ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ ರೈತರಿಗೆ ಸಿಗುವ 22ನೇ ಕಂತಿನ ₹2,000 ಹಣ ಯಾವಾಗ ಜಮೆಯಾಗಲಿದೆ? ಯಾರಿಗೆ ಈ ಹಣ ಸಿಗಲಿದೆ? ಎಂಬ ಪ್ರಶ್ನೆಗಳು ರೈತ ವಲಯದಲ್ಲಿ ಹೆಚ್ಚು ಚರ್ಚೆಯಾಗುತ್ತಿವೆ. ಈ ಕಂತಿನ ಹಣ ಪಡೆಯಲು e-KYC, ಆಧಾರ್–ಬ್ಯಾಂಕ್ ಲಿಂಕ್, ಭೂ ದಾಖಲೆಗಳ ಸರಿಯಾದ ಮಾಹಿತಿ ಅತ್ಯಂತ ಮುಖ್ಯವಾಗಿದ್ದು, ಯಾವುದೇ ದೋಷಗಳಿದ್ದರೆ ಹಣ ಜಮೆಯಾಗುವುದಿಲ್ಲ. 22ನೇ ಕಂತಿನ ಪಾವತಿ ದಿನಾಂಕ, ಅರ್ಹತಾ ನಿಯಮಗಳು ಹಾಗೂ ಹಣದ ಸ್ಥಿತಿಯನ್ನು ಪರಿಶೀಲಿಸುವ ಸಂಪೂರ್ಣ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಮುಂದಿನ ಕಂತು ಅಂದರೆ 22ನೇ ಕಂತಿನ ಹಣ ಯಾರಿಗೆ ಜಮೆಯಾಗುತ್ತದೆ ಯಾರಿಗೆ ಜಮೆಯಾಗುವುದಿಲ್ಲ ಹಾಗೂ ಯಾವಾಗ ಜಮೆಯಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
Thank you for reading this post, don't forget to subscribe!ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಯಾರು ಯಾರಿಗೆ ಜಮೆಯಾಗುತ್ತದೆ ಎಂಬ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ,
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಅಲ್ಲಿ ನಿಮಗೆ ಹಲವಾರು ಆಯ್ಕೆಗಳು ಕಾಣಿಸುತ್ತವೆ. ಹೌದು, ನೀವು ನಿಮ್ಮ ಹೆಸರು ಪಿಎಂ ಕಿಸಾನ್ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಅಲ್ಲಿ ಕಾಣುವ Beneficiary list ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಊರಿನಲ್ಲಿ ಯಾರು ಯಾರು ಫಲಾನುಭವಿಗಳಿದ್ದಾರೋ ಅವರ ಹೆಸರು ಕಾಣಿಸುತ್ತದೆ.
ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದ್ದ ಮಾತ್ರಕ್ಕೆ ಹಣ ಜಮೆಯಾಗುತ್ತದೆ ಎಂದು ಹೇಳಕ್ಕಾಗುವುದಿಲ್ಲ. ಏಕೆಂದರೆ ಫಲಾನುಭವಿಗಳು ಅರ್ಹತೆ ಪಡೆದಿರಬೇಕು. ಇದರೊಂದಿಗೆ ಇಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಯಾರು ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಮಾಡಿಸಿಲ್ಲವೋ ಅವರು ಇಕೆವೈಸಿ ಮಾಡಿಸಿಕೊಂಡರೆ ಮಾತ್ರ ನಿಮಗೆ ಮುಂದಿನ ಕಂತಿನ ಹಣ ಜಮೆಯಾಗುತ್ತದೆ
ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಫೆಬ್ರವರಿ ಅತ್ಯದಲ್ಲಿ ಅಥವಾ ಮಾರ್ಚ್ ತಿಂಗಳ ಆರಂಭದಲ್ಲಿ ಜಮೆಯಾಗುತ್ತದೆ. ಏಕೆಂದರೆ ಪ್ರತಿ ನಾಲ್ಕು ತಿಂಗಳಿಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆ.
ಕಳೆದ ನವೆಂಬರ್ ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಿತ್ತು ಹಾಗಾಗಿ ಮುಂದಿನ ಫೆಬ್ರವರಿ ತಿಂಗಳ ಅಂತ್ಯ ಅಥವಾ ಮಾರ್ಚ್ ತಿಂಗಳಲ್ಲಿ ಹಣ ಜಮೆಯಾಗಲಿದೆ.
ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಲು ಸಣ್ಣ ಮತ್ತು ಅತೀ ಭೂಮಾಲಿಕ ರೈತರಾಗಿರಬೇಕು. ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ. ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು, 10 ಸಾವಿರಕ್ಕಿಂತ ಹೆಚ್ಚು ಪಿಂಚಣಿ ಪಡೆಯುವವರು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುವುದಿಲ್ಲ. ರೈತರು ಒಟ್ಟು 2 ಹೆಕ್ಟೇರಿಗಿಂತ ಕಡಿಮೆ ಭೂಮಿ ಹೊಂದಿದವರಿಗೆ ಹಣ ಜಮೆಯಾಗುವುದು. ವೈದ್ಯರು, ವಕೀಲರು, ಇಂಜನೀಯರರು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುವುದಿಲ್ಲ. ಮಾಜಿ ಮತ್ತ ಹಾಲಿ ಸಚಿವರು, ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಈ ಸೌಲಭ್ಯ ಸಿಗುವುದಿಲ್ಲ.
ಆಧಾರ್ ಮತ್ತು ಬ್ಯಾಂಕ್ ಖಾತೆಯೊಂದಿಗೆ ಇಕೆವೈಸಿ ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಒಂದು ವೇಳೆ ಇಕೆವೈಸಿ ಆಗಿಲ್ಲವಾದರೆ ಅಥವಾ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಇಕೆವೈಸಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ನಮೂದಿಸಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು. ಇಕೆವೈಸಿ ಆಗಿದ್ದರೆ ಯುವರ್ ಇಕೆವೈಸಿ ಸಕ್ಸೆಸ್ ಫುಲಿ ಡನ್ ಎಂಬ ಮಾಹಿತಿ ಕಾಣಿಸುತ್ತದೆ. ಒಂದು ವೇಳೆ ಆಗಿಲ್ಲವಾದರೆ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ನೀವು ಇಕೆವೈಸಿ ಮಾಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇https://chat.whatsapp.com/FM1qVgdNtJm5m1M9SL0BHc?mode=ac_t
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…