Categories: information

ಪರಿಶಿಷ್ಟ ಜಾತಿ ಯುವಕರಿಗೆ 2 ಲಕ್ಷ ರೂ. ಸಹಾಯಧನ – ಅರ್ಜಿಗೆ ಆಹ್ವಾನ

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ಸೈಟ್ ಗೆ ಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಸಮುದಾಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯಮ ಆರಂಭಿಸಲು ಸರ್ಕಾರವು ಮಹತ್ವದ ಅವಕಾಶ ಕಲ್ಪಿಸಿದೆ. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ISB Scheme) ಅಡಿಯಲ್ಲಿ ಗರಿಷ್ಠ ₹2 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ.

Spread the love

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ಸೈಟ್ ಗೆ ಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಸಮುದಾಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯಮ ಆರಂಭಿಸಲು ಸರ್ಕಾರವು ಮಹತ್ವದ ಅವಕಾಶ ಕಲ್ಪಿಸಿದೆ. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ISB Scheme) ಅಡಿಯಲ್ಲಿ ಗರಿಷ್ಠ ₹2 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ.

ಈ ಯೋಜನೆಯ ಉದ್ದೇಶ ಯುವಜನರನ್ನು ಸ್ವಾವಲಂಬಿಗಳಾಗಿ ರೂಪಿಸುವುದು ಮತ್ತು ಉದ್ಯಮಶೀಲತೆಗೆ ಪ್ರೋತ್ಸಾಹ ನೀಡುವುದಾಗಿದೆ. ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡುವುದರ ಜೊತೆಗೆ, ಯುವಕರು ತಮ್ಮದೇ ಸ್ವಂತ ವ್ಯಾಪಾರ ಅಥವಾ ಕೈಗಾರಿಕೆ ಆರಂಭಿಸಲು ಇದು ಉತ್ತಮ ಅವಕಾಶ.

Thank you for reading this post, don't forget to subscribe!

ಯೋಜನೆಯ ಪ್ರಮುಖ ಅಂಶಗಳು

ಫಲಾನುಭವಿಗಳು:

ಪರಿಶಿಷ್ಟ ಜಾತಿ ಸಮುದಾಯದ ನಿರುದ್ಯೋಗಿ ಯುವಕರು ಹಾಗೂ ಯುವತಿಯರು.

ಸಹಾಯಧನದ ಪ್ರಮಾಣ:

ಘಟಕದ ಒಟ್ಟು ವೆಚ್ಚದ 70% ಅಥವಾ ಗರಿಷ್ಠ ₹2 ಲಕ್ಷ. ಈ ಎರಡರಲ್ಲಿ ಯಾವುದು ಕಡಿಮೆ ಆಗುತ್ತದೆಯೋ ಅದನ್ನು ಸಹಾಯಧನವಾಗಿ ನೀಡಲಾಗುತ್ತದೆ

ಬ್ಯಾಂಕ್ ಸಾಲ ಸೌಲಭ್ಯ:

ಯೋಜನೆಯ ಉಳಿದ ವೆಚ್ಚವನ್ನು ಬ್ಯಾಂಕ್ ಸಾಲದ ಮೂಲಕ ಪಡೆಯಲು ಇಲಾಖೆಯು ಸಹಕರಿಸುತ್ತದೆ.

ಉದ್ದೇಶ:

ವ್ಯಾಪಾರ, ಕೈಗಾರಿಕೆ, ಸ್ವಯಂ ಉದ್ಯೋಗದ ಮೂಲಕ ಯುವಕರಿಗೆ ಆರ್ಥಿಕ ಸ್ವಾತಂತ್ರ್ಯ ನೀಡುವುದು.

ಅರ್ಜಿ ಸಲ್ಲಿಸುವ ವಿಧಾನ:

ಯೋಜನೆಯಡಿ ಅರ್ಜಿ ಸಲ್ಲಿಸಲು ಎರಡು ಮಾರ್ಗಗಳನ್ನು ಸರ್ಕಾರ ಒದಗಿಸಿದೆ.

1..ಆನ್‌ಲೈನ್ ಅರ್ಜಿ: ಸೇವಾ ಸಿಂಧು ಪೋರ್ಟಲ್ (sevasindhu.karnataka.gov.in ) ಮೂಲಕ ಅರ್ಜಿ ಸಲ್ಲಿಸಬಹುದು.

2.ಆಫ್‌ಲೈನ್ ಅರ್ಜಿ ಸಲ್ಲಿಕೆಗಾಗಿ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳನ್ನು ಸಂಪರ್ಕಿಸಬಹುದು.

ಕೊನೆಯ ದಿನಾಂಕ: ಅರ್ಜಿ ಸಲ್ಲಿಸಲು 10 ಸೆಪ್ಟೆಂಬರ್, 2025 ಕೊನೆಯ ದಿನವಾಗಿದೆ.

ಯೋಜನೆಯ ಮಹತ್ವ

ಸರ್ಕಾರದಿಂದ ನೀಡಲಾಗುತ್ತಿರುವ ಈ ಯೋಜನೆ ರಾಜ್ಯದ ಪರಿಶಿಷ್ಟ ಜಾತಿಯ ಯುವಜನರಿಗೆ ಹೊಸ ದಾರಿಯನ್ನು ತೆರೆದಿದೆ. ತಮ್ಮದೇ ಸ್ವಂತ ವ್ಯಾಪಾರ ಪ್ರಾರಂಭಿಸಲು ಬಯಸುವವರಿಗಾಗಿ ಬಂಡವಾಳದ ಕೊರತೆ ದೊಡ್ಡ ಅಡ್ಡಿಯಾಗಿರುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರವೇ ನೇರವಾಗಿ ಹಣಕಾಸಿನ ನೆರವು ನೀಡುತ್ತಿರುವುದು ಮಹತ್ವದ್ದಾಗಿದೆ.

ಯೋಜನೆಯಿಂದ ಸಾವಿರಾರು ಯುವಕರಿಗೆ ಉದ್ಯಮಶೀಲತೆಯ ಹಾದಿ ಹಿಡಿಯಲು ಅವಕಾಶ ಸಿಗಲಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶದ ಹಲವರು ಇದರ ಲಾಭ ಪಡೆಯಬಹುದು. ಇದರಿಂದ ಸ್ಥಳೀಯ ಮಟ್ಟದಲ್ಲಿ ಉದ್ಯೋಗಾವಕಾಶಗಳೂ ಹೆಚ್ಚುವ ಸಾಧ್ಯತೆ ಇದೆ.

ಸಮಾಜ ಕಲ್ಯಾಣ ಇಲಾಖೆ ಅರ್ಹರಾಗಿರುವ ಎಲ್ಲಾ ಪರಿಶಿಷ್ಟ ಜಾತಿ ಸಮುದಾಯದ ಯುವಕರು ಈ ಅವಕಾಶವನ್ನು ತಪ್ಪದೆ ಬಳಸಿಕೊಳ್ಳಬೇಕೆಂದು ಮನವಿ ಮಾಡಿದೆ. ಅರ್ಜಿ ಪ್ರಕ್ರಿಯೆ ಸರಳವಾಗಿದ್ದು, ತಾಂತ್ರಿಕ ನೆರವು ಬೇಕಾದರೆ ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಮಾರ್ಗದರ್ಶನ ಪಡೆಯಬಹುದು.

ಸರ್ಕಾರದ ಈ ಹೆಜ್ಜೆ ಯುವಕರ ಭವಿಷ್ಯ ರೂಪಿಸಲು, ನಿರುದ್ಯೋಗ ಕಡಿಮೆ ಮಾಡಲು ಮತ್ತು ಆರ್ಥಿಕ ಸ್ವಾವಲಂಬನೆ ಸಾಧಿಸಲು ಮಹತ್ವದ ಪಾತ್ರ ವಹಿಸುವ ನಿರೀಕ್ಷೆಯಿದೆ.

ಹೀಗಾಗಿ, ರಾಜ್ಯದ ಪರಿಶಿಷ್ಟ ಜಾತಿ ಯುವಕರಿಗೆ ಉದ್ಯಮಶೀಲತೆಯ ಕನಸು ನನಸು ಮಾಡಲು ಇದು ಒಳ್ಳೆಯ ಅವಕಾಶ. ಸೆಪ್ಟೆಂಬರ್ 10, 2025 ರೊಳಗೆ ಅರ್ಜಿ ಸಲ್ಲಿಸಿದರೆ, ಗರಿಷ್ಠ ₹2 ಲಕ್ಷ ಸಹಾಯಧನ ಪಡೆಯುವ ಅವಕಾಶ ನಿಮ್ಮದಾಗಬಹುದು.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಸೆಪ್ಟೆಂಬರ್ 2, ಮಂಗಳವಾರ LPG ಗ್ಯಾಸ್ ಸಿಲಿಂಡರ್ ಅಗ್ಗವಾಗಿದೆ, ನಿಮ್ಮ ನಗರದಲ್ಲಿ 14.2 ಕೆಜಿ ಸಿಲಿಂಡರ್‌ನ ಹೊಸ ಬೆಲೆ ಎಷ್ಟು ಗೊತ್ತಾ?

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ .ಇಂದು LPG ಸಿಲಿಂಡರ್…

56 years ago

Farmers Loan Schemes: ರೈತರಿಗೆ ಮಹತ್ವದ ಮಾಹಿತಿ – ಸಹಕಾರಿ ಸಂಸ್ಥೆಗಳ ಮೂಲಕ ವಿವಿಧ ಸಾಲ ಸೌಲಭ್ಯ ಸರ್ಕಾರದಿಂದ ಮಾಹಿತಿ

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ,ರಾಜ್ಯದ ರೈತರ ಆರ್ಥಿಕ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

Bele Parihara List: ಹಳ್ಳಿವಾರು ಬೆಳೆ ಪರಿಹಾರ ಜಮಾ ಆಗಿರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಈ ವರ್ಷ ಮುಂಗಾರು ಅಂದಾಜಿಗಿಂತ…

56 years ago