್ದಿ ಇಡೀ ಇಂಟರ್ನೆಟ್ ಅನ್ನೆ ಅಲುಗಾಡಿಸುತ್ತಿದೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago