ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡಿದ ಮೊದಲ ದಿನವೇ ತಮ್ಮ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆಗೆ ಸಹಿ ಹಾಕಿದ್ದರು.
Thank you for reading this post, don't forget to subscribe!ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ಜಾರಿಗೆ ತರಲಾದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನ ಕೂಸು ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯು ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನಿಜವಾಗಿಯೂ ಒಂದು ವರದಾನ ಎಂದು ಸಾಬೀತಾಗಿದೆ. ವರ್ಷಕ್ಕೆ ಒಟ್ಟು 3 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಪ್ರತಿಯೊಬ್ಬ ರೈತನಿಗೂ ವರ್ಷಕ್ಕೆ 6,000 ರೂಪಾಯಿ ಹಣ ನೇರವಾಗಿ ಅವನ ಖಾತೆಗೆ ಜಮಾ ಆಗುತ್ತದೆ.
ಇದನ್ನೂ ಓದಿ: ಬರ ಪರಿಹಾರ: 17 ಲಕ್ಷ ರೈತರ ಖಾತೆಗೆ 3,000 ಹಣ ಜಮಾ! ನಿಮಗೂ ಬಂತಾ ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಇಲ್ಲಿಯವರೆಗೆ ಒಟ್ಟು 16 ಕಂತುಗಳಲ್ಲಿ ಪ್ರತಿಯೊಬ್ಬ ಅರ್ಹ ರೈತನ ಖಾತೆಗೆ 2,000 ರೂಪಾಯಿಯಂತೆ ಒಟ್ಟು 32,000 ರೂಪಾಯಿ ಹಣ ನೇರವಾಗಿ ಅವನ ಖಾತೆಗೆ ಜಮಾ ಆಗಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮತಕ್ಷೇತ್ರವಾದ ವಾರಾಣಸಿಯಲ್ಲಿ ಇವತ್ತು ದೇಶದ 9.3 ಕೋಟಿ ರೈತರ ಖಾತೆಗೆ ಒಟ್ಟು 20,000 ಕೋಟಿ ರೂಪಾಯಿಯನ್ನು ಎಲ್ಲಾ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಿದ್ದಾರೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ: 3 ನೇ ಕಂತಿನ ಹಣ ಜಮಾ |ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!
ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/Rpt_BeneficiaryStatus_pub.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ವಿವರಗಳನ್ನು ನಮೂದಿಸಿ Get Report ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಪಿಎಂ ಕಿಸಾನ್ ಸಮ್ಮಾನ 17 ನೇ ಕಂತಿಗೆ ಅರ್ಹವಾಗಿರುವ ನಿಮ್ಮ ಗ್ರಾಮದ ಎಲ್ಲಾ ರೈತರ ಹೆಸರುಗಳು ಕಾಣಿಸುತ್ತವೆ.

ಹಂತ -4) ಈ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಹುಡುಕಿ. ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಇವತ್ತು ಬಿಡುಗಡೆ ಆಗಲಿರುವ 2,000 ರೂಪಾಯಿ ಹಣ ಜಮಾ ಆಗುತ್ತದೆ.
ಒಂದುವೇಳೆ ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇರದಿದ್ದರೆ, ನೀವು ಕೆಳಗೆ ತೋರಿಸಿದಂತೆ ಇಕೆವೈಸಿ ಮಾಡಿಸಿದ್ದೀರಾ ಎಂದು ಚೆಕ್ ಮಾಡಿ.
ಇಕೆವೈಸಿ ಆಗಿದೆಯಾ ಎಂದು ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://exlink.pmkisan.gov.in/aadharekyc.aspx
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ ಎಲ್ಲಾ ಸಂತ್ರಸ್ತ ತಾಲೂಕುಗಳಿಗೆ ಸುಮಾರು 1,033 ಕೋಟಿ ರೂಪಾಯಿ ಹಾನಿಯಾಗಿದ್ದು, ಈ ಪರಿಹಾರ (parihara) ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ನಿಮಗೆ ಗೊತ್ತೇ ಇದೆ ಹಾಗಾದರೆ ಈ ಅಂಕಣದಲ್ಲಿ ಯಾರಿಗೆ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳೋಣ.
- ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿCheck your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು, ರೈತರು ತಮ್ಮ ಬಳಿಯಿರುವ ಫೋನ್ ನಲ್ಲೇ ಆಕಾರಬಂದ್ ಚೆಕ್ ಮಾಡಬಹುದು.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
- ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.
- RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು ಸಾವಿರಾರು ರೈತರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಿದೆ. ಇನ್ನು ಹಲವು ವರ್ಷಗಳಿಂದ ಬಿತ್ತಿ ಬೆಳೆದ ಜಮೀನಿನ ಮೇಲೆ ಹೀಗೆ ಏಕಾಏಕಿ ಹಕ್ಕು ಚಲಾಯಿಸುತ್ತಿರುವ ವಕ್ಫ್ ಬೋರ್ಡ್ ವಿರೋಧಿಸಿ ಹಲವಾರು ರೈತರು ಪ್ರತಿಭಟನೆಗೆ ಇಳಿದಿದ್ದಾರೆ.
- ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ ಬೆಳೆ ವಿಮೆ ಕಂಪನಿಗಳಿಗೆ ನೀಡಲಾಗಿರುತ್ತದೆ. ಪ್ರತಿಯೊಂದು ಜಿಲ್ಲೆಗೂ ಬೇರೆ ಬೇರೆ ವಿಮಾ ಕಂಪನಿ ಇರುತ್ತದೆ.
- ನಿಮ್ಮ ಜಮೀನನ್ನು ನಿಮ್ಮ ನೆರೆಯವರು ಒತ್ತುವರಿ ಮಾಡಿದ್ದಾರೆಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ?
- ಈ ವರ್ಷದ ಮುಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಇಂತಹ ಬೆಳೆ ಹಾನಿಯಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ಪರಿಹಾರ ಹಣ ಜಮಾ ಮಾಡುತ್ತದೆ.
- 50,000 ಕ್ಕೂ ಹೆಚ್ಚು ರೇಷನ್ ಕಾರ್ಡ್ ರದ್ದು ! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಚೆಕ್ ಮಾಡಿಹೌದು ಸ್ನೇಹಿತರೆ, ಕೇವಲ ಶಿವಮೊಗ್ಗ ಜಿಲ್ಲೆಯೊಂದರಲ್ಲೇ 50,000 ಕ್ಕು ಹೆಚ್ಚು ನಕಲಿ ರೇಶನ್ ಕಾರ್ಡುಗಳನ್ನ ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.
- ತುಂತುರು ನೀರಾವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.ತುಂತುರು ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ರೈತರಿಗೆ ಭರ್ಜರಿ ಅವಕಾಶ ಲಭ್ಯವಾಗಿದೆ. ಕೃಷಿ ಇಲಾಖೆಯ ವತಿಯಿಂದ ತುಂತುರು ನೀರಾವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಿಂದ ನೀರಿನ ವ್ಯರ್ಥ ಕಡಿಮೆಯಾಗುವುದರ ಜೊತೆಗೆ ಬೆಳೆಗಳ ಉತ್ಪಾದಕತೆ ಹೆಚ್ಚಾಗಲಿದೆ. ಸಣ್ಣ ಹಾಗೂ ಅತಿಸಣ್ಣ ರೈತರಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಅರ್ಹ ರೈತರು ನಿಗದಿತ ಅವಧಿಯೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯೋಜನೆಗೆ ಸಂಬಂಧಿಸಿದ ಅರ್ಹತೆ, ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ರೈತರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಕಡಿಮೆ ವೆಚ್ಚದಲ್ಲಿ ಆಧುನಿಕ ನೀರಾವರಿ ವ್ಯವಸ್ಥೆ ಅಳವಡಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.
- ನಿಮ್ಮ ಜಮೀನಿನ ಅಳತೆಯನ್ನು ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲಿ ಹೀಗೆ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಮೊಬೈಲ್ ಬಳಸಿ ನಿಮ್ಮ ಜಮೀನಿನ ಅಳತೆಯನ್ನು ಒಂದೇ ನಿಮಿಷದಲ್ಲಿ ಹೇಗೆ ಮಾಡಬಹುದು ಎಂಬುದನ್ನು ಈ ವಿಡಿಯೋದಲ್ಲಿ ಸರಳವಾಗಿ ತಿಳಿಸಲಾಗಿದೆ. ರೈತರಿಗೆ ಹಾಗೂ ಜಮೀನು ಮಾಲೀಕರಿಗೆ ಉಪಯುಕ್ತ ಸಂಪೂರ್ಣ ಮಾಹಿತಿ.










