ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು ಸಾವಿರಾರು ರೈತರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಿದೆ. ಇನ್ನು ಹಲವು ವರ್ಷಗಳಿಂದ ಬಿತ್ತಿ ಬೆಳೆದ ಜಮೀನಿನ ಮೇಲೆ ಹೀಗೆ ಏಕಾಏಕಿ ಹಕ್ಕು ಚಲಾಯಿಸುತ್ತಿರುವ ವಕ್ಫ್ ಬೋರ್ಡ್ ವಿರೋಧಿಸಿ ಹಲವಾರು ರೈತರು ಪ್ರತಿಭಟನೆಗೆ ಇಳಿದಿದ್ದಾರೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ತಿಳಿದಿರುವಂತೆ ಸದ್ಯ ರಾಜ್ಯಾದ್ಯಂತ ವಕ್ಫ್ ಬೋರ್ಡ್ ಆಸ್ತಿ ಅಧಿಕಾರ ತೆಗೆದುಹಾಕುವಂತೆ ಬಿರುಸಿನ ಹೋರಾಟ ನಡೆದಿದೆ.
Thank you for reading this post, don't forget to subscribe!ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು ಸಾವಿರಾರು ರೈತರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಿದೆ. ಇನ್ನು ಹಲವು ವರ್ಷಗಳಿಂದ ಬಿತ್ತಿ ಬೆಳೆದ ಜಮೀನಿನ ಮೇಲೆ ಹೀಗೆ ಏಕಾಏಕಿ ಹಕ್ಕು ಚಲಾಯಿಸುತ್ತಿರುವ ವಕ್ಫ್ ಬೋರ್ಡ್ ವಿರೋಧಿಸಿ ಹಲವಾರು ರೈತರು ಪ್ರತಿಭಟನೆಗೆ ಇಳಿದಿದ್ದಾರೆ.
ರಾಜ್ಯದ 18 ಜಿಲ್ಲೆಗಳಲ್ಲಿನ ಸಾವಿರಾರು ರೈತರಿಗೆ ನೋಟಿಸ್ ಬಂದಿದ್ದು, ರೈತರು ತಮ್ಮ ಜೀವನೋಪಾಯಕ್ಕೆ ಇರುವ ಏಕೈಕ ದಾರಿಯನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಇನ್ನು ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿರುವ ವಿರಕ್ತಮಠದ ಜಗವು ವಕ್ಫ್ ಬೋರ್ಡ್ಗೆ ಸಂಬಂಧಿಸಿದ್ದು ಎಂದು ವಕ್ಫ್ ಬೋರ್ಡ್ ಹೇಳಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ಕಾರಣದಿಂದ ಮಠದ ಭಕ್ತರ ಭಾವನೆಗೆ ದಕ್ಕೆ ಬಂದಿದ್ದು, ವಕ್ಫ್ ಬೋರ್ಡ್ ವಿರುದ್ಧದ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ರೈತರ ಒಂದು ಇಂಚು ಭೂಮಿಯನ್ನು ಹೋಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದರೂ ಆ ಕುರಿತಂತೆ ಇನ್ನು ಲಿಖಿತ ರೂಪದಲ್ಲಿ ಆದೇಶ ಹೊರಡಿಸಿಲ್ಲ.
ನಿಮ್ಮ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮದ ಹೆಸರನ್ನು ನಮೂದಿಸಿ ಸರ್ವೆ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ಸರ್ನೋಕ್ ಇದ್ದಲ್ಲಿ ಸ್ಟಾರ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೊಲದ ಹಿಸ್ಸಾ ನಂಬರ್ ಹಾಕಿ Fetch Details ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮಗೆ ನಿಮ್ಮ ಜಮೀನು ಯಾರ ಹೆಸರಿಗೆ ಇದೆ ಮತ್ತು ಎಷ್ಟು ಇದೆ ಎಂಬ ಮಾಹಿತಿ ಸಿಗುತ್ತದೆ. ನಂತರ ಅಲ್ಲಿ ನೀವು View ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮ್ಮ ಜಮೀನಿನ ಪಹಣಿ ಪತ್ರ ತೆರೆದುಕೊಳ್ಳುತ್ತದೆ. ಅದರಲ್ಲಿ ಹಕ್ಕುಗಳು ಕಾಲಂ ನಲ್ಲಿ ಮಸೀದಿ ಹೆಸರು ಅಥವಾ ವಕ್ಫ್ ಬೋರ್ಡ್ ಇದೆಯಾ ಎಂದು ಚೆಕ್ ಮಾಡಿ.
ಒಂದು ವೇಳೆ ನಿಮ್ಮ ಜಮೀನಿನ ಪಹಣಿ ಪತ್ರದಲ್ಲಿ ಮೇಲೆ ತೋರಿಸಿದಂತೆ ಯಾವುದಾದರೂ ಮಸೀದಿ ಹೆಸರು ಇದ್ದರೆ ಅಥವಾ ವಕ್ಫ್ ಬೋರ್ಡ್ ಎಂದು ಇದ್ದರೆ ನೀವು ಕೂಡಲೇ ತಹಶೀಲ್ದಾರ್ ಕಚೇರಿಗೆ ಅಥವಾ ಜಿಲ್ಲಾಧಿಕಾರಿ ಕಚೇರಿಗೆ ಹೋಗಿ ಪರಿಶೀಲಿಸಿ ವರದಿ ನೀಡಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…