ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರ ಪರಿಹಾರ ಎಂದು ರಾಜ್ಯ ಸರ್ಕಾರ ಅರ್ಹ ಎಲ್ಲ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ಆದರೆ ಇನ್ನೂ ಹಲವು ರೈತರ ಖಾತೆಗೆ ಹಣ ಜಮಾ ಆಗಿಲ್ಲ. ಅದಕ್ಕೆ ಪ್ರಮುಖ ಕಾರಣ ಎಂದರೆ ಅವರ ಪಹಣಿ ಪತ್ರ (ಉತ್ತಾರಿ) ಕ್ಕೆ ಆಧಾರ್ ಕಾರ್ಡ್ ಲಿಂಕ್ ಆಗದೇ ಇರುವುದು.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರ ಪರಿಹಾರ ಎಂದು ರಾಜ್ಯ ಸರ್ಕಾರ ಅರ್ಹ ಎಲ್ಲ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ಆದರೆ ಇನ್ನೂ ಹಲವು ರೈತರ ಖಾತೆಗೆ ಹಣ ಜಮಾ ಆಗಿಲ್ಲ. ಅದಕ್ಕೆ ಪ್ರಮುಖ ಕಾರಣ ಎಂದರೆ ಅವರ ಪಹಣಿ ಪತ್ರ (ಉತ್ತಾರಿ) ಕ್ಕೆ ಆಧಾರ್ ಕಾರ್ಡ್ ಲಿಂಕ್ ಆಗದೇ ಇರುವುದು.
Thank you for reading this post, don't forget to subscribe!ಇದನ್ನೂ ಓದಿ: ಬೆಳೆ ಪರಿಹಾರ: 2ನೇ ಕಂತು ಹಣ ಜಮಾ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಈ ಕುರಿತಂತೆ ರಾಜ್ಯ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹಲವು ಬಾರಿ ರೈತರಿಗೆ ತಮ್ಮ ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಮಾಡಿಸಿ ಎಂದು ಮನವಿ ಮಾಡಿದ್ದರು. ಒಂದು ವೇಳೆ ರೈತರು ತಮ್ಮ ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಮಾಡಿಸದೆ ಇದ್ದಲ್ಲಿ ಅಂತಹ ರೈತರಿಗೆ ರಾಜ್ಯ ಸರ್ಕಾರದ ಬರ ಪರಿಹಾರ ಹಣ, ಬೆಳೆ ವಿಮೆ, ಪಿಎಂ ಕಿಸಾನ್ ಸಮ್ಮನ್ ಇತರೆ ಯಾವುದೇ ಸೌಲಭ್ಯಗಳು ಸಿಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ರೈತರು ತಮ್ಮ ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಮಾಡಿಸುವುದರಿಂದ ರಾಜ್ಯ ಸರ್ಕಾರಕ್ಕೆ ಹಣ ವರ್ಗಾವಣೆ ಮಾಡಲು ಮತ್ತು ರೈತರ ಬಗ್ಗೆ ನಿಖರ ಮಾಹಿತಿ ಪಡೆಯಲು ಸಹಾಯವಾಗುತ್ತದೆ. ಹಾಗಾಗಿ ಇವತ್ತಿನ ಈ ಅಂಕಣದಲ್ಲಿ ನಿಮ್ಮ ಪಹಣಿ ಪತ್ರಕ್ಕೆ ನಿಮ್ಮ ಮೊಬೈಲ್ ನಲ್ಲಿ ಆಧಾರ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸುತ್ತೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಇದನ್ನೂ ಓದಿ: ಬೆಳೆ ಪರಿಹಾರ ಹಣ: ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!
ಹಂತ -1) ಮೊದಲೂ ನೀವು ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ರಾಜ್ಯ ಸರಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
https://landrecords.karnataka.gov.in/service4/
ಹಂತ -2) ನಂತರ ನಿಮಗೆ ಅಲ್ಲಿ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡಿಗೆ ಲಿಂಕ್ ಇರುವ ಮೊಬೈಲ್ ನಂಬರ್ ಹಾಕಿ, ಕ್ಯಾಪ್ಚಾ ಹಾಕಿ Send OTP ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ಕೆಳಗೆ ತೋರಿಸಿದಂತೆ ಕಾಣುತ್ತದೆ. ನಿಮ್ಮ ಮೊಬೈಲ್ ಸಂಖ್ಯೆಗೆ ಬರುವ OTP ಅನ್ನು ಹಾಕಿ Login ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ:ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಹಂತ -4) ನಂತರ ಹೊಸ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನು ಮತ್ತು ಆಧಾರ ಕಾರ್ಡನಲ್ಲಿ ಇರುವಂತೆ ನಿಮ್ಮ ಹೆಸರು ಮತ್ತು ಅಡ್ಡ ಹೆಸರನ್ನು ನಮೂದಿಸಿ.
ಹಂತ -5) ನಂತರ ಎಲ್ಲಾ ಸರಿಯಾಗಿ ನಮೂದಿಸಿದ ಮೇಲೆ ಕೆಳಗೆ ನೀಡಿರುವ Submit ಬಟನ್ ಮೇಲೆ ಕ್ಲಿಕ್ ಮಾಡಿ.
ಇಷ್ಟು ಮಾಡಿದರೆ ಆಯಿತು. ನಿಮ್ಮ ಪಹಣಿ ಪತ್ರಕ್ಕೆ ನಿಮ್ಮ ಆಧಾರ್ ಲಿಂಕ್ ಆಗುತ್ತದೆ ಮತ್ತು ರಾಜ್ಯ ಸರ್ಕಾರದ ಯಾವುದೇ ಸಾಲ ಸೌಲಭ್ಯ ನಿಮಗೆ ಸರಳವಾಗಿ ಸಿಗುತ್ತವೆ.
ಇದನ್ನೂ ಓದಿ: ಬೆಳೆ ಪರಿಹಾರ: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಹಣ ಬರಲ್ಲ!
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…