ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಸರ್ಕಾರಿ ಶಾಲೆಗಳಲ್ಲಿ (Government School) ಸೇವೆ ಸಲ್ಲಿಸಲು ಕಾಯುತ್ತಿರುವ ಶಿಕ್ಷಕ ಆಕಾಂಕ್ಷಿಗಳಿಗೆ ಸರ್ಕಾರದಿಂದ ಸಂತೋಷದ ಸುದ್ದಿ ಬಂದಿದೆ. ಕರ್ನಾಟಕ ರಾಜ್ಯಾದ್ಯಂತ 26,000 ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ
Thank you for reading this post, don't forget to subscribe!ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ, ಡಿಸೆಂಬರ್ 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ (TET) ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿ
ಶೀಘ್ರದಲ್ಲೇ ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿ ಕುರಿತ ಆದೇಶವನ್ನೂ ಸರ್ಕಾರ ಹೊರಡಿಸಲಿದೆ. ರಾಜ್ಯದಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (KPS) ಆರಂಭಿಸಲಾಗುವುದು. 6ನೇ ತರಗತಿಯಿಂದ ಕನ್ನಡದ ಜೊತೆಗೆ ಇಂಗ್ಲಿಷ್ ಕಲಿಕೆಗೂ ಅವಕಾಶ ಇರಲಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಚಿವರು ಹೇಳಿದರು.
ನವೆಂಬರ್ ಎರಡನೇ ವಾರದಲ್ಲಿ ಮುಖ್ಯಮಂತ್ರಿಗಳು ಇದಕ್ಕೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಕೃತಕ ಬುದ್ಧಿಮತ್ತೆ (AI) ಆಧಾರಿತ ಶಿಕ್ಷಣ ನೀಡಬೇಕು ಎಂದು ರಾಹುಲ್ ಗಾಂಧಿಯವರು ಸಲಹೆ ನೀಡಿದ್ದಾರೆ. ಅದರಂತೆ, ಈಗ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಕಲಿಸಲಾಗುತ್ತದೆ. ಅಲ್ಲದೆ, 6ನೇ ತರಗತಿಯಿಂದಲೇ ‘ಸ್ಕಿಲ್ ಸ್ಕೂಲ್’ (ಕೌಶಲ್ಯ ಶಾಲೆ) ಪ್ರಾರಂಭಿಸಲಾಗುವುದು ಎಂದು ಮಧು ಬಂಗಾರಪ್ಪ ಮಾಹಿತಿ ನೀಡಿದರು
ಓದುಗರಲ್ಲಿ ವಿನಂತಿ,
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode