ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತಉಪವಿಭಾಗಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಹಾನಿಯ ಪ್ರಮಾಣದ ಸಮೀಕ್ಷೆ ಆರಂಭಿಸಿದೆ. ಎಷ್ಟು ಪರಿಹಾರ ನೀಡಬೇಕೆಂಬ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಎಷ್ಟು ಸಾಧ್ಯವಿದೆಯೋ ಅಷ್ಟು ಪರಿಹಾರವನ್ನು ಸರಕಾರದಿಂದ ಇಲ್ಲವೇ ಬೆಳಗಾವಿಯ ಎಸ್.ನಿಜಲಿಂಗಪ್ಪ ಸಂಸ್ಥೆಯಿಂದ ನೀಡಲಾಗುವುದು.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತಉಪವಿಭಾಗಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಹಾನಿಯ ಪ್ರಮಾಣದ ಸಮೀಕ್ಷೆ ಆರಂಭಿಸಿದೆ. ಎಷ್ಟು ಪರಿಹಾರ ನೀಡಬೇಕೆಂಬ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಎಷ್ಟು ಸಾಧ್ಯವಿದೆಯೋ ಅಷ್ಟು ಪರಿಹಾರವನ್ನು ಸರಕಾರದಿಂದ ಇಲ್ಲವೇ ಬೆಳಗಾವಿಯ ಎಸ್.ನಿಜಲಿಂಗಪ್ಪ ಸಂಸ್ಥೆಯಿಂದ ನೀಡಲಾಗುವುದು.
Thank you for reading this post, don't forget to subscribe!ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಸಮೀರವಾಡಿಯ ಗೋದಾವರಿ ಬಯೋ ರಿಫೈನರೀಸ್ ಲಿಮಿಟೆಡ್ ಬಳಿ ಗುರುವಾರ ಸಂಭವಿಸಿದ ಬೆಂಕಿ ಪ್ರಕರಣ ಸಂಬಂಧ ಉಂಟಾಗಿರುವ ಹಾನಿಗೆ ಸಾಧ್ಯವಿರುವ ಪರಿಹಾರ ನೀಡಲಾಗುವುದು ಸಚಿವ ಶಿವಾನಂದ ಪಾಟೀಲ್ ಶುಕ್ರವಾರ ಹೇಳಿದರು.
ದುರಂತದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸಚಿವರು ಮಾತನಾಡಿದರು.
ಉಪವಿಭಾಗಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಹಾನಿಯ ಪ್ರಮಾಣದ ಸಮೀಕ್ಷೆ ಆರಂಭಿಸಿದೆ. ಎಷ್ಟು ಪರಿಹಾರ ನೀಡಬೇಕೆಂಬ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಎಷ್ಟು ಸಾಧ್ಯವಿದೆಯೋ ಅಷ್ಟು ಪರಿಹಾರವನ್ನು ಸರಕಾರದಿಂದ ಇಲ್ಲವೇ ಬೆಳಗಾವಿಯ ಎಸ್.ನಿಜಲಿಂಗಪ್ಪ ಸಂಸ್ಥೆಯಿಂದ ನೀಡಲಾಗುವುದು ಎಂದು ಹೇಳಿದರು.
ಇದೇ ವೇಳೆ ಘಟನೆಯನ್ನು ಖಂಡಿಸಿದ ಸಚಿವರು, ತಪ್ಪಿತಸ್ಥರ ವಿರುದ್ಧ ಅವರ ಸ್ಥಾನಮಾನವನ್ನು ಲೆಕ್ಕಿಸದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಬಳಿಕ ಕಬ್ಬು ಬೆಳೆಗಾರರ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು
ಕರ್ನಾಟಕದಲ್ಲಿ 7.3 ಲಕ್ಷ ಹೆಕ್ಟೇರ್‌ಗಳಲ್ಲಿ ಕಬ್ಬು ಬೆಳೆಯಲಾಗುತ್ತಿದ್ದು, ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ 5.67 ಲಕ್ಷ ಹೆಕ್ಟೇರ್‌ಗಳಲ್ಲಿ ಕಬ್ಬು ಬೆಳೆಯಲಾಗುತ್ತಿದೆ. ಕಬ್ಬು ಅರೆಯುವಿಕೆ ವಿಳಂಬವಾಗುವುದರಿಂದ ಸಕ್ಕರೆ ಉತ್ಪಾದನೆ ಮೇಲೆ ಪರಿಣಾಮ ಬೀರುತ್ತದೆ, ತೂಕ ಕಡಿಮೆಯಾಗುತ್ತದೆ ಮತ್ತು ಮುಂದಿನ ಬೆಳೆ ಚಕ್ರದ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.
ಈ ನಡುವೆ ಘಟನೆ ಬಳಿಕ ಕಾರ್ಯಾಚರಣೆ ಆರಂಭಿಸಲು ಕಾರ್ಖಾನೆಗಳು ಹಿಂಜರಿಯುತ್ತಿದ್ದು, ಸಂಪೂರ್ಣ ರಕ್ಷಣೆ ನೀಡುವುದಾಗಿ ಸಚಿವರು ಭರವಸೆ ನೀಡಿದರು.
ರಾಜ್ಯ ಸರ್ಕಾರ ಯಾವುದೇ ಕಾರ್ಖಾನೆಗಳ ಮಾಲೀಕರಿಗೆ ಮಣಿದಿಲ್ಲ. ಮಣಿದಿದ್ದರೆ ಹೆಚ್ಚಿನ ಬೆಲೆ ಕೊಡಿಸಲು ಸಾಧ್ಯವಾಗುತ್ತಿರಲಿಲ್ಲ. ಕಬ್ಬಿನ ಉಪ ಉತ್ಪನ್ನಗಳಿಂದ ಕಾರ್ಖಾನೆಗಳು ಗಳಿಸುವ ಲಾಭದ ಬಗ್ಗೆ ಹಾಗೂ ಸರಕಾರಕ್ಕೆ ಬರುವ ತೆರಿಗೆ ಬಗ್ಗೆಯೂ ತಪ್ಪು ಮಾಹಿತಿ ನೀಡುವ ಪ್ರಯತ್ನ ಆಗಬಾರದು. ಸಕ್ಕರೆ ರಫ್ತು ಪ್ರಮಾಣ ಹಾಗೂ ರಾಜ್ಯಕ್ಕೆ ನಿಗದಿಪಡಿಸಿರುವ ಎಥನಾಲ್ ಉತ್ಪಾದನೆ ಮಿತಿಯನ್ನು ಕೇಂದ್ರ ಸರಕಾರ ಹೆಚ್ಚಳ ಮಾಡಬೇಕು. ವಾಣಿಜ್ಯ ಬಳಕೆಯ ಸಕ್ಕರೆ ಬೆಲೆಯನ್ನು ಹೆಚ್ಚಳ ಮಾಡಬೇಕೆಂಬುದು ರಾಜ್ಯದ ಬೇಡಿಕೆಯಾಗಿದೆ ಎಂದು ಹೇಳಿದರು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…