ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕೇಂದ್ರ ಸರ್ಕಾರ ಮಹಿಳಾ ಮತ್ತು ಗ್ರಾಮೀಣ ಪ್ರದೇಶದ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಪ್ರಮುಖವಾದ ಯೋಜನೆ ಎಂದರೆ ಅದು ಪ್ರಧಾನಮಂತ್ರಿ ಉಜ್ವಲ್ ಯೋಜನೆ (PM Ujwal Yojana)
Thank you for reading this post, don't forget to subscribe!ಹೌದು ಸ್ನೇಹಿತರೆ ಇದೀಗ ಕೇಂದ್ರ ಸರ್ಕಾರವು ಗ್ರಾಮೀಣ ಪ್ರದೇಶದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಉಜ್ವಲ್ 2.0 (Ujwal 2.0) ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟೋವ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಪಿಎಂ ಕಿಸಾನ್: 20 ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
ಹಾಗಾದರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು? ಅರ್ಜಿ ಸಲ್ಲಿಸಲು ಯಾರು ಯಾರು ಅರ್ಹರು? ಎಂಬ ಮುಂತಾದ ಪ್ರಶ್ನೆಗಳಿಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ನೀವು ಇದೇ ರೀತಿಯ ರಾಜು ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ವಿಶೇಷ ಮಾಹಿತಿ ಪಡೆಯಲು ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ
ಏನಿದು ಉಜ್ವಲ್ 2.0 ?
ಕೇಂದ್ರ ಸರ್ಕಾರವು ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬಗಳಿಗೆ ಈ ಯೋಜನೆ ಅಡಿಯಲ್ಲಿ ಉಚಿತವಾಗಿ ಪ್ರತಿ ಮನೆಗೊಂದು ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟೋವ್ ನೀಡುತ್ತದೆ.
ಆ .ಮೂಲಕ ಗ್ರಾಮೀಣ ಪ್ರದೇಶದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳು ಸಾಂಪ್ರದಾಯಿಕ ಅಡುಗೆ ಪದ್ಧತಿಯಾದ ಉರುವಲು ಕಟ್ಟಿಗೆಯಿಂದ ಅಡುಗೆ ಮಾಡುವ ವಿಧಾನವನ್ನು ತಪ್ಪಿಸಲು ಈ ಯೋಜನೆಯನ್ನು ಜಾರಿಗೆ ತಂದಿದೆ
ಈ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿದ್ದ ನೈಸರ್ಗಿಕ ಸಂಪನ್ಮೂಲದ ಅಳಿವನ್ನು ತಡೆದಂತಾಗಿದೆ. ಅಲ್ಲದೆ ಪ್ರಕೃತಿ ಮಾಲಿನ್ಯವು ಕಡಿಮೆ ಮಾಡಿದಂತಾಗಿದೆ. ಜೊತೆಗೆ ತ್ವರಿತವಾಗಿ ಅಡುಗೆ ಮಾಡಲು ಅನುಕೂಲವಾಗಿದೆ.
ಅರ್ಜಿ ಸಲ್ಲಿಸಲು ಯಾರು ಯಾರೂ ಅರ್ಹರು?
ಪ್ರಸ್ತುತ ಕೇಂದ್ರ ಸರಕಾರ ಈ ಯೋಜನೆ ಅಡಿಯಲ್ಲಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಬಯಸುವವರು ಕೆಳಕಂಡ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯ :
- ಅರ್ಜಿ ಸಲ್ಲಿಸಲು ಬಯಸುವವರು ರೇಷನ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು
- ನವ ವಿವಾಹಿತ ದಂಪತಿಗಳು ಅರ್ಜಿ ಸಲ್ಲಿಸಬಹುದು
- ಈಗಾಗಲೇ ಗ್ಯಾಸ್ ಸಿಲೆಂಡರ್ ಬಂದಿದ್ದರೆ ಅರ್ಜಿ ಸಲ್ಲಿಸಲಾಗುವುದಿಲ್ಲ
- 18 ವರ್ಷ ಮೇಲ್ಪಟ್ಟವರು ಮಾತ್ರ ಅರ್ಜಿ ಸಲ್ಲಿಸಬಹುದು
- ಅರ್ಜಿ ಸಲ್ಲಿಸಲು ಬಯಸುವರು ಆರ್ಥಿಕವಾಗಿ ಹಿಂದುಳಿದ SC/ST EWS ಹೊಂದಿರಬೇಕ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಇನ್ನು ಈ ಯೋಜನೆ ಅಡಿ ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳು ಕಡ್ಡಾಯವಾಗಿ ಇರಬೇಕು
*ಆಧಾರ್ ಕಾರ್ಡ್
*ರೇಷನ್ ಕಾರ್ಡ್
*ಬ್ಯಾಂಕ್ ಪಾಸ್ ಬುಕ್
*ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋ
ಅರ್ಜಿ ಸಲ್ಲಿಸುವುದು ಹೇಗೆ?
ಉಜ್ವಲ 2.0 ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವರು ನಿಮ್ಮ ಹತ್ತಿರದ ಗ್ಯಾಸ್ ಏಜೆನ್ಸಿಗೆ ಹೋಗಿ ಮೇಲೆ ಹೇಳಿರುವ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು
ಅಥವಾ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲಾಗುವುದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ಎಂದು ಕೆಳಗೆ ತಿಳಿಸಿದ್ದುನೋಡಿ
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ಹಂತ 1) ಮೊದಲು ನೀವು ಕೆಳಗೆ ನೀಡಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmuy.gov.in/kn/ujjwala2.htmlhttps://pmuy.gov.in/kn/ujjwala2.html
ಹಂತ 2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ ಅಲ್ಲಿ ನೀವು ಹೊಸ ಕನೆಕ್ಷನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ ಅಂದರೆ ಬಟನ್ ಮೇಲೆ ಕ್ಲಿಕ್ ಮಾಡಿ

ಹಂತ 3) ನಂತರ ನಿಮಗೆ ಕೆಳಗೆ ತೋರಿಸುವಂತೆ ಕಾಣುತ್ತದೆ ಅಲ್ಲಿ ನಿಮಗೆ ಬೇಕಾದ ಗ್ಯಾಸ್ ಸಿಲಿಂಡರ್ ಆಯ್ಕೆ ಮಾಡಿಕೊಳ್ಳಿ ಕೆಳಗೆ ನೀಡಲಾಗಿರುವ ಅರ್ಜಿ ಸಲ್ಲಿಸಲು ಬಟನ್ ಮೇಲೆ ಕ್ಲಿಕ್ ಮಾಡಿ

ಹಂತ 4) ನಂತರ ನೀವು ಅಲ್ಲಿ ಕೇಳಲಾಗಿರುವ ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಮುಗಿಯಿತು ನೀವು ಉಜ್ವಲ 2.0 ಅರ್ಜಿ ಸಲ್ಲಿಸಿದಂತಾಗುತ್ತದೆ ಕೇಂದ್ರ ಸರ್ಕಾರದಿಂದ ಗ್ಯಾಸ್ ಸ್ಟವ್ ಉಚಿತವಾಗಿ ನಿಮ್ಮ ಮನೆಗೆ ದೊರೆಯುತ್ತದೆ
ಈ ರೀತಿಯಾಗಿ ಮನೆಯಲ್ಲಿ ಉಜ್ವಲ 2.0 ಅರ್ಜಿ ಸಲ್ಲಿಸಬಹುದು
ಓದುವುದರಲ್ಲಿ ವಿನಂತಿ
ಮಿಡಿಯಾ ಚಾಣಕ್ಯ ವೆಬ್ಸೈಟ್ ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು ನಿಮಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಬಹುದು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ👇👇👇
https://whatsapp.com/channel/0029VaDOwCTKQuJKSwo7D63Mhttps://whatsapp.com/channel/0029VaDOwCTKQuJKSwo7D63M