CET ಮೂಲಕ ಸರ್ಕಾರಿ ಕೋಟಾದ ಸೀಟು ಪಡೆದ ವಿದ್ಯಾರ್ಥಿಗಳಿಂದ ಕೆಲ ಕಾಲೇಜುಗಳು ಹೆಚ್ಚುವರಿ ಶುಲ್ಕ ಕೇಳುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಕೇಳಿದರೆ ಪೋಷಕರು ಹಾಗೂ ವಿದ್ಯಾರ್ಥಿಗಳು ತಕ್ಷಣವೇ KEA ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಅಧಿಕೃತವಾಗಿ ದೂರು ಸಲ್ಲಿಸಬಹುದು. ದೂರು ನೀಡುವ ಸರಳ ವಿಧಾನ ಹಾಗೂ ಅಗತ್ಯ ದಾಖಲೆಗಳ ಮಾಹಿತಿ ಇಲ್ಲಿದೆ.
ವೃತ್ತಿಪರ ಕೋರ್ಸ್‌ಗಳ (Professional Courses) ಪ್ರವೇಶಾತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಿಹಿ ಸುದ್ದಿ ಹೊರಬಿದ್ದಿದೆ. ಸರ್ಕಾರಿ ಕೋಟಾದ ಸೀಟುಗಳನ್ನು ಪಡೆದ ನಂತರವೂ ಕೆಲವು ಖಾಸಗಿ ಕಾಲೇಜುಗಳು ಕಾನೂನು ಬಾಹಿರವಾಗಿ ಹೆಚ್ಚಿನ ಶುಲ್ಕಕ್ಕೆ ಬೇಡಿಕೆ ಇಡುತ್ತಿರುವ ದೂರುಗಳು ಕೇಳಿಬರುತ್ತಿವೆ.
Thank you for reading this post, don't forget to subscribe!ಇದಕ್ಕೆ ಬ್ರೇಕ್ ಹಾಕಲು ಶುಲ್ಕ ನಿಯಂತ್ರಣ ಸಮಿತಿ (Fee Regulatory Committee) ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ.
ಸರ್ಕಾರ ನಿಗದಿಪಡಿಸಿದ ಮೊತ್ತಕ್ಕಿಂತ ಒಂದು ರೂಪಾಯಿ ಜಾಸ್ತಿ ಕೇಳಿದರೂ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿದ್ಯಾರ್ಥಿಗಳು ನೇರವಾಗಿ ದೂರು ದಾಖಲಿಸಬಹುದು ಎಂದು ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ. ಶ್ರೀನಿವಾಸಗೌಡ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ
ಯಾರೆಲ್ಲಾ ದೂರು ನೀಡಬಹುದು?
ಇದು ಕೇವಲ ಹೊಸದಾಗಿ ಅಡ್ಮಿಷನ್ ಪಡೆಯುತ್ತಿರುವವರಿಗೆ ಮಾತ್ರವಲ್ಲ!
ಮುಂಬರುವ ದಿನಗಳಲ್ಲಿ ವೃತ್ತಿಪರ ಕೋರ್ಸ್‌ಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳು.
ಈಗಾಗಲೇ ಕಾಲೇಜು ಸೇರಿ, ಹೆಚ್ಚಿನ ಶುಲ್ಕದ ಕಿರುಕುಳ ಅನುಭವಿಸುತ್ತಿರುವ ಹಳೇ ವಿದ್ಯಾರ್ಥಿಗಳು.
ಯಾವೆಲ್ಲಾ ಕಾಲೇಜುಗಳಿಗೆ ಇದು ಅನ್ವಯ?
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಸೀಟು ಹಂಚಿಕೆಯಾಗುವ ರಾಜ್ಯದ ಎಲ್ಲಾ ಖಾಸಗಿ ವೃತ್ತಿಪರ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳು ಈ ವ್ಯಾಪ್ತಿಗೆ ಒಳಪಡುತ್ತವೆ. ಇದರಲ್ಲಿ ಅನುದಾನಿತ, ಅನುದಾನ ರಹಿತ ಹಾಗೂ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳೂ ಸೇರಿವೆ. ಈ ಯಾವುದೇ ಸಂಸ್ಥೆಗಳು ಸರ್ಕಾರ ನಿಗದಿಪಡಿಸಿದ ಅಧಿಕೃತ ಫೀಸ್ ಹೊರತುಪಡಿಸಿ, ಇತರೆ ಯಾವುದೇ ಹೆಸರಿನಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ.
ದೂರು ನೀಡಬೇಕಾದ ವಿಳಾಸ ಇಲ್ಲಿದೆ:
ಹೆಚ್ಚುವರಿ ಶುಲ್ಕದ ಹಾವಳಿಯಿಂದ ನೊಂದ ವಿದ್ಯಾರ್ಥಿಗಳು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಮಿತಿಯ ಕಚೇರಿಗೆ ನೇರವಾಗಿ ಭೇಟಿ ನೀಡಿ ದೂರು ಸಲ್ಲಿಸಬಹುದು.
ವಿಳಾಸ: ಶುಲ್ಕ ನಿಯಂತ್ರಣ ಸಮಿತಿ ಕಚೇರಿ, ನೆಲಮಹಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಟ್ಟಡ, 18ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ…
ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ…
RRB Recruitment 2026: ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶ! ರೈಲ್ವೆ ನೇಮಕಾತಿ ಮಂಡಳಿಯು 3,548 ಹುದ್ದೆಗಳ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
PM Kisan Yojana: ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಈ ಪ್ರಮುಖ ಕೆಲಸಗಳನ್ನು ಪರಿಶೀಲಿಸಿ. ನಿಮ್ಮ…
ಕರ್ನಾಟಕದ 31 ಜಿಲ್ಲಾ ಪಂಚಾಯಿತಿ ಹಾಗೂ 239 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ಯಾವ…