PM Kisan: ಅನರ್ಹ ಫಲಾನುಭವಿಗಳಿಂದ ಹಣ ವಾಪಸ್! ಇಲ್ಲಿಯವರೆಗೆ 335 ಕೋಟಿ ರೂ. ಹಿಂಪಡೆದ ಕೇಂದ್ರ ಸರ್ಕಾರ!

ಇದೀಗ ಕೇಂದ್ರ ಸರ್ಕಾರವು ಅಂತಹ ಅನರ್ಹ ಫಲಾನುಭವಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದು, ಅಕ್ರಮವಾಗಿ ಪಿಎಂ ಕಿಸಾನ್ ಸಮ್ಮಾನ ಹಣ ಪಡೆಯುತ್ತಿದ್ದ ಅನರ್ಹ ಫಲಾನುಭವಿಗಳಿಂದ ಹಣ ವಾಪಸ್ ಪಡೆಯುತ್ತಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ (PM Kisan Samman Yojana) ಅಡಿಯಲ್ಲಿ ಲಾಭ ಪಡೆಯುತ್ತಿದ್ದ ಅನರ್ಹ ಫಲಾನುಭವಿಗಳಿಂದ ಇದೀಗ ಕೇಂದ್ರ ಸರ್ಕಾರ ಹಣ ವಾಪಸ್ ತೆಗೆದುಕೊಳ್ಳುತ್ತಿದೆ.

Thank you for reading this post, don't forget to subscribe!

ಹೌದು ರೈತ ಮಿತ್ರರೇ, ಆರ್ಥಿಕವಾಗಿ ಹಿಂದುಳಿದ ಬಡ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿ ಎಂದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2019 ರಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿತ್ತು.

ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400 ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಈ ಯೋಜನೆ ಜಾರಿಗೆ ಬಂದ ಹೊಸದರಲ್ಲಿ ಆಧಾರ್ ತಿದ್ದುಪಡಿ ಹಾಗೂ ಜಮೀನಿನ ದಾಖಲೆಗಳ ತಿದ್ದುಪಡಿ ಮಾಡಿ ಅರ್ಜಿ ಸಲ್ಲಿಸಲು ರಾಜ್ಯ ಸರಕಾರಗಳಿಗೆ ಜವಾಬ್ದಾರಿ ನೀಡಿತ್ತು. ಆದರೆ ಕೇಂದ್ರ ಸರ್ಕಾರದ ಈ ಸಡಿಲಿಕೆಯನ್ನು ದುರುಪಯೋಗ ಪಡಿಸಿಕೊಂಡು ಹಲವು ಅನರ್ಹ ಫಲಾನುಭವಿಗಳು (PM Kisan Beneficiary List) ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆಯುತ್ತಿದ್ದರು.

ಇದೀಗ ಕೇಂದ್ರ ಸರ್ಕಾರವು ಅಂತಹ ಅನರ್ಹ ಫಲಾನುಭವಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದು, ಅಕ್ರಮವಾಗಿ ಪಿಎಂ ಕಿಸಾನ್ ಸಮ್ಮಾನ ಹಣ ಪಡೆಯುತ್ತಿದ್ದ ಅನರ್ಹ ಫಲಾನುಭವಿಗಳಿಂದ ಹಣ ವಾಪಸ್ ಪಡೆಯುತ್ತಿದೆ.

ಹೌದು ರೈತ ಬಾಂಧವರೇ, ಅರ್ಹ ರೈತರಿಗೆ ಸಿಗಬೇಕಾದ ಈ ಯೋಜನೆಯ ಲಾಭವನ್ನು ಅನರ್ಹ ಫಲಾನುಭವಿಗಳು (pm Kisan not eligible) ನಕಲಿ ದಾಖಲೆಗಳನ್ನು ಸಲ್ಲಿಸಿ ಇಲ್ಲಿಯವರೆಗೆ ಹಣ ಪಡೆಯುತ್ತಿದ್ದರು. ಆದರೆ ಅದಕ್ಕೆ ಕೇಂದ್ರ ಸರಕಾರ ಇದೀಗ ಬ್ರೇಕ್ ಹಾಕಿದೆ.

ಇದನ್ನೂ ಓದಿ: ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ! ಮತ್ತೆ ಕರ್ನಾಟಕದಲ್ಲಿ ಮಳೆ! ಎಲ್ಲೆಲ್ಲಿ ಆಗಲಿದೆ ಚೆಕ್ ಮಾಡಿ !

ಇಲ್ಲಿಯವರೆಗೆ ಇಂತಹ ಅನರ್ಹ ಫಲಾನುಭವಿಗಳಿಂದ ಕೇಂದ್ರ ಸರಕಾರವು ಬರೋಬ್ಬರಿ 335 ಕೋಟಿ ರೂಪಾಯಿ ಹಣವನ್ನು ಹಿಂಪಡೆದಿದೆ. ಇನ್ನು ಈ ಕಾರ್ಯ ಮುಂದುವರೆದಿದ್ದು ಈ ಮೊತ್ತ ಇನ್ನು ಹೆಚ್ಚಾಗಲಿದೆ ಎಂದು ಊಹಿಸಲಾಗಿದೆ.

ಪಿಎಂ ಕಿಸಾನ್ ಯೋಜನೆಗೆ ಅನರ್ಹರು ಯಾರು ?

ಪಿಎಂ ಕಿಸಾನ್ ಯೋಜನೆಯಿಂದ ಲಾಭ ಪಡೆಯಲು ಬಯಸುವ ರೈತರು ತಮ್ಮ ಹೆಸರಿನಲ್ಲಿ ಜಮೀನನ್ನು ಹೊಂದಿರಬೇಕು. ಅಂತಹ ರೈತರ ಕುಟುಂಬದಲ್ಲಿ ಯಾವ ಸದಸ್ಯನೂ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರಕಾರದಲ್ಲಿ ನೌಕರಿ ಮಾಡುತ್ತಿರಬಾರದು.

ಅಲ್ಲದೇ ಅಂತಹ ರೈತ ಕುಟುಂಬದವರು ಆದಾಯ ತೆರಿಗೆಯನ್ನು ಪಾವತಿ ಮಾಡುತ್ತಿರಬಾರದು ಮತ್ತು GST ಯನ್ನು ಕೂಡ ಪಾವತಿ ಮಾಡುತ್ತಿರಬಾರದು. 

ಅಷ್ಟೇ ಅಲ್ಲದೆ ಅಂತಹ ಕುಟುಂಬದ ಯಾವ ಸದಸ್ಯನೂ ಬಿಸಿನೆಸ್ ಮಾಡುತ್ತಿರಬಾರದು ಎಂದು ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದ ಹೊಸದರಲ್ಲಿಯೇ ಈ ನಿಯಮಗಳನ್ನು ತಿಳಿಸಿತ್ತು.

ಆದರೂ ಹಲವರು ಈ ಯೋಜನೆಯ ಸಡೀಲಿಕೆಯನ್ನು ದುರುಪಯೋಗಪಡಿಸಿಕೊಂಡು ಇಲ್ಲಿಯವರೆಗೂ ಈ ಯೋಜನೆಯ ಲಾಭ ಪಡೆಯುತ್ತಿದ್ದರು. ಆದರೆ ಅಂತಹ ಅನರ್ಹ ಫಲಾನುಭವಿಗಳ ಆಟ ಇನ್ನು ಮುಂದೆ ನಡೆಯುವುದಿಲ್ಲ, ಅಕ್ರಮವಾಗಿ ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ

ಇನ್ನು ಪಿಎಂ ಕಿಸಾನ್ ಸಮ್ಮಾನ ಯೋಜನೆಯ 19 ನೇ ಕಂತು ಮುಂದಿನ ವರ್ಷ ಫೆಬ್ರುವರಿ ತಿಂಗಳ ಮೊದಲ ವಾರದಲ್ಲಿ ಜಮಾ ಅಗಲಿದ್ದು, ಅದಕ್ಕಾಗಿ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಪಿಎಂ ಕಿಸಾನ್: 19 ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಹು ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಮುಖವಾದ ಯೋಜನೆ ಎಂದರೆ ಅದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆ.

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ ಜಮಾ ಆಗಿದೆ. ಇದೀಗ ಕೇಂದ್ರ ಸರಕಾರ 19 ನೇ ಕಂತಿಗೆ ಅರ್ಹ ರೈತರ ಪಟ್ಟಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಮಿನಿ ಟ್ರ್ಯಾಕ್ಟರ್ ಮತ್ತು ಪವರ್ ಟಿಲ್ಲರ್ ಖರೀದಿಗೆ ಶೇ.90 ರಷ್ಟು ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ !

ಹಾಗಾದರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂದು ಚೆಕ್ ಮಾಡುವುದು ಹೇಗೆ ? ಒಂದು ವೇಳೆ ನಿಮ್ಮ  ಹೆಸರು ಇಲ್ಲದೆ ಇದ್ದರೆ ಏನು ಮಾಡಬೇಕು ಎಂಬ ಸಂಪೂರ್ಣ ಮಾಹಿತಿ ಪಡೆಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಪಿಎಂ ಕಿಸಾನ್ ಅರ್ಹ ಫಲಾನುಭವಿಗಳ ಪಟ್ಟಿ ಹೀಗೆ ಚೆಕ್ ಮಾಡಿ:

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://pmkisan.gov.in/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Beneficiary List ಮೇಲೆ ಕ್ಲಿಕ್ ಮಾಡಿ.

PM Kisan Beneficiary List

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮದ ಹೆಸರನ್ನು ನಮೂದಿಸಿ, Get Report ಮೇಲೆ ಕ್ಲಿಕ್ ಮಾಡಿ.

PM Kisan Samman Nidhi

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮ್ಮ ಗ್ರಾಮದಲ್ಲಿ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿಗೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಇದರಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.

PM Kisan 18th installment date

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ.

ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದೆ ಇರಲು ಪ್ರಮುಖ ಕಾರಣವೆಂದರೆ ನಿಮ್ಮ ಪಿಎಂ ಕಿಸಾನ್ ಖಾತೆ ಇಕೆವೈಸಿ ಆಗದೇ ಇರುವುದು.

ಮೊಬೈಲ್ ನಲ್ಲೇ ಸುಲಭವಾಗಿ ನಿಮ್ಮ ಪಿಎಂ ಕಿಸಾನ್ ಇಕೆವೈಸಿ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಮೊಬೈಲ್ ನಲ್ಲೇ ಪಿಎಂ ಕಿಸಾನ್ ಇಕೆವೈಸಿ ಮಾಡುವುದು ಹೇಗೆ?

ರೈತರೇ, ರಾಜ್ಯ ಸರ್ಕಾರ ಇಲ್ಲಿಯವರೆಗೆ ಪಿಎಂ ಕಿಸಾನ್ ಫ್ರೂಟ್ಸ್ ಐಡಿಗೆ ಇಕೆವೈಸಿ ಆಗದೇ ಇರುವ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇಂತಹ ರೈತರಿಗೆ ಬೆಳೆ ಪರಿಹಾರ ಹಣ, ಬೆಳೆ ವಿಮೆ ಹಣ, ಬರಗಾಲ ಪರಿಹಾರ ಹಣ ಅಥವಾ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ ಹಣ ಜಮಾ ಆಗುವುದಿಲ್ಲ.

ಇದನ್ನೂ ಓದಿ: ಒಂದು ವಾರದಲ್ಲಿ ರೈತರಿಗೆ 120 ಕೋಟಿ ರೂಪಾಯಿ ಹಿಂಗಾರು ಬೆಳೆ ಹಾನಿ ಪರಿಹಾರ ಹಣ ಜಮಾ: ಕಂದಾಯ ಸಚಿವ ಕೃಷ್ಣ ಭೈರೇಗೌಡ

ಹಾಗಾದರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂದು ಚೆಕ್ ಮಾಡುವುದು ಹೇಗೆ ? ಒಂದು ವೇಳೆ ನಿಮ್ಮ ಇಕೆವೈಸಿ ಆಗದೇ ಇದ್ದರೆ ಏನು ಮಾಡಬೇಕು ಎಂಬ ಸಂಪೂರ್ಣ ಮಾಹಿತಿ ಪಡೆಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://pmkisan.gov.in/aadharekyc.aspx

ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

PM Kisan status

ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.

PM Kisan Karnataka 2024 List

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago