Categories: information

ಪಿಎಂ ಕಿಸಾನ್ ಮಾನಧನ್ ಯೋಜನೆಯಡಿ ರೈತರಿಗೆ ತಿಂಗಳಿಗೆ 3 ಸಾವಿರ ಹೀಗೆ ಸಿಗಲಿದೆ

ಪಿಎಂ ಕಿಸಾನ್ ಮಾನಧನ್ ಯೋಜನೆಯಡಿ ಸಣ್ಣ ಮತ್ತು ಅಂಚಿನ ರೈತರಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ಮಹತ್ವದ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ಅರ್ಹ ರೈತರು ನಿಗದಿತ ವಯಸ್ಸಿನ ನಂತರ ತಿಂಗಳಿಗೆ ₹3,000 ಪಿಂಚಣಿ ಪಡೆಯಬಹುದು. ಅರ್ಹತೆ, ಕೊಡುಗೆ ಮೊತ್ತ ಮತ್ತು ಅರ್ಜಿ ವಿಧಾನವನ್ನು ಇಲ್ಲಿ ವಿವರವಾಗಿ ತಿಳಿದುಕೊಳ್ಳಿ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಪಿಎಂ ಕಿಸಾನ್ ಮಾನಧನ್ ಯೋಜನೆಯಡಿ ರೈತರಿಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ಪಿಂಚಣಿ ಸಿಗುತ್ತದೆ. ಅಂದರೆ ವರ್ಷಕ್ಕೆ  36 ಸಾವಿರ ರೂಪಾಯಿ ಪಡೆಯಬಹುದು. ಈ ಪಿಂಚಣಿಗಾಗಿ ರೈತರು ತಮ್ಮ ವಯಸ್ಸಿನ ಪ್ರಕಾರ ಪ್ರತಿ ತಿಂಗಳು ಈ ಯೋಜನೆಯಲ್ಲಿ ಹಣವನ್ನು ಠೇವಣಿ ಮಾಡಬೇಕು.  ಹೌದು, ಕೇಂದ್ರ ಸರ್ಕಾರವು ಜಾರಿಗೆ ತಂದ ಈ ಯೋಜನೆಯಿಂದರೈತರಿಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ಪೆನ್ಶನ್ ದೊರೆಯಲಿದೆ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.

Thank you for reading this post, don't forget to subscribe!

ಪಿಎಂ ಕಿಸಾನ್ ಮಾನಧನ್ ಯೋಜನೆ ಅಡಿಯಲ್ಲಿ ಎರಡು ಹೆಕ್ಟೇರ್ ವರೆಗೆ ಜಮೀನು ಹೊಂದಿರುವ ರೈತರು  18 ರಿಂದ 40 ವಯೋಮಾನದೊಳಗಿರನವರು ಈ ಯೋಜನೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ

ಅರ್ಹ ರೈತರು ಪ್ರತಿ ತಿಂಗಳು 55 ರಿಂದ 200 ರೂಪಾಯಿಯವರೆಗೆ ಹಣ ತುಂಬಬೇಕು. ಉಳಿದ ಹಣವನ್ನು ಕೇಂದ್ರ ಸರ್ಕಾರ ಕೂಡ ಇಸ್ಟೇ ಹಣವನ್ನು ತುಂಬುತ್ತದೆ ಒಂದು ವೇಳೆ 18 ವಯಸ್ಸಿನಿಂದ ಈ ಯೋಜನೆ ಆರಂಭಿಸಿದರೆ ತಿಂಗಳಿಗೆ ಕನಿಷ್ಟ 55 ರೂಪಾಯಿಯಂತೆ ಕಟ್ಟಬೇಕು. ಒಂದು ವೇಳೆ 40ನೇ ವಯಸ್ಸಿನಲ್ಲಿ ಯೋಜನೆ ಪಡೆದರೆ ತಿಂಗಳಿಗೆ 200 ರೂಪಾಯಿ ಕಟ್ಟಬೇಕು.

60 ವರ್ಷದವರೆಗೆ ಪ್ರತಿ ತಿಂಗಳು ಪಿಂಚಣಿ ನಿಧಿಗೆ ಕಟ್ಟಬೇಕು. ಅದಾದ ಬಳಿಕ ತಿಂಗಳಿಗೆ 3 ಸಾವಿರ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತವನ್ನು ಪಿಂಚಣಿಯನ್ನು ರೈತರು ಪಡೆಯಬಹುದು.

ಪಿಎಂ ಕಿಸಾನ್ ಮಾನ್ ಧನ್ ಯೋಜನೆಯಡಿ ಸೌಲಭ್ಯ ಪಡೆಯಲು ಹೆಸರು ಎಲ್ಲಿ ನೋಂದಾಯಿಸಬೇಕು?

ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಬೇಕು. ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ವಿವರ ನೀಡಬೇಕು. ರೈತರು ವಯಸ್ಸಿಗೆ ಅನುಗುಣವಾಗಿ ಅವರು ಕನಿಷ್ಟ ಎಷ್ಟು ಹಣ ಕಟ್ಟಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ. ಯೋಜನೆಯಲ್ಲಿ ನೋಂದಣಿ ಮಾಡಿಕೊಂಡ ನಂತರ ರೈತರಿಗೆ ವಿಶೇಷ ಕಿಸಾನ್ ಪೆನ್ಶನ್  ಅಕೌಂಟ್ ನಂಬರ್ ನೀಡಲಾಗುವುದು. ಬಳಿಕ ಕಿಸಾನ್ ಕಾರ್ಡ್ನೀಡಲಾಗುವುದು.

PMkisan mandhan yojana benefit  ಯಾವ ವಯಸ್ಸಿಗೆ ಎಷ್ಟು ಪೆನ್ಶನ್ ಕಟ್ಟಬೇಕು? ಹೀಗೆ ಚೆಕ್ ಮಾಡಿ

ನಿಮ್ಮ ವಯಸ್ಸಿನ ಪ್ರಕಾರ ಎಷ್ಟು ಪೆನ್ಶನ್ ಹಣ ಕಟ್ಟಬೇಕು ಎಂಬುದನ್ನು ಚೆಕ್ ಮಾಡಲು ಈ

https://maandhan.in/show_content.php?lang=1&level=1&ls_id=138&lid=115&page=6

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಆಗ ನಿಮಗೆ ಪಿಎಂ ಕಿಸಾನ್ ಮಾನ್ಧನ್ ಕ್ಯಾಲ್ಕುಲೇಶನ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ವಯಸ್ಸು ಹಾಗೂ ಅದರ ಮುಂದೆ ಪೆನ್ಶನ್ ಹಣ ಇರುತ್ತದೆ.

10 ರಿಂದ 40 ವಯೋಮಾನದವರಿಗಿನ ಯಾವುದೇ ರೈತರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. 60 ವರ್ಷ ತುಂಬಿದ ನಂತರ ರೈತರು ಮಾಸಿಕವಾಗಿ 3 ಸಾವಿರ ರೂಪಾಯಿ ಪಿಂಚಣಿ ಪಡೆಯುತ್ತಾರೆ.

ಪಿಎಂ ಕಿಸಾನ್ ಮಾನಧನ್ ಯೋಜನೆಗೆ ನೋಂದಣಿ ಮಾಡಲು ಬೇಕಾಗುವ ದಾಖಲೆಗಳು

ಆಧಾರ್ ಕಾರ್ಡ್, ವಯಸ್ಸಿನ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ಪಾಸ್ ಬುಕ್, ಮೊಬೈಲ್ ಸಂಖ್ಯೆ, ಪಾಸ್ಪೋರ್ಟ್ ಗಾತ್ರದ ಫೋಟೋ ಇರಬೇಕು.

ಪಿಎಂ ಕಿಸಾನ್ ಮಾನಧನ್ ಯೋಜನೆಯಂತೆ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಪಿಎಂ ಕಿಸಾನ್ ಯೋಜನೆ, ಪಿಎಂ ಕಿಸಾನ್ ಶ್ರಮಯೋಗಿ ಯೋಜನೆ, ಪಿಎಂ ಕಿಸಾನ್ ಮಾನಧನ್ ಯೋಜನೆ,ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಸೇರಿದಂತೆ  ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ಇಂದಿನಿಂದ ನಾಲ್ಕು ದಿನ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಲ್ಲೆಲ್ಲಿ ಮಳೆ ಇಲ್ಲಿದೆ ಮಾಹಿತಿ!

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22…

56 years ago

Heavy Rain: 4 ದಿನ ಭಾರೀ ಮಳೆ, ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ!

25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ…

56 years ago

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ Mobile ನಲ್ಲೇ ಪಡೆಯಿರಿ ಜಾತಿ-ಆದಾಯ ಪ್ರಮಾಣಪತ್ರ

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್‌ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ,…

56 years ago

ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ…

56 years ago

ಮಾರ್ಚ್ 15 ರಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ…

56 years ago

ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಹೀಗೆ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮೊಬೈಲ್‌ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ…

56 years ago