ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ದ್ವಿತೀಯ ಪಿಯುಸಿ ಮುಗಿಸಿ ಪದವಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
Thank you for reading this post, don't forget to subscribe!ಹೌದು ಸ್ನೇಹಿತರೆ, ವಿದ್ಯಾಧನ ಕಾರ್ಯಕ್ರಮದ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ 55,000 ರೂಪಾಯಿಗಳ ವಿದ್ಯಾರ್ಥಿ ವೇತನ ನೀಡಲು ಇದೀಗ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ
ಇದನ್ನೂ ಓದಿ; ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕಾ ಈಗಲೇ ಚೆಕ್ ಮಾಡಿ
https://ahara.karnataka.gov.in
ಹಾಗಾದರೆ ಯಾವುದು ಈ ಸ್ಕಾಲರ್ಶಿಪ್? ಇದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಎಂಬ ಮುಂತಾದ ಪ್ರಶ್ನೆಗಳಿಗೆ ಈ ಅಂಕಣದಲ್ಲಿ ಮಾಹಿತಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಏನಿದು ವಿದ್ಯಾಧನ ಸ್ಕಾಲರ್ ಶಿಪ್?
ಓದುಗರೇ ಸರೋಜಿನಿ ದಾಮೋದರ್ ಫೌಂಡೇಶನ್ (Sarojini Damodar Foundation Scholarship) ವತಿಯಿಂದ ಆರ್ಥಿಕವಾಗಿ ದುರ್ಬಲವಾಗಿರುವ ಬಡ ಕುಟುಂಬಗಳ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಸಹಾಯ ಮಾಡಲು ಧನ ಸಹಾಯದ ರೂಪದಲ್ಲಿ ನೀಡುತ್ತಿರುವ ಈ ಯೋಜನೆಯ ವಿದ್ಯಾಧನ ಸ್ಕಾಲರ್ ಶಿಪ್.
ಯಾರು ಯಾರು ಅರ್ಜಿ ಸಲ್ಲಿಸಬಹುದು?
ವಿದ್ಯಾಧನ (Vidyadhana Scholarship) ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸೇರಿದವರಾಗಿರಬೇಕು. ಅವರ ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಹೆಚ್ಚು ಇರಬಾರದು.
ಅದರ ಜೊತೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಮುಗಿಸಿ ವೃತ್ತಿಪರ ಡಿಗ್ರಿಯಲ್ಲಿ (ಉದಾ:ನರ್ಸಿಂಗ್,ಮೆಡಿಕಲ್, ಪಾರಾ ಮೆಡಿಕಲ್, ಬಿಎಸ್ಸಿ ಕೃಷಿ ಹಾಗೂ ಇತರೆ) ವ್ಯಾಸಂಗ ಮಾಡುತ್ತಿರಬೇಕು. ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡಾ 70% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು?
ಇನ್ನು ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಅಂಕಪಟ್ಟಿ, ಆದಾಯ ಪ್ರಮಾಣ ಪತ್ರ,ಪದವಿ ಕಾಲೇಜಿನಲ್ಲಿ ದಾಖಲಾಗಿರುವ ಶುಲ್ಕ ರಶೀದಿ ಹಾಗೂ ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರಗಳು ಬೇಕಾಗುತ್ತವೆ.
ಅರ್ಜಿ ಸಲ್ಲಿಸುವುದು ಹೇಗೆ?
ವಿದ್ಯಾಧನ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕೆಳಗೆ ನೀಡಲಾಗಿರುವ ಸರೋಜಿನಿ ದಾಮೋದರ್ ಫೌಂಡೇಶನ್ ಅವರ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.
https://www.vidyadhan.org/apply
ಹಂತ -1) ಮೊದಲಿಗೆ ನೀವು ಮೇಲೆ ಕಾಣುವ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಕೆಳಗೆ scroll ಮಾಡಿದರೆ Apply Now ಮೇಲೆ ಎಂದು ಕಾಣಿಸುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿ.

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಹೆಸರು, ಮೊಬೈಲ್ ನಂಬರ್ ಮತ್ತು ಅಲ್ಲಿ ಕೇಳಿರುವ ಇತರೆ ಮಾಹಿತಿ ತುಂಬಿ ರೆಜಿಸ್ಟರ್ ಮಾಡಿಕೊಳ್ಳಿ.

ಹಂತ -3) ನಂತರ ನೀವು ರಿಜಿಸ್ಟರ್ ಮಾಡಿರುವ ಖಾತೆಯಿಂದ ಲಾಗಿನ್ ಆಗಿ ಅಲ್ಲಿ ಕೇಳಿರುವ ಮಾಹಿತಿಯನ್ನು ನೀಡಿ ಕೆಳಗೆ ನೀಡಲಾಗಿರುವ Submit ಬಟನ್ ಮೇಲೆ ಕ್ಲಿಕ್ ಮಾಡಿದರೆ ಈ ಸ್ಕಾಲರ್ಷಿಪ್ ಗೆ ನೀವು Apply ಮಾಡಿದಂತಾಗುತ್ತದೆ.
ಆಯ್ಕೆ ಹೇಗೆ ಮಾಡುತ್ತಾರೆ?
ಹೀಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲಾ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಅರ್ಹ ವಿದ್ಯಾರ್ಥಿಗಳ ಪಟ್ಟಿಯನ್ನು ಬಿಡಲಾಗುತ್ತದೆ. ಈ ಪಟ್ಟಿಯಲ್ಲಿರುವ ವಿದ್ಯಾರ್ಥಿಗಳ ಸಂದರ್ಶನ ಮಾಡಿ ಅವರಿಗೆ ಸ್ಕಾಲರ್ಷಿಪ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಇನ್ನು ಸರೋಜಿನಿ ದಾಮೋದರ್ ಫೌಂಡೇಶನ್ ವತಿಯಿಂದ ಕೊಡಮಾಡುವ ಈ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಲು ಇದೇ ಸೆಪ್ಟೆಂಬರ್ ತಿಂಗಳ 30 ನೇ ತಾರೀಖು ಕೊನೆಯ ದಿನಾಂಕ ಆಗಿದೆ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M