ರಾಜ್ಯದಲ್ಲಿ ಭುಗಿಲೆದ್ದಿರುವ ರೇಷನ್ ಕಾರ್ಡ್ ಕುರಿತಾದ ಸುಳ್ಳು ಸುದ್ದಿಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಇದರ ಬಗ್ಗೆ ಕಟ್ಟು ನಿಟ್ಟಾಗಿ ಆದೇಶ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಇತ್ತೀಚೆಗೆ ರಾಜ್ಯ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಅನರ್ಹರಾಗಿರುವ 22 ಲಕ್ಷ ಕುಟುಂಬಗಳ ಬಿಪಿಎಲ್ ಕಾರ್ಡ್ (BPL Card) ರದ್ದು ಮಾಡಿ ಎಪಿಎಲ್ ಕಾರ್ಡ್ (APL Card)ಗಳನ್ನಾಗಿ ಪರಿವರ್ತಿಸಿದೆ.
Thank you for reading this post, don't forget to subscribe!ಸದ್ಯ ರಾಜ್ಯ ರಾಜಕೀಯದಲ್ಲಿ ಈ ವಿಷಯ ಹೆಚ್ಚಾಗಿ ವಿವಾದವನ್ನು ಸೃಷ್ಟಿ ಮಾಡಿರುವುದರಿಂದ ಗೃಹಲಕ್ಷ್ಮೀ ಯೋಜನೆಗೆ ಮತ್ತು ಅನ್ನ ಭಾಗ್ಯ ಯೋಜನೆಗೆ ಹಣ ನೀಡಲು ಸರಕಾರದ ಬಳಿ ಹಣವಿಲ್ಲ. ಆದ್ದರಿಂದ ಹೀಗೆ ಬಡ ಕುಟುಂಬಗಳ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ ಎಂದು ವಿಪಕ್ಷಗಳು ಕೆಂಡ ಕಾರುತ್ತಿವೆ.
ವಿಪಕ್ಷಗಳ ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಜಾಲತಾಣ ಖಾತೆ ಎಕ್ಸ್ ನಲ್ಲಿ, ” ಕೇವಲ ಸರ್ಕಾರಿ ನೌಕರ ಕುಟುಂಬಗಳು ಮತ್ತು ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು ಮಾಡಿ ಎಪಿಎಲ್ ಕಾರ್ಡ್ ಗಳನ್ನಾಗಿ ಪರಿವರ್ತಿಸಲಾಗುತ್ತದೆ” ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಭುಗಿಲೆದ್ದಿರುವ ರೇಷನ್ ಕಾರ್ಡ್ ಕುರಿತಾದ ಸುಳ್ಳು ಸುದ್ದಿಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಇದರ ಬಗ್ಗೆ ಕಟ್ಟು ನಿಟ್ಟಾಗಿ ಆದೇಶ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕೇವಲ ಸರಕಾರಿ ನೌಕರಿ ಹೊಂದಿರುವ ಕುಟುಂಬಗಳು ಮತ್ತು ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿ ಎಪಿಎಲ್ ಕಾರ್ಡ್ ಗಳನ್ನಾಗಿ ಪರಿವರ್ತನೆ ಮಾಡಲು ಸೂಚಿಸಲಾಗಿದೆ ಹೊರತು ಬಡವರ ಮತ್ತು ಅರ್ಹ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಈಗಾಗಲೇ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಕಾರ್ಯ ನಿರತರಾಗಿದ್ದು ಈಗಾಗಲೇ ಬಿಪಿಎಲ್ ಕಾರ್ಡ್ ರದ್ದಾಗಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಮತ್ತೊಮ್ಮೆ ಪರಿಶೀಲಿಸಲಾಗುತ್ತಿದೆ.
ಪರಿಶೀಲನೆ ಸಂದರ್ಭದಲ್ಲಿ ಮೇಲೆ ತಿಳಿಸಿರುವ ಎರಡು ಷರತ್ತುಗಳನ್ನು ಮಾತ್ರ ಅನುಸರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಹಾಗಾಗಿ ಉಳಿದ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ನಿಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದೆಯ ಎಂದು ತಿಳಿದುಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು…
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…
ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…
ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…
ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…