RRB Recruitment 2026: ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶ! ರೈಲ್ವೆ ನೇಮಕಾತಿ ಮಂಡಳಿಯು 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ ತಿಳಿಯಿರಿ.
ಕೇಂದ್ರ ಸರ್ಕಾರದ ಉದ್ಯೋಗ ಪಡೆದುಕೊಳ್ಳಬೇಕು ಎಂದು ಕನಸು ಕಾಣುವ ಪದವೀಧರರಿಗೆ ಇಲ್ಲಿದೆ ಗುಡ್‌ನ್ಯೂಸ್. ಖಾಲಿ ಇರುವ ಬರೋಬ್ಬರಿ 3,548 ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿ (Railway Recruitment Board) ಅರ್ಜಿ ಆಹ್ವಾನಿಸಿದೆ (Latest Railway Jobs).
Thank you for reading this post, don't forget to subscribe!ಚೀಫ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್‌ವೈಸರ್, ಗೂಡ್ಸ್ ಟ್ರೈನ್ ಮ್ಯಾನೇಜರ್, ಜೂನಿಯರ್ ಅಕೌಂಟ್ಸ್ ಅಸಿಸ್ಟಂಟ್ ಕಮ್ ಟೈಪಿಸ್ಟ್, ಸೀನಿಯರ್ ಕ್ಲರ್ಕ್ ಕಂ ಟೈಪಿಸ್ಟ್ ಹುದ್ದೆಗಳಿವೆ (RRB Recruitment 2026). ಆರ್‌ಆರ್‌ಬಿ ಬೆಂಗಳೂರು ವಲಯದಲ್ಲಿ 346 ಹುದ್ದೆಗಳಿವೆ (Job Guide). ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನವೆಂಬರ್ 6.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಚೀಫ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್‌ಪೈಸರ್-127, ಗೂಡ್ಸ್ ಟ್ರೈನ್ ಮ್ಯಾನೇಜರ್-2,750, ಜೂನಿಯರ್ ಅಕೌಂಟ್ಸ್ ಅಸಿಸ್ಟಂಟ್ ಕಮ್ ಟೈಪಿಸ್ಟ್-300, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್-371 ಹುದ್ದೆಗಳಿವೆ. ದೇಶದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರೈಸಿದವರು ಅಥವಾ ತತ್ಸಮಾನ ವಿದ್ಯಾರ್ಹತೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 33 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಮಾಜಿ ಯೋಧರಿಗೆ 3ರಿಂದ 8 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಎಸ್‌ಸಿ, ಎಸ್‌ಟಿ, ಇಬಿಸಿ ಅಭ್ಯರ್ಥಿಗಳು, ಮಾಜಿ ಯೋಧರು, ಮಹಿಳೆಯರು ಮತ್ತು ತೃತೀಯ ಲಿಂಗಿಗಳು 250 ರುಪಾಯಿ ಮತ್ತು ಉಳಿದೆಲ್ಲ ಅಭ್ಯರ್ಥಿಗಳು 500 ರುಪಾಯಿ ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್.
KEA VAO Answer Key 2026: ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಪರೀಕ್ಷೆ ಕೀ ಉತ್ತರಗಳು ಪ್ರಕಟ
http://m.dailyhunt.in/news/india/kannada/vishwavani-epaper-vswavani/kea+vao+answer+key+2026+graama+aadalita+adhikaari+hudde+parikshe+ki+uttaragalu+prakata+illide+link-newsid-n729388155
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಮೊದಲ ಮತ್ತು 2ನೇ ಹಂತದ ಸಿಬಿಟಿ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಮೊದಲ ಹಂತದ ಸಿಬಿಟಿಯಲ್ಲಿ 100 ಪ್ರಶ್ನೆಗಳಿರಲಿದ್ದು, ಪ್ರತಿ ಪ್ರಶ್ನೆಗೆ 1 ಅಂಕಗಳಿವೆ. ಜನರಲ್ ಅವರ್ನೆಸ್-40, ಗಣಿತ-30, ಜನರಲ್ ಇಂಟಲಿಜೆನ್ಸ್ & ರೀಸನಿಂಗ್-30 ಪ್ರಶ್ನೆಗಳಿವೆ. ಪರೀಕ್ಷೆಯ ಅವಧಿ: 90 ನಿಮಿಷ. ದ್ವಿತೀಯ ಹಂತದ ಸಿಬಿಟಿಯಲ್ಲಿ 120 ಅಂಕಳಿವೆ. ಒಟ್ಟು 90 ನಿಮಿಷಗಳ ಅವಧಿಯಲ್ಲಿ ಪರೀಕ್ಷೆ ನಡೆಯಲಿದೆ. ಜನರಲ್ ಅವರ್ನೆಸ್-50, ಗಣಿತ-35, ಜನರಲ್ ಇಂಟಲಿಜೆನ್ಸ್ & ರೀಸನಿಂಗ್-35 ಪ್ರಶ್ನೆಗಳು ಸೇರಿ ಒಟ್ಟು 120 ಪ್ರಶ್ನೆಗಳಿರುತ್ತವೆ. ಗಮನಿಸಿ ಎರಡೂ ಹಂತಗಳಲ್ಲಿ ಪ್ರತಿ ತಪ್ಪು ಉತ್ತರಕ್ಕೆ ನೆಗೆಟಿವ್ ಅಂಕಗಳಿವೆ. ಹೀಗಾಗಿ ಸರಿಯಾಗಿ ಯೋಚಿಸಿ ಉತ್ತರಿಸಿ.
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.rrbapply.gov.in/#/auth/landing
‘Create An Account’ ಆಯ್ಕೆ ಮಾಡಿ ಕ್ಲಿಕ್ ಮಾಡಿ.
ಹೆಸರು ರಿಜಿಸ್ಟರ್ ಮಾಡಿಕೊಳ್ಳಿ. ಲಾಗಿನ್ ಆಗಿ.
ಈಗ ಕಂಡುಬರುವ ಅರ್ಜಿಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
ಅರ್ಜಿ ಶುಲ್ಕ ಭರ್ತಿ ಪಾವತಿಸಿ.
ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇https://chat.whatsapp.com/FM1qVgdNtJm5m1M9SL0BHc?mode
ಪ್ರೇಮದ ಊರಲಿ ಸಿನಿಮಾ ಇಲ್ಲಿಯವರೆಗೆ ಭಾರತದಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ ಎಂಬುದರ ಬಗ್ಗೆ ಈ ಆರ್ಟಿಕಲ್ ನಲ್ಲಿ ಮಾಹಿತಿ ಕೊಟ್ಟಿದ್ದೇವೆ.…
ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಅಕ್ಟೋಬರ್ 30ರಂದು ಬಿಡುಗಡೆಯಾಗಲಿದೆಯೇ? ರೈತರ ಖಾತೆಗೆ ₹2,000 ಜಮೆಯಾಗುವ ಮಾಹಿತಿ, ಪಿಎಂ…
ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…
ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…
ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…
ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…