Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ

ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler set subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ರೈತರ ಇಳುವರಿ ಹೆಚ್ಚಿಸಲು ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾದದ್ದು ಎಂದರೆ ಕೃಷಿಗೆ ಬೇಕಾಗುವ ಎಲ್ಲಾ ಉಪಕರಣಗಳ ಮೇಲೆ ಸಬ್ಸಿಡಿ (subsidy yojana) ನೀಡುವುದು.

Thank you for reading this post, don't forget to subscribe!

ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದೆ.

ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400 ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ ಕೃಷಿ ಇಲಾಖೆಯ ಅಡಿಯಲ್ಲಿ ಈ ಸಬ್ಸಿಡಿ ಯೋಜನೆಯನ್ನು ನೀಡುತ್ತಿದ್ದು ಅರ್ಹ ರೈತ ಫಲಾನುಭಾವಿಗಳಿಂದ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಹಾಗಾದರೇ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ

ಅರ್ಜಿ ಸಲ್ಲಿಸಲು ಯಾರು ಯಾರು ಅರ್ಹರು?

ರಾಜ್ಯ ಸರ್ಕಾರದ ಕೃಷಿ ಇಲಾಖೆಯ ವತಿಯಿಂದ ಹನಿ ನೀರಾವರಿ ಅಥವಾ ತುಂತುರು ನೀರಾವರಿ ಉತ್ತೇಜಿಸುವ ಸಲುವಾಗಿ ಸ್ಪ್ರಿಂಕ್ಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ (subsidy scheme) ನೀಡಲಾಗುತ್ತಿದೆ.

ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಲಾಗಿರುವ ಅರ್ಹತೆಗಳನ್ನು ಹೊಂದಿರಬೇಕು.

  • ಅರ್ಜಿ ಸಲ್ಲಿಸಲು ಬಯಸುವ ರೈತರು ಸಣ್ಣ ಮತ್ತು ಅತೀ ಸಣ್ಣ ರೈತ ವರ್ಗಕ್ಕೆ ಸೇರಿರಬೇಕು.
  • ಅರ್ಜಿ ಸಲ್ಲಿಸಲು ಬಯಸುವ ರೈತರು ತಮ್ಮ ಹೆಸರಿನಲ್ಲಿ ಕಡ್ಡಾಯವಾಗಿ ಜಮೀನನ್ನು ಹೊಂದಿರಬೇಕು.
  • ಅರ್ಜಿ ಸಲ್ಲಿಸಲು ಬಯಸುವ ರೈತರು ಕಳೆದ 7 ವರ್ಷದಲ್ಲಿ ಈ ಯೋಜನೆಯ ಅಡಿಯಲ್ಲಿ ಸಬ್ಸಿಡಿಯನ್ನು ಪಡೆದಿರಬಾರದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-

ಈ ಸಬ್ಸಿಡಿಯನ್ನು ಪಡೆಯಲು ಬಯಸುವ ಅರ್ಹ ರೈತರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕೆಳಗೆ ನೀಡಲಾಗಿರುವ ದಾಖಲೆಗಳನ್ನು ಹೊಂದಿರುವುದು ಕಡ್ಡಾಯ. ಅವು ಯಾವುವು ಎಂದರೆ:

  • ಜಮೀನಿನ ಪಹಣಿ ಪತ್ರ (ಉತಾರಿ)
  • ಬ್ಯಾಂಕ್ ಪಾಸ್ ಬುಕ್
  • ಆಧಾರ್ ಕಾರ್ಡ್
  • ಕೊಳವೆ ಬಾವಿ ಅಥವಾ ಬಾವಿ ಪ್ರಮಾಣ ಪತ್ರ
  • ಜಮೀನಿನ ಹಿಡುವಳಿ ಪತ್ರ
  • ಅರ್ಜಿದಾರರ ಇತ್ತೀಚಿನ ಫೋಟೋ
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

ರಾಜ್ಯ ಸರ್ಕಾರದ ಕೃಷಿ ಇಲಾಖೆಯ ಈ ಸಬ್ಸಿಡಿ ಪಡೆಯಲು ಬಯಸುವ ಅರ್ಹ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಅಲ್ಲಿ ಅರ್ಜಿ ನಮೂನೆಯನ್ನು ಪಡೆದು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು.

ಆನ್ಲೈನ್ ಮೂಲಕವೂ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ  ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಕೃಷಿ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.

https://kkisan.karnataka.gov.in/

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಇನ್ನು ಹನಿ ನೀರಾವರಿ ಮತ್ತು ತುಂತುರು ನೀರಾವರಿ ಉತ್ತೇಜಿಸುವ ಸಲುವಾಗಿ ರಾಜ್ಯ ಸರ್ಕಾರವು ರೈತರಿಗೆ ಕೊಡಮಾಡುತ್ತಿರುವ ಈ ಸಬ್ಸಿಡಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಸ್ತುತ ಯಾವುದೇ ಕೊನೆಯ ದಿನಾಂಕವನ್ನು ನಿಗದಿ ಪಡಿಸಿಲ್ಲ.

ಇದನ್ನೂ ಓದಿ: PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿ

ಹಾಗಂತ ಇದು ತಿಂಗಳುಗಟ್ಟಲೆ ಇರುವುದಿಲ್ಲ. ಈ ಯೋಜನೆ ಅಡಿಯಲ್ಲಿ ಲಾಭ ಪಡೆಯಲು ಬಯಸುವ ಅರ್ಹ ಅಭ್ಯರ್ಥಿಗಳು ಡಿಸೆಂಬರ್ ತಿಂಗಳ ಅಂತ್ಯದ  ಒಳಗಾಗಿ ಅರ್ಜಿ ಸಲ್ಲಿಸುವುದು ತುಂಬಾ ಒಳ್ಳೆಯದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago