PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿ

ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣ ಜಮಾ ಆಗುತ್ತದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಈಗಾಗಲೇ ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗಾಗಿ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (pm kisan yojana) ಬಗ್ಗೆ ನಿಮಗೆಲ್ಲ ತಿಳಿದಿದೆ.

Thank you for reading this post, don't forget to subscribe!

ಆದರೆ ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಹೇಳ ಹೊರಟಿರುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಬಗ್ಗೆ.

ಇದನ್ನೂ ಓದಿ: Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಹೌದು ಸ್ನೇಹಿತರೆ ಪ್ರಧಾನಿ ಮೋದಿಯವರ ಈ ಮಹತ್ವಾಕಾಂಕ್ಷಿ ಯೋಜನೆಯ ಮೂಲಕ ವೃದ್ಧ್ಯಾಪ್ಯದಲ್ಲಿರುವ ರೈತರಿಗೆ ಹಾಗೂ ಇತರೆ ನಾಗರಿಕರಿಗೆ ಯಾರ ಹಂಗಿಲ್ಲದೆ ಸ್ವಂತ ಖರ್ಚಿನಲ್ಲಿ ಇಳಿ ವಯಸ್ಸನ್ನು ಕಳೆಯಲು 60 ವರ್ಷ ದಾಟಿದ ವೃದ್ಧರಿಗೆ ಪ್ರತಿ ತಿಂಗಳು ಸಹಾಯವಾಗಲಿ ಎಂದು 3,000 ರೂಪಾಯಿ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತದೆ.

ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ (pm kisan mandhan yojana) ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣ ಜಮಾ ಆಗುತ್ತದೆ.

ಹಾಗಾದರೆ ಈ ಯೋಜನೆಗೆ ಯಾರು ಯಾರು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು ಯಾವುವು? ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಏನಿದು ಪಿಎಂ ಕಿಸಾನ್ ಮಾನ್ ಧನ್ ಯೋಜನೆ?

ರೈತ ಮಿತ್ರರೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಮಾನ್ ಧನ್ ಯೋಜನೆ ಮೂಲಕ ಹದಿ ಹರೆಯದ ಯೌವ್ವನದಲ್ಲಿ ಕಷ್ಟಪಟ್ಟು ದುಡಿದು ಹಣ್ಣಾದ ರೈತರಿಗೆ, ಇಳಿ ವಯಸ್ಸಿನಲ್ಲಿ ಮಕ್ಕಳು ಮನೆಯಿಂದ ಹೊರಗೆ ಹಾಕಿದರೆ ಯಾರ ಹಂಗಿಲ್ಲದೆ ಬದುಕಲು ರೈತರಿಗೆ ಹಾಗೂ ಇತರೆ ನಾಗರಿಕರಿಗೆ ಪ್ರತಿ ತಿಂಗಳು 3,000 ರೂಪಾಯಿ ಹಣವನ್ನು ಪಿಂಚಣಿಯ ರೂಪದಲ್ಲಿ ನೀಡುತ್ತಿದೆ.

ಯಾರು ಯಾರು ಅರ್ಜಿ ಸಲ್ಲಿಸಬಹುದು?

ಇನ್ನು ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಲಾಗಿರುವ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯ:-

  • ಅರ್ಜಿ ಸಲ್ಲಿಸಲು ಬಯಸುವವರ ವಯಸ್ಸು 20 ರಿಂದ 42 ಆಗಿರಬೇಕು.
  • ಅರ್ಜಿ ಸಲ್ಲಿಸುವವರು ತಿಂಗಳ ಆದಾಯ 15,000 ರೂ. ಗಿಂತ ಹೆಚ್ಚಿರಬಾರದು
  • ಅರ್ಜಿ ಸಲ್ಲಿಸುವವರು 2 ಹೆಕ್ಟೇರ್ (5 ಎಕರೆ) ಗಿಂತ ಹೆಚ್ಚಿನ ಭೂಮಿಯನ್ನು ಹೊಂದಿರಬಾರದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು ?

ಇನ್ನು ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು ಎಂದರೆ:

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಐಡೆಂಟಿಟಿ ಕಾರ್ಡ್
  • ಫೋಟೋ
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಫಲಾನುಭವಿಗಳು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಮಾನ್ ಧನ್ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಒಂದು ವೇಳೆ ನಿಮಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವುದು ಗೊತ್ತಾಗದಿದ್ದರೆ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಅಥವಾ ಯಾವುದಾದರೂ ನೆಟ್ ಸೆಂಟರ್ ಗೆ ಹೋಗಿ ಅರ್ಜಿ ಸಲ್ಲಿಸಿ.

ಈ ಯೋಜನೆಯ ಲಾಭ ಏನು ?

ಅರ್ಜಿ ಸಲ್ಲಿಸಿದ ನಂತರ  ಪ್ರತಿ ತಿಂಗಳು ನಿಮ್ಮ ಖಾತೆಯಿಂದ 55 ರೂಪಾಯಿಯಿಂದ 200 ರೂಪಾಯಿ ಹಣ ನಿಮ್ಮ ವಯಸ್ಸಿನ ಅನುಗುಣವಾಗಿ ನಿಮ್ಮ ಬ್ಯಾಂಕ್ ನಿಂದ ಕಟ್ ಆಗುತ್ತದೆ.

42 ನೇ ವಯಸ್ಸಿಗೆ ಬರುವಷ್ಟರಲ್ಲಿ  ಒಟ್ಟು 27,000 ರೂಪಾಯಿ ಹಣವನ್ನು ನೀವು ಕಟ್ಟಿದಂತಾಗುತ್ತದೆ. ಇದಕ್ಕೆ ಕೇಂದ್ರ ಸರ್ಕಾರ ಪ್ರತಿ ತಿಂಗಳು ನೀವು ಕಟ್ಟುವ ಹಣದಷ್ಟೇ ಕೂಡಿಸಿ ವೃದ್ಧಾಪ್ಯದಲ್ಲಿ ಅಂದರೆ ನಿಮಗೆ 60 ವರ್ಷ ವಯಸ್ಸು ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣವನ್ನು ಜಮಾ ಮಾಡುತ್ತದೆ.

ಇದನ್ನೂ ಓದಿ: ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಕೇಂದ್ರ ಸರ್ಕಾರ ಹೀಗೆ ಪ್ರತಿ ತಿಂಗಳು 3,000 ರೂಪಾಯಿಯನ್ನು ನೀವು ಸಾಯುವವರೆಗೂ ನಿಮ್ಮ ಖಾತೆಗೆ ಜಮಾ ಮಾಡುತ್ತಲೇ ಇರುತ್ತದೆ. ನೀವು ಕಟ್ಟಿರುವ 27,000 ರೂಪಾಯಿ ಹಣ 60 ವರ್ಷ ದಾಟಿದ ನಂತರ ಕೇವಲ ಒಂದು ವರ್ಷದಲ್ಲೇ ನಿಮ್ಮ ಖಾತೆಗೆ ಜಮಾ ಆಗುತ್ತದೆ. ಮುಂದೆ ನೀವು ಎಷ್ಟು ವರ್ಷ ಬದುಕುತ್ತಿರೋ ಅಲ್ಲಿಯವರೆಗೆ ಬರುವ ಹಣ ನಿಮಗೆ ಲಾಭವೇ ಸರಿ.

ಹಾಗಾದರೆ ಮತ್ತೇಕೆ ತಡ ಈಗಲೇ ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ಯಾವುದಾದರೂ ಕಂಪ್ಯೂಟರ್ ಸೆಂಟರ್ ಗೆ ಹೋಗಿ ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ ಅರ್ಜಿ ಸಲ್ಲಿಸಿ.

ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಮಾನ್ ಧನ್ ಜಾಲತಾಣಕ್ಕೆ ಭೇಟಿ ನೀಡಿ.

https://maandhan.in/

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago