ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬಗಳಿಗೆ ಉಚಿತವಾಗಿ ದವಸ ಧಾನ್ಯಗಳನ್ನು ನೀಡುತ್ತಿವೆ. ಕೇಂದ್ರ ಸರ್ಕಾರ ಗರೀಬ್ ಕಲ್ಯಾಣ ಅನ್ನ ಯೋಜನೆ ಮೂಲಕ ದೇಶದ 80 ಕೋಟಿಗೂ ಹೆಚ್ಚು ಬಡ ಕುಟುಂಬಗಳಿಗೆ ಅನ್ನ ನೀಡುವ ಬೃಹತ್ ಕೆಲಸ ಮಾಡುತ್ತಿದೆ.
Thank you for reading this post, don't forget to subscribe!ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಈ ಮಹತ್ವದ ಯೋಜನೆ ಲಾಭ ಪಡೆಯಲು ಬಯಸುವ ಅರ್ಹ ಫಲಾನುಭವಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರ ನಿಗದಿ ಪಡಿಸಿರುವ ಮಾನದಂಡಗಳನ್ನು ಕಡ್ಡಾಯವಾಗಿ ಹೊಂದಿರಬೇಕು.
ಇದನ್ನೂ ಓದಿ: ಈ ವರ್ಷದ ಬೆಳೆ ವಿಮೆ ಹಣ ಜಮಾ! ನಿಮಗೂ ಬಂತಾ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಆದರೆ ರಾಜ್ಯ ಸರಕಾರದ ಈ ಯೋಜನೆಯನ್ನು ಹಲವರು ದುರುಪಯೋಗಪಡಿಸಿಕೊಂಡು ನಕಲಿ ದಾಖಲಾತಿಗಳನ್ನು ನೀಡಿ ನಕಲಿ ರೇಶನ್ ಕಾರ್ಡ್ (ration card) ಪಡೆದು ಅಕ್ರಮವಾಗಿ ರೇಷನ್ ಪಡೆಯುತ್ತಿದ್ದಾರೆ ಎಂದು ಇದೀಗ ರಾಜ್ಯ ಸರಕಾರ ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಗಳನ್ನಾಗಿ ಪರಿವರ್ತಿಸುತ್ತದೆ ಮತ್ತು ಹಲವರ ರೇಷನ್ ವಿತರಣೆಯನ್ನು ಸ್ಥಗಿತಗೊಳಿಸಿದೆ.
ಹೌದು ಸ್ನೇಹಿತರೆ, ಇದೀಗ ರಾಜ್ಯದಲ್ಲಿ 11 ಲಕ್ಷ ಬಿಪಿಎಲ್ ಕಾರ್ಡ್ಗಳನ್ನ ಎಪಿಎಲ್ ಕಾರ್ಡ್ ಗಳನ್ನಾಗಿ ಪರಿವರ್ತನೆ ಮಾಡಲಾಗಿದ್ದು,ಅಲ್ಲದೆ ಹಲವು ಕಾರ್ಡ್ ಗಳ ರೇಷನ್ ವಿತರಣೆ ತದೆ ಹಿಡಿಯಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ: ಪಿಎಂ ಕಿಸಾನ್: ಇಕೆವೈಸಿ ಆಗದ ರೈತರ ಪಟ್ಟಿ ಬಿಡುಗಡೆ |ಇಕೆವೈಸಿ ಮಾಡಿಸದಿದ್ದರೆ ನಿಮಗೆ ಪಿಎಂ ಕಿಸಾನ್ ಹಣ ಜಮಾ ಆಗಲ್ಲ!
ಇದಷ್ಟೇ ಅಲ್ಲದೇ ಇನ್ನೂ ಹಲವಾರು ಜಿಲ್ಲೆಗಳಲ್ಲಿ ಈ ರೀತಿಯಾಗಿ ಅಕ್ರಮವಾಗಿ ನಕಲಿ ರೇಶನ್ ಕಾರ್ಡ್ (BPL card) ಪಡೆದು ಸರ್ಕಾರದ ಉಚಿತ ರೇಷನ್ ಅನ್ನು ಪಡೆಯುತ್ತಿರುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.
ರೇಷನ್ ಕಾರ್ಡ್ ಹೊಂದಲು ಬೇಕಾಗುವ ಮಾನದಂಡಗಳು:-
ದೇಶದ ಯಾವುದೇ ನಾಗರಿಕ ಈ ಯೋಜನೆ ಅಡಿಯಲ್ಲಿ ಲಾಭ ಪಡೆಯಲು ಬಯಸಿದರೆ ಅವನು ಕೆಳಗೆ ನೀಡಲಾಗಿರುವ ಸರ್ಕಾರ ವಿಧಿಸಿರುವ 2 ಪ್ರಮುಖ ಮಾನದಂಡಗಳನ್ನು ಕಡ್ಡಾಯವಾಗಿ ಪೂರೈಸಬೇಕು. ಅವು ಯಾವುವೆಂದರೆ :-
- ಕುಟುಂಬದ ಆದಾಯ ವರ್ಷಕ್ಕೆ 1,20,000 ಕ್ಕಿಂತ ಹೆಚ್ಚಿರಬಾರದು.
- ಕುಟುಂಬದ ಯಾವ ಸದಸ್ಯನೂ ಆದಾಯ ತೆರಿಗೆ ಕಟ್ಟುತ್ತಿರಬಾರದು.
ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಹೀಗೆ ಚೆಕ್ ಮಾಡಿ:-
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://ahara.kar.nic.in/home/eservices
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು e-Ration Card ಮೇಲೆ ಕ್ಲಿಕ್ ಮಾಡಿ.


ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Show Cancelled/Suspended List ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು ಹಾಗೂ ಯಾವ ತಿಂಗಳಿನಿಂದ ನಿಮಗೆ ರೇಷನ್ ಬಂದಿಲ್ಲ ಆ ತಿಂಗಳನ್ನು ನಮೂದಿಸಿ Go ಮೇಲೆ ಕ್ಲಿಕ್ ಮಾಡಿ.

ನಂತರ ನಿಮಗೆ ಮೇಲೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮ್ಮ ತಾಲೂಕಿನಲ್ಲಿ ರದ್ದಾಗಿರುವ ರೇಷನ್ ಕಾರ್ಡ್ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.
ಇದನ್ನೂ ಓದಿ: RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನೀವು ನಿಮ್ಮ ತಾಲೂಕು ತಹಶೀಲ್ದಾರ್ ಕಚೇರಿಗೆ ಹೋಗಿ ಅಲ್ಲಿ ಆಹಾರ ಅಧಿಕಾರಿಯವರನ್ನು ಭೇಟಿ ಮಾಡಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t