ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಭಾರತದ ಶೇಕಡಾ 60 ರಷ್ಟು ಜನರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು ಜೀವನೋಪಾಯಕ್ಕಾಗಿ ಕೃಷಿಯನ್ನೇ ಅವಲಂಬಿಸಿದ್ದಾರೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಭಾರತದ ಶೇಕಡಾ 60 ರಷ್ಟು ಜನರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು ಜೀವನೋಪಾಯಕ್ಕಾಗಿ ಕೃಷಿಯನ್ನೇ ಅವಲಂಬಿಸಿದ್ದಾರೆ.
Thank you for reading this post, don't forget to subscribe!ಭಾರತದ ಕೃಷಿ ಚಟುವಟಿಕೆಗಳು ಬಹುತೇಕ ಮಾನ್ಸೂನ್ ಮೇಲೆ ಅವಲಂಬನೆ ಆಗಿರುವುದರಿಂದ ಮುಂಗಾರು (Monsoon) ವಿಫಲವಾದ ವರ್ಷವೆಲ್ಲ ರೈತರು ಆರ್ಥಿಕವಾಗಿ ಸಂಕಷ್ಟ ಎದುರಿಸಬೇಕಾಗುತ್ತದೆ.
ಇಂತಹ ಸಂದರ್ಭದಲ್ಲಿ ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ಜೀವಂತವಾಗಿಡಲು ಕೃಷಿ ಸಾಲದ ಮೊರೆ ಹೋಗುತ್ತಾರೆ. ರಾಜ್ಯ ಸರ್ಕಾರದ ಹೈನುಗಾರಿಕೆ ಇಲಾಖೆ ಇದೀಗ ಇಂತಹ ಕೃಷಿ ಸಾಲ ಮಾಡಿದ ರೈತರಿಗೆ ಬಡ್ಡಿ ದರವನ್ನು ಮನ್ನಾ ಮಾಡುವ ಅಥವಾ ಬಡ್ಡಿ ಹಣವನ್ನು ಧನ ಸಹಾಯದ ರೂಪದಲ್ಲಿ ನೀಡುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಇದೀಗ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ.
ಕೃಷಿ ಆದಾಯವನ್ನು ಹೆಚ್ಚಿಸಲು ಹೈನುಗಾರಿಕೆ ನಡೆಸಲು ಹಸು, ದನ,ಕರುಗಳನ್ನು ಕೊಂಡುಕೊಳ್ಳಲು ರಾಷ್ಟ್ರೀಕೃತ ಅಥವಾ ಗ್ರಾಮೀಣ ಅಥವಾ ಸಹಕಾರಿ ಬ್ಯಾಂಕುಗಳಲ್ಲಿ ಸಾಲ ಮಾಡಿರುವ ರೈತ ಮಹಿಳೆಯರು ಈ ಸಾಲಮನ್ನಾ ಯೋಜನೆಗೆ ಅರ್ಹರಾಗಿದ್ದಾರೆ.(ಕೇವಲ ರೈತ ಮಹಿಳೆಯರು ಮಾತ್ರ ಅರ್ಹರು). ಸಾಲವನ್ನು ನಿಗದಿತ ದಿನಾಂಕದೊಳಗೆ ತುಂಬಿರುವ ರೈತ ಮಹಿಳೆಯರಿಗೆ ಶೇಕಡಾ 6 ರಷ್ಟು ಬಡ್ಡಿಯನ್ನು ಮನ್ನಾ ಮಾಡಲು ಅಥವಾ ಅದೇ ಪ್ರಮಾಣದ ಹಣವನ್ನು ನೀಡಲು ಹೈನುಗಾರಿಕೆ ಇಲಾಖೆ ಮುಂದಾಗಿದೆ.
ಈ ಯೋಜನೆಯ ಅಡಿಯಲ್ಲಿ ಲಾಭವನ್ನು ಪಡೆಯಲು ಇಚ್ಛಿಸುವ ರೈತ ಮಹಿಳೆಯರು ಕಡ್ಡಾಯವಾಗಿ ಆಧಾರ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಹೊಲದ ಉತಾರೀ ಮತ್ತು ತಮ್ಮ ಇತ್ತೀಚಿನ ಭಾವಚಿತ್ರಗಳನ್ನು ಹೊಂದಿರಬೇಕು.
ಅರ್ಹ ರೈತ ಮಹಿಳೆಯರು ತಮ್ಮ ತಾಲೂಕಿನ ಪಶು ಆಸ್ಪತ್ರೆಗಳಿಗೆ ಅಗತ್ಯ ದಾಖಲೆಗಳೊಂದಿಗೆ ಹೋಗಿ ಅರ್ಜಿ ಸಲ್ಲಿಸಬೇಕು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ತಾಲೂಕು ಪಶು ಆಸ್ಪತ್ರೆಯ ಮಾಹಿತಿ ಕೇಂದ್ರದಲ್ಲಿ ವಿಚಾರಿಸಿ ತಿಳಿದುಕೊಳ್ಳಿ.
ರೈತರ ಆದಾಯವನ್ನು ಹೆಚ್ಚಿಸಲು ಹಾಗೂ ರೈತ ಮಹಿಳೆಯರನ್ನು ಸಬಲಗೊಳಿಸುವಲ್ಲಿ ಇದು ಮಹತ್ವದ ನಿರ್ಧಾರವಾಗಿದ್ದು ಎಲ್ಲಾ ಅರ್ಹ ರೈತ ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…