ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನಮ್ಮ ದೇಶದಲ್ಲಿ ಶೇಕಡಾ 10 ರಷ್ಟು ಜನ ಇಂದಿಗೂ ಕಡು ಬಡತನದಲ್ಲಿ ಜೀವನವನ್ನು ಸಾಗಿಸುತ್ತಿದ್ದಾರೆ. ಇಂತಹ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳಾದ ಆಹಾರ,ವಸತಿ,ಶೌಚಾಲಯ,ಕುಡಿಯುವ ನೀರು ಮುಂತಾದ ಸೌಲಭ್ಯಗಳು ಗಗನ ಕುಸುಮ ಆಗಿವೆ.
ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನಮ್ಮ ದೇಶದಲ್ಲಿ ಶೇಕಡಾ 10 ರಷ್ಟು ಜನ ಇಂದಿಗೂ ಕಡು ಬಡತನದಲ್ಲಿ ಜೀವನವನ್ನು ಸಾಗಿಸುತ್ತಿದ್ದಾರೆ. ಇಂತಹ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳಾದ ಆಹಾರ,ವಸತಿ,ಶೌಚಾಲಯ,ಕುಡಿಯುವ ನೀರು ಮುಂತಾದ ಸೌಲಭ್ಯಗಳು ಗಗನ ಕುಸುಮ ಆಗಿವೆ.
Thank you for reading this post, don't forget to subscribe!ಇಂತಹ ಕುಟುಂಬಗಳಿಗೆ ಸಹಾಯ ಮಾಡಲು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಅಂದರೆ ಪಡಿತರ ಚೀಟಿಗಳನ್ನು ವಿತರಿಸುತ್ತಿದೆ. ಇದರ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ರಾಜ್ಯ ಸರಕಾರವೇ ಉಚಿತವಾಗಿ ದವಸ ಧಾನ್ಯಗಳನ್ನು ವಿತರಿಸುತ್ತಿದೆ.
ಆದರೆ ಸರ್ಕಾರ ಜಾರಿಗೆ ತರುವ ಯಾವುದೇ ಇತರೆ ಯೋಜನೆಗಳಂತೆ ಈ ಯೋಜನೆಯಲ್ಲೂ ಭ್ರಷ್ಟಾಚಾರ, ಫೇಕ್ ರೇಷನ್ ಕಾರ್ಡ್ ಹಂಚುವಿಕೆ ಎಗ್ಗಿಲ್ಲದೆ ಸಾಗಿದೆ. ಅರ್ಹ ಕಡು ಬಡತನದ ಕುಟುಂಬಗಳಿಗೆ ನಿಜವಾಗಿ ಸಿಗಬೇಕಾದ ಸೌಲಭ್ಯಗಳು ಸಿಗದೇ ತುಘಲಕ್ ಸಾಮ್ರಾಜ್ಯದ ಪ್ರಜೆಗಳಂತಾಗಿದೆ ಇಂತಹ ಕುಟುಂಬಗಳ ಪರಿಸ್ಥಿತಿ.
ಹೌದು ಸ್ನೇಹಿತರೆ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆಂದೇ ಜಾರಿಗೆ ತಂದಿರುವ ರೇಷನ್ ಕಾರ್ಡ್ ವಿತರಣೆ ಇದೀಗ ಅರ್ಹ ಫಲಾನುಭವಿಗಳ ಕೈತಪ್ಪಿ ಇದರಲ್ಲೂ ಕೂಡ ನಕಲಿ ಬಡತನ ಕುಟುಂಬಗಳಿಗೆ ರೇಷನ್ ಕಾರ್ಡ್ ವಿತರಣೆ ಎಗ್ಗಿಲ್ಲದೆ ನಡೆಯುತ್ತಿದೆ.
ಇಂತಹ ಮಾಹಿತಿಯೊಂದನ್ನು ಇದೀಗ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸ್ಪಷ್ಟಪಡಿಸಿದ್ದು, ಪ್ರಸ್ತುತ 12 ಲಕ್ಷ ನಕಲಿ ರೇಷನ್ ಕಾರ್ಡ್ ಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಹೌದು ಓದುಗ ಮಿತ್ರರೆ, ರಾಜ್ಯ ಸರ್ಕಾರ ಇದೀಗ ನಕಲಿ ರೇಷನ್ ಕಾರ್ಡ್ ಹೊಂದಿದವರ ವಿರುದ್ಧ ಆಲೌಟ್ ವಾರ್ ನಡೆಸಿದ್ದು, ಯಾರು ನಕಲಿ ಅಥವಾ ಫೋರ್ಜರಿ ಮಾಡಿ ರೇಷನ್ ಕಾರ್ಡ್ ಪಡೆದಿರುತ್ತಾರೋ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಪ್ರಕರಣ ದಾಖಲಿಸಲು ಮುಂದಾಗಿದೆ.
ರಾಜ್ಯ ಅಥವಾ ಕೇಂದ್ರ ಸರ್ಕಾರದ ಅಡಿಯಲ್ಲಿ ಸರ್ಕಾರಿ ನೌಕರಿ ಹೊಂದಿರುವ ಕುಟುಂಬಗಳು ಸಹಿತ ನಕಲಿ ದಾಖಲಾತಿಗಳನ್ನು ಸಲ್ಲಿಸಿ ರೇಷನ್ ಕಾರ್ಡ್ ಲಾಭವನ್ನು ಪಡೆಯುತ್ತಿವೆ. ಇಂತಹ ನಕಲಿ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳ ವಿರುದ್ಧವೂ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.
ಆ ಮೂಲಕ ರೇಷನ್ ಕಾರ್ಡ್ ವಿತರಣೆಯ ನೈಜ ಉದ್ದೇಶವನ್ನು ಎತ್ತಿ ಹಿಡಿದು ಅರ್ಹ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅದರ ಲಾಭ ಸಿಗುವಂತೆ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬದ್ಧವಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಲಾಗಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…