ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಇನ್ನೇನು ಕರ್ನಾಟಕಕ್ಕೆ ಮುಂಗಾರು ಪ್ರವೇಶ ಜೂನ್ 5 ರಂದು ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರೈತರು ತಮ್ಮ ತಮ್ಮ ಹೊಲವನ್ನು ಬಿತ್ತನೆಗೆ ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. ಆದರೆ ಈ ಹಂತದಲ್ಲಿ ಪ್ರತಿ ರೈತರು ಜಾಗರೂಕತೆ ವಹಿಸಬೇಕಾಗಿರುವುದು ತಮ್ಮ ಬಿತ್ತನೆ ಬೀಜಗಳ ಮೇಲೆ.
Thank you for reading this post, don't forget to subscribe!ಇದನ್ನೂ ಓದಿ: ಬೆಳೆ ಪರಿಹಾರ ಹಣ: ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!
ಹಲವು ಕಂಪನಿಗಳು ಅತ್ಯುತ್ತಮ ಬೀಜ ಎಂದು ಜೊಳ್ಳು ಬೀಜಗಳನ್ನು ರೈತರಿಗೆ ಮಾರಾಟ ಮಾಡಿ ರೈತರಿಗೆ ನಷ್ಟ ಉಂಟು ಮಾಡಿರುವ ಉದಾಹರಣೆ ಸಾಕಷ್ಟಿವೆ. ಹಾಗಾಗಿ ಪ್ರತಿಯೊಬ್ಬ ರೈತನೂ ಸಾಧ್ಯವಾದಷ್ಟು ಸರ್ಕಾರ ಪ್ರೇರಿತ ಕೃಷಿ ವಿಶ್ವ ವಿದ್ಯಾಲಯಗಳಿಂದ ಬೀಜಗಳನ್ನು ಖರೀದಿಸುವುದು ಉತ್ತಮ. ಏಕೆಂದರೆ ಇಲ್ಲಿ ಕೊಡಲಾಗುವ ಬೀಜಗಳು ಹೆಚ್ಚಿನ ಇಳುವರಿಯನ್ನು ನೀಡುವ ಸಾಮರ್ಥ್ಯವನ್ನು ಹೊಂದಿರುತ್ತವೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಅಲ್ಲದೇ ಈ ಬೀಜಗಳನ್ನು ಅಭಿವೃದ್ಧಿ ಪಡಿಸಲು ಪ್ರತ್ಯೇಕ ವಿಜ್ಞಾನಿಗಳ ತಂಡವೇ ಇರುವುದರಿಂದ ಇಂತಹ ಬೀಜಗಳಿಂದ ರೈತರು ನಷ್ಟವಾಗುವ ಸಂಭವ ಕಡಿಮೆ ಇರುತ್ತದೆ. ಹಾಗಾಗಿ ಪ್ರತಿಯೊಬ್ಬ ರೈತನೂ ತಮ್ಮ ಸುತ್ತ ಮುತ್ತ ಸಮೀಪ ಇರುವ ಕೃಷಿ ವಿಶ್ವ ವಿದ್ಯಾಲಯಗಳಿಂದ ತಮಗೆ ಬೇಕಾಗುವ ಬೀಜಗಳನ್ನು ಖರೀದಿಸುವುದು ಉತ್ತಮ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಪ್ರಸ್ತುತ ಮುಂಗಾರು ಬಿತ್ತನೆ ಹಿನ್ನೆಲೆಯಲ್ಲಿ ದೇಶದ ಖ್ಯಾತ ಕೃಷಿ ವಿಶ್ವ ವಿದ್ಯಾಲಯಗಳಲ್ಲಿ ಒಂದಾದ ಧಾರವಾಡ ಕೃಷಿ ವಿಶ್ವ ವಿದ್ಯಾಲಯದಲ್ಲಿ ಇತ್ತಿಚೆಗೆ ಬೀಜ ಮೇಳ ನಡೆಯಿತು. ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ರೈತರಿಗೆ ಬಿತ್ತನೆಗೆ ಬೇಕಾಗುವ ಹೆಸರು,ಉದ್ದು, ಸೋಯಾ ಅವರೆ, ಅಲಸಂದಿ,ಶೇಂಗಾ, ಗೋವಿನ ಜೋಳ,ರಾಗಿ,ನವಣೆ -ಮುಂತಾದ ಬೀಜಗಳ ಮಾರಾಟವನ್ನು ಹಮ್ಮಿಕೊಳ್ಳಲಾಗಿತ್ತು. ಈ ಬೀಜ ಮೇಳದಲ್ಲಿ ಸಾವಿರಾರು ರೈತರು ಭಾಗವಹಿಸಿ ತಮಗೆ ಬೇಕಾದ ಬೀಜಗಳನ್ನು ಖರೀದಿಸಿದರು. ಪ್ರಸ್ತುತ ಧಾರವಾಡ ಕೃಷಿ ವಿಶ್ವ ವಿದ್ಯಾಲಯದಲ್ಲಿ ಲಭ್ಯವಿರುವ ಬೀಜಗಳು ಮತ್ತು ಅವುಗಳ ದರ ಕೆಳಗೆ ಚಿತ್ರದಲ್ಲಿ ನೀಡಲಾಗಿದೆ. ಬೀಜಗಳ ಅವಶ್ಯಕತೆ ಇರುವ ರೈತರು ಕೃಷಿ ವಿಶ್ವ ವಿದ್ಯಾಲಯ ಧಾರವಾಡದ ಬೀಜ ವಿಭಾಗಕ್ಕೆ ಭೇಟಿ ನೀಡಿ.
ಇದನ್ನೂ ಓದಿ: ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನಿಮ್ಮ ಹೊಲದ ಮ್ಯಾಪ್ ಚೆಕ್ ಮಾಡಿ! ಕಾಲುದಾರಿ, ಹಳ್ಳ ಎಲ್ಲವೂ ಈ ಮ್ಯಾಪ್ ನಲ್ಲಿ ಕಾಣುತ್ತದೆ !
ವಿಶೇಷ ಸೂಚನೆ: ನಾವು ಕೇವಲ ಮಾಹಿತಿ ನೀಡುವ ಕೆಲಸವನ್ನಷ್ಟೇ ಮಾಡುತ್ತೇವೆ. ನಿಮಗೆ ಬೀಜಗಳು ಬೇಕಾದಲ್ಲಿ ಕೃಷಿ ವಿಶ್ವ ವಿದ್ಯಾಲಯಕ್ಕೆ ಭೇಟಿ ನೀಡಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M