Categories: information

ಬೆಳೆ ವಿಮೆ ಹಣ ಹೇಗೆ ನಿರ್ಧರಿಸುತ್ತಾರೆ? ಇಲ್ಲಿದೆ ಮಾಹಿತಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ನಷ್ಟವಾದರೆ ಬೆಳೆ ವಿಮೆ ಪರಿಹಾರ ಹೇಗೆ ನಿರ್ಧರಿಸುತ್ತಾರೆ? ಬೆಳೆ ಯಾವ ಪ್ರಮಾಣದಲ್ಲಿ ನಷ್ಟವಾಗಿದೆ ಎಂಬುದನ್ನು ಗಮನಿಸಿ ಎಷ್ಟು ಪರಿಹಾರ ನೀಡಲಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ನಷ್ಟವಾದರೆ ಬೆಳೆ ವಿಮೆ ಪರಿಹಾರ ಹೇಗೆ ನಿರ್ಧರಿಸುತ್ತಾರೆ? ಬೆಳೆ ಯಾವ ಪ್ರಮಾಣದಲ್ಲಿ ನಷ್ಟವಾಗಿದೆ ಎಂಬುದನ್ನು ಗಮನಿಸಿ ಎಷ್ಟು ಪರಿಹಾರ ನೀಡಲಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ.

Thank you for reading this post, don't forget to subscribe!

ರೈತರು ತಮ್ಮ ಬೆಳೆಗೆ ವಿಮೆ ಮಾಡಿಸಿದ ನಂತರ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲ ಶೇ. 75 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮೆ ಮೊತ್ತದ ಗರಿಷ್ಟ ಶೇ. 25 ರಷ್ಟು ಬೆಳೆ ವಿಮೆ ನಷ್ಟ ಪರಿಹಾರ ನೀಡಲಾಗುವುದು.  ಒಂದು ವೇಳೆ ಬೆಳೆ ಬಿತ್ತನೆ ನಂತರ ಕಟಾವು ಹಂತದವರೆಗಿನ ಅವಧಿಯಲ್ಲಿ ಶೇ. 50 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲೆ ಬೆಳೆ ನಷ್ಟವಾದರೆ ಮುಂಚಿತವಾಗಿ ಅಂದಾಜಿಸಲಾದ ನಷ್ಟ ಪರಿಹಾರದಲ್ಲಿ ಶೇ. 25 ರಷ್ಟು ಪರಿಹಾರ ಹಣ ನೀಡಲಾಗುವುದು.

Farmers who have insured crops ಬೆಳೆ ಯಾವುದರಿಂದ ಹಾನಿಯಾದರೆ ಪರಿಹಾರ ನೀಡಲಾಗುವುದು?

ಬೆಳೆ ವಿಮೆ ಮಾಡಿಸಿದ ರೈತರ ಬೆಳೆಯು ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಗುಡುಗು ಮಿಂಚಿನಿಂದಾಗಿ ಉಂಟಾಗುವ ಬೆಂಕಿ ಅವಗಡ ಸಂದರ್ಭದಲ್ಲಿ ಬೆಳೆ ನಷ್ಟವುಂಟಾದರೆ ವೈಯಕ್ತಿಕ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು.

ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟವಾದರೆ ಬೆಳೆ ವಿಮೆ ಮಾಡಿಸಿರುವ ರೈತರುಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಠಾನಗೊಳಿಸಿರುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ತಕ್ಷಣ ಸೂಚನೆ ನೀಡಬೇಕು. ಮತ್ತು ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರವನ್ನು ಹಾನಿಗೆ ಕಾರಣಗಳನ್ನು 72 ಗಂಟೆಯೊಳಗೆ ತಿಳಿಸಬೇಕು.

ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೇ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಕಟಾವು ಮಾಡಿದ ಎರಡು ವಾರಗಳೊಳಗೆ (ಹದಿನಾಲ್ಕು ದಿನ) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮೆ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನುಇತ್ಯರ್ಥಪಡಿಸಲಾಗುವುದು.  ಇಂತಹ ಸ್ಥಳೀಯ ಗಂಡಾಂತರ ಕಾರಣಗಳಿಂದ ಬೆಳೆ ನಷ್ಟವಾದರೆ ಬೆಳೆ ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಠಾನಗೊಳಿಸಿರುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ತಕ್ಷಣ ಸೂಚನೆ ನೀಡಬೇಕು. ಯಾವುದೇ ಸಂದರ್ಭದಲ್ಲಿ ವಿಮಾ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಯೊಳಗೆ ತಿಳಿಸಬೇಕು.

Bele vime jama  ನಿಮ್ಮ ಬೆಳೆ ವಿಮೆ ಅರ್ಜಿಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ

ರೈತರು ಬೆಳೆ ವಿಮೆ ಪಾವತಿಸಿದ ನಂತರ ತಮ್ಮ ಅರ್ಜಿಯ ಸ್ಟೇಟಸ್ ಚೆಕ್ ಮಾಡಲು ಈ

https://samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನೀವು ಋತು ಆಯ್ಕೆಯಲ್ಲಿ Kharif ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗಲಿದೆ. ನಂತರ ತೆರೆದುಕೊಳ್ಳುವ ಪೇಜ್ ನಲ್ಲಿ Check status ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಆಯ್ಕೆಮಾಡಿಕೊಳ್ಳಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ Search ಮೇಲೆ ಕ್ಲಿಕ್ ಮಾಡಿ ರೈತರು ತಮ್ಮ ಅರ್ಜಿಯ ಸ್ಟೇಟಸನ್ನು ಚೆಕ್ ಮಾಡಿಕೊಳ್ಳಬಹುದು.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago