ಕೃಷಿ ಹೊಂಡ ನಿರ್ಮಿಸಲು ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ

ಅಷ್ಟೇ ಅಲ್ಲದೆ ಹಲವು ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಬೇಕಾಯಿತು. ಇಂತಹ ರೈತರಿಗೆ ರಾಜ್ಯ ಸರ್ಕಾರ ಬರ ಪರಿಹಾರ ಹಣ ಏನೋ ನೀಡಿತು ನಿಜ, ಆದರೆ ಅದು ಶಾಶ್ವತ ಪರಿಹಾರ ಅಲ್ಲ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ಸಾಲಿನಲ್ಲಿ ನಿಗದಿತ ಮಳೆಯಾಗದ ಕಾರಣ ಹಲವು ರೈತರ ಬೆಳೆಗಳು ಹಾನಿಯಾಗಿ ರೈತರ ಇಳುವರಿಗೆ ಭಾರಿ ಹೊಡೆತ ಬಿದ್ದಿತ್ತು.

Thank you for reading this post, don't forget to subscribe!

ಅಷ್ಟೇ ಅಲ್ಲದೆ ಹಲವು ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಬೇಕಾಯಿತು. ಇಂತಹ ರೈತರಿಗೆ ರಾಜ್ಯ ಸರ್ಕಾರ ಬರ ಪರಿಹಾರ ಹಣ ಏನೋ ನೀಡಿತು ನಿಜ, ಆದರೆ ಅದು ಶಾಶ್ವತ ಪರಿಹಾರ ಅಲ್ಲ.

ಇದನ್ನೂ ಓದಿ: ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮಗೆ ಗೊತ್ತಿಲ್ಲದೆ ಯಾರಾದರೂ ಬಳಸುತ್ತಿದ್ದರೆ ಹೀಗೆ ಚೆಕ್ ಮಾಡಿ

ಮೀನುಗಾರರಿಗೆ ಮೀನು ನೀಡುವುದು ದೊಡ್ದ ಸಹಾಯವಲ್ಲ, ಅವರಿಗೆ ಮೀನುಗಾರಿಕೆ ಕಲಿಸುವುದು ದೊಡ್ದ ಸಹಾಯ ಎನಿಸುತ್ತದೆ. ಹಾಗೆಯೇ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಿ ಕೈತೊಳೆದುಕೊಳ್ಳುವುದಕ್ಕಿಂತ ಬೆಳೆ ಹಾನಿಯಾಗದಂತೆ ಜಾಗ್ರತೆ ವಹಿಸುವುದು ನಿಜವಾದ ರೈತರ ಅಭಿವೃದ್ಧಿ ಎನಿಸುತ್ತದೆ.

ಅದರಂತೆ ಇದೀಗ ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಕಾರ್ಯ ನಿರತವಾಗಿದ್ದು, ಇದೀಗ ರೈತರ ಸಾಮರ್ಥ್ಯವನ್ನು ಸದೃಢಗೊಳಿಸಲು ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಸಬ್ಸಿಡಿ ನೀಡಲು ಮುಂದಾಗಿದೆ.

ಇದನ್ನೂ ಓದಿ: ಈ ವರ್ಷ ಬೆಳೆ ಹಾನಿಯಾದ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಹೌದು ರೈತ ಮಿತ್ರರೇ ರಾಜ್ಯ ಸರ್ಕಾರ ಇದೀಗ ರೈತರಿಗೆ ಕೃಷಿ ಹೊಂಡ ನಿರ್ಮಿಸಲು ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದ್ದು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ. ಈ ಸಬ್ಸಿಡಿ ಯೋಜನೆ ಇದೀಗ ಕೇವಲ ಹಾವೇರಿ ಜಿಲ್ಲೆಯ ರೈತರಿಗೆ ಮಾತ್ರ ಲಭ್ಯವಿದ್ದು, ಹಾವೇರಿ ಜಿಲ್ಲೆಯ ರೈತರು ಅರ್ಜಿ ಸಲ್ಲಿಸಬಹುದು ಎಂದು ಹಾವೇರಿ ಜಿಲ್ಲೆಯ ಕೃಷಿ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಈ ಯೋಜನೆಯಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿನ ರೈತರಿಗೆ ಬರದ ಸಂದರ್ಭದಲ್ಲಿ ಬೆಳೆಗಳ ನೀರಾವರಿಗೆ ಸಹಕರಿಯಾಗಲಿದ್ದು ಇದರಿಂದ ರೈತರು ಬರದಲ್ಲೂ ಉತ್ತಮ ಇಳುವರಿ ಪಡೆಯಬಹುದು.

ಯಾರಿಗೆ ಎಷ್ಟು ಸಬ್ಸಿಡಿ ಸಿಗಲಿದೆ?

ರಾಜ್ಯ ಸರ್ಕಾರದ ಈ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ತಮ್ಮ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಿಸಲು ಶೇಕಡಾ 90 ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಅದೇ ರೀತಿಯಾಗಿ ಸಾಮಾನ್ಯ ವರ್ಗದ ರೈತರಿಗೆ ಶೇಕಡಾ 80 ರಷ್ಟು ಸಬ್ಸಿಡಿ ನೀಡಲಾಗುತ್ತಿದೆ.

ಯಾವುದಕ್ಕೆ ಸಬ್ಸಿಡಿ ನೀಡಲಾಗುತ್ತಿದೆ?

ಇನ್ನು ಕೃಷಿ ಹೊಂಡ ನಿರ್ಮಿಸಲು ಬೇಕಾದ ಪಾಲಿಥಿನ್ ಹೊದಿಕೆ ಖರೀದಿಸಲು  50,000 ರೂಪಾಯಿವರೆಗೆ ಧನ ಸಹಾಯ ಸಿಗಲಿದೆ. ಅದೇ ರೀತಿ ಡಿಸೇಲ್ ಪಂಪ್ ಸೆಟ್ ಮೇಲೆ ಸಾಮಾನ್ಯ ವರ್ಗದ ರೈತರಿಗೆ ಶೇಕಡಾ 50 ರಷ್ಟು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇಕಡಾ 90 ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಇನ್ನು ಕೃಷಿ ಹೊಂಡದ ಸುತ್ತಲೂ ನೆರಳು ಪರದೆ ನಿರ್ಮಿಸಲು ಶೇಕಡಾ 50 ರಷ್ಟು ಸಬ್ಸಿಡಿ ನೀಡಲಾಗುತ್ತಿದೆ.

ಇದನ್ನೂ ಓದಿ: ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲ

ಹಾಗಾಗಿ ಹಾವೇರಿ ಜಿಲ್ಲೆಯ ರೈತರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಕೃಷಿ ಜಂಟಿ ನಿರ್ದೇಶಕರು ಈ ಮೂಲಕ ಮನವಿ ಮಾಡಿದ್ದಾರೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago