ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಇತ್ತೀಚೆಗಷ್ಟೇ ಫೆಂಗಲ್ (fengal cyclone) ಚಂಡಮಾರುತದಿಂದ ತತ್ತರಿಸಿದ್ದ ರಾಜ್ಯದ ರೈತಾಪಿ ವರ್ಗಕ್ಕೆ ಇದೀಗ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ.
Thank you for reading this post, don't forget to subscribe!ಹೌದು ರೈತ ಬಾಂಧವರೇ, ಭಾರತೀಯ ಹವಾಮಾನ ಇಲಾಖೆಯು Indian Meteorology Department) ಮುಂದಿನ 10 ದಿನಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ಎರಡು ಬಾರಿ ವಾಯುಕುಸಿತ ಉಂಟಾಗಲಿದ್ದು ಇದರಿಂದ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಪಿಎಂ ಕಿಸಾನ್: 19 ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
ಇನ್ನು ಇತ್ತೀಚೆಗಷ್ಟೇ ಫೆಂಗಲ್ ಚಂಡಮಾರುತ ರಾಜ್ಯಾದ್ಯಂತ ಮಳೆ ಸುರಿಸಿ ಸಾಕಷ್ಟು ನಷ್ಟ ಮಾಡಿತ್ತು. ಇದೀಗ ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದ ಭೀತಿ ಎದುರಾಗಿದೆ.
ಯಾವಾಗ ಮಳೆಯಾಗಲಿದೆ ?
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಬಂಗಾಳಕೊಲ್ಲಿಯಲ್ಲಿ ಮುಂದಿನ ಹತ್ತು ದಿನಗಳ ಅವಧಿಯಲ್ಲಿ ಎರಡು ಬಾರಿ ವಾಯುಭಾರ ಕುಸಿತವಾಗಲಿದೆ. ಡಿಸೆಂಬರ್ 14-15 ಕ್ಕೆ ಒಮ್ಮೆ ವಾಯುಭಾರ ಕುಸಿತ ಉಂಟಾಗಲಿದ್ದೂ ಇದರಿಂದ ರಾಜ್ಯಾದ್ಯಂತ ಮಳೆ ಸುರಿಯಲಿದೆ.
ಇದನ್ನೂ ಓದಿ: ಒಂದು ವಾರದಲ್ಲಿ ರೈತರಿಗೆ 120 ಕೋಟಿ ರೂಪಾಯಿ ಹಿಂಗಾರು ಬೆಳೆ ಹಾನಿ ಪರಿಹಾರ ಹಣ ಜಮಾ: ಕಂದಾಯ ಸಚಿವ ಕೃಷ್ಣ ಭೈರೇಗೌಡ
ಎರಡನೇ ವಾಯುಭಾರ ಕುಸಿತ ಡಿಸೆಂಬರ್ 17-18 ಕ್ಕೇ ಉಂಟಾಗಲಿದ್ದು ಇದರಿಂದಲೂ ಕೂಡ ರಾಜ್ಯಾದ್ಯಂತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ ಆಗಲಿದೆ ?
ಬಂಗಾಳ ಕೊಲ್ಲಿಯಲ್ಲಿ ಉಂಟಾಗಲಿರುವ ಈ ಎರಡೂ ವಾಯುಭಾರ ಕುಸಿತದಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮತ್ತು ಕರಾವಳಿ ಪ್ರದೇಶದಲ್ಲಿ ಅಧಿಕ ಮಳೆ ಆಗಲಿದೆ. ಇನ್ನು ಉಳಿದ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಈ ವಾಯುಭಾರ ಕುಸಿತ ರೈತಾಪಿ ವರ್ಗದ ಜನರಿಗೆ ಆತಂಕ ಉಂಟು ಮಾಡಿದೆ. ಏಕೆಂದರೆ ಬೆಳೆಗಳು ಕಟಾವಿಗೆ ಬಂದಿದ್ದು ತಾತ್ಕಾಲಿಕ ಮಳೆಯಿಂದಾಗಿ ಬೆಳೆ ಹಾನಿ ಉಂಟಾಗಲಿದೆ ಎಂದು ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.
ಭಾರತದ ಕೃಷಿಯಂತೂ ಮುಂಗಾರು ಮಳೆಯನ್ನೇ ನೆಚ್ಚಿದ್ದು, ಇಡಿಯ ದೇಶದ ಕೃಷಿ ಚಟುವಟಿಕೆಗಳಲ್ಲ ಮಾನ್ಸೂನ್ ಮೇಲೆ ನಿರ್ಧರಿತವಾಗುತ್ತವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬೆಳೆಯ ಇಳುವರಿ ಕೂಡ ಮಾನ್ಸೂನ್ ಮೇಲೆ ಅವಲಂಬಿತವಾಗಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
ಹೀಗಿರುವಾಗ ರೈತರಿಗೆ ಮಳೆಯ ಕುರಿತು ಮಾಹಿತಿ ಇರುವುದು ಅವಶ್ಯಕವಾಗುತ್ತದೆ. ಮಳೆ ನೋಡಿಕೊಂಡು ತಮ್ಮ ಬಿತ್ತನೆ ಕಾರ್ಯ ಅಥವಾ ಇನ್ನಿತರ ಕೃಷಿ ಚಟುವಟಿಕೆಗಳನ್ನು ನಡೆಸಲು ಅವರಿಗೆ ಸಹಾಯವಾಗುತ್ತದೆ.
ಈ ಕಾರಣದಿಂದಲೆ ಕೇಂದ್ರ ಸರ್ಕಾರವು ‘ಮೇಘದೂತ ‘ ಎಂಬ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದು ಅದರ ಮೂಲಕ ನೀವು ನಿಮ್ಮ ಗ್ರಾಮದಲ್ಲಿ ಮಳೆಯಾಗುವ 5 ದಿನಗಳ ಮುಂಚೆಯೇ ಮಳೆಯ ಮಾಹಿತಿಯನ್ನು ಪಡೆಯಬಹುದು.
ಇದನ್ನೂ ಓದಿ: ಪಿಎಂ ಕಿಸಾನ್: 18 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಈ ಆ್ಯಪ್ ಅನ್ನು ಬಳಸುವುದು ಹೇಗೆ ? ಇದರಿಂದ ಮಳೆಯ ಮಾಹಿತಿಯನ್ನು ಪಡೆಯುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿದುಕೊಳ್ಳೋಣ. ತಪ್ಪದೇ ಈ ಅಂಕಣವನ್ನು ಕೊನೆಯವರೆಗೂ ಓದಿರಿ.
ಮೊಬೈಲ್ ನಲ್ಲೇ ಮಳೆ ಮುನ್ಸೂಚನೆ ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಮೇಘದೂತ ಆ್ಯಪ್ ನ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ, ಪ್ಲೇಸ್ಟೊರಿನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.
https://play.google.com/store/apps/details?id=com.aas.meghdoot&hl=en_IN&gl=US

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಭಾಷೆಯನ್ನು ಕನ್ನಡ ಎಂದು ಆಯ್ಕೆ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಮುಂದೆ ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಸೈನ್ ಅಫ್ ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಎಲ್ಲಾ ವಿವರಗಳನ್ನು ಸಲ್ಲಿಸಿ.

ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಮತ್ತು ಭಾಷೆಯನ್ನು ಹಾಕಿ ಲಾಗಿನ್ ಮೇಲೆ ಕ್ಲಿಕ್ ಮಾಡಿ.

ಹಂತ -7) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ ಅಲ್ಲಿ ನೀವು While Using the App ಮೇಲೆ ಕ್ಲಿಕ್ ಮಾಡಿ.

ಹಂತ -8) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ಕೆಳಗೆ ಮುನ್ಸೂಚನೆ ಎಂದು ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.

ಹಂತ -9) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ನಿಮ್ಮ ಜಿಲ್ಲೆಯ ಸಂಪೂರ್ಣ ಹವಾಮಾನ ಮುನ್ಸೂಚನೆ ಸಿಗುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಗ್ರಾಮದ ಸಂಪೂರ್ಣ ಹವಾಮಾನ ವರದಿಯನ್ನು ತಿಳಿದುಕೊಳ್ಳಬಹುದು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ನಿಮ್ಮ ಗ್ರಾಮ ಪಂಚಾಯತಿಯಲ್ಲಿ ಸಿಗುವ ಎಲ್ಲಾ ಸೇವೆಗಳ ಮಾಹಿತಿಯನ್ನು ಪಡೆಯುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ನಮ್ಮ ಸಂವಿಧಾನದ 73 ನೇ ತಿದ್ದುಪಡಿಯ ಪ್ರಕಾರ ನಮ್ಮ ದೇಶದಲ್ಲಿ ಪಂಚಾಯತಿಗಳು ಅಧಿಕೃತವಾಗಿ ಜಾರಿಗೆ ಬಂದವು. ಇವು ಗ್ರಾಮೀಣ ಭಾಗದ ಸರ್ಕಾರ ಎಂದೇ ಜನಜನಿತವಾಗಿವೆ. ಕಾರಣ ಗ್ರಾಮೀಣ ಭಾರತದ ಅಭಿವೃದ್ಧಿಯ ಜವಾಬ್ದಾರಿ ಈ ಪಂಚಾಯತಿಗಳ ಮೇಲೆಯೇ ನಿಂತಿದೆ.
- Krushi honda subsidy: ರೈತರಿಗೆ ಸರ್ಕಾರದ ಸಬ್ಸಿಡಿ ಹಣದಲ್ಲಿ ಕೃಷಿ ಹೊಂಡ ನಿರ್ಮಾಣ! ಇಲ್ಲಿದೆ ಸಂಪೂರ್ಣ ಮಾಹಿತಿರೈತರಿಗೆ ಸರ್ಕಾರದ ಸಬ್ಸಿಡಿ ಹಣದಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡುವ ಅವಕಾಶ. ಕೃಷಿ ಭಾಗ್ಯ ಯೋಜನೆಯಡಿ ಮಳೆ ನೀರು ಸಂಗ್ರಹಣೆಗಾಗಿ ಕೃಷಿ ಹೊಂಡಕ್ಕೆ ಎಷ್ಟು ಸಬ್ಸಿಡಿ ಸಿಗುತ್ತದೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಹತೆ ವಿವರಗಳು ಇಲ್ಲಿವೆ.
- LIC HFL FD ಯೋಜನೆ: ಪ್ರತಿ ತಿಂಗಳಿಗೆ ₹9,750 ವರೆಗೆ ಬಡ್ಡಿ ಆದಾಯ!ಈ ಯೋಜನೆಯ ಮೂಲಕ, ಹೂಡಿಕೆದಾರರು ತಮ್ಮ ಹಣವನ್ನು ಸುರಕ್ಷಿತವಾಗಿ ಇರಿಸಬಹುದು ಮತ್ತು ಪ್ರತಿ ತಿಂಗಳ ಬಡ್ಡಿ ರೂಪದಲ್ಲಿ ಸ್ಥಿರ ಆದಾಯವನ್ನು ಪಡೆಯಬಹುದು. ವಿಶೇಷವಾಗಿ ಪದವೀ ವಿರಾಮ ಮಾಡಿದವರು, ಪಿಂಚಣಿದಾರರು ಅಥವಾ ಸ್ಥಿರವಾದ ಆದಾಯವನ್ನು ಬಯಸಿದವರಿಗೆ ಇದು ತುಂಬಾ ಉಪಯುಕ್ತ ಯೋಜನೆಯಾಗಿ ಪರಿಗಣಿಸಲ್ಪಡುತ್ತದೆ.
- ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನಿಮ್ಮ ಹೊಲದ ಮ್ಯಾಪ್ ಚೆಕ್ ಮಾಡಿ! ಕಾಲುದಾರಿ, ಹಳ್ಳ ಎಲ್ಲವೂ ಈ ಮ್ಯಾಪ್ ನಲ್ಲಿ ಕಾಣುತ್ತದೆ !ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಈಗಿನ ಕಾಲದಲ್ಲಿ ರೈತರು ತಮ್ಮ ಹೊಲದ ವಿವರಗಳನ್ನು ಪರಿಶೀಲಿಸಿ ಅದರ ಸೂಕ್ತ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಳ್ಳುವುದು ಬಹಳ ಅವಶ್ಯಕವಾಗಿದೆ. ಏಕೆಂದರೆ ಸರ್ಕಾರದಿಂದ ಬರುವ ಏನೇ ಸೌಲಭ್ಯಗಳಿದ್ದರೂ ಅವು ಈ ದಾಖಲೆ ನೋಡಿಯೇ ನೀಡಲಾಗುತ್ತದೆ. ಹಾಗಾಗಿ ಪ್ರತಿಯೊಬ್ಬ ರೈತರು ತಮ್ಮ ಜಮೀನಿನ ಸಂಪೂರ್ಣ ದಾಖಲೆ ಮತ್ತು ವಿವರಗಳನ್ನು ಕಡ್ಡಾಯವಾಗಿ ಮಾಡಿಸಿ ಇಡಬೇಕು.
- ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
- Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler set subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದೆ.
- ಕರ್ನಾಟಕದಲ್ಲಿ 2.43 ಲಕ್ಷ ರೇಷನ್ ಕಾರ್ಡ್ಗಳ ದಿಢೀರ್ ರದ್ದು: ನಿಮ್ಮ ಕಾರ್ಡ್ ಸಕ್ರಿಯವೇ? ತಕ್ಷಣ ಚೆಕ್ ಮಾಡಿ, ಅಕ್ಕಿ ಸಹಾಯ ಕಳೆದುಕೊಳ್ಳಬೇಡಿ!ಕರ್ನಾಟಕದಲ್ಲಿ 2.43 ಲಕ್ಷ ರೇಷನ್ ಕಾರ್ಡ್ಗಳನ್ನು ಸರ್ಕಾರ ದಿಢೀರ್ ರದ್ದುಗೊಳಿಸಿದೆ! ನಿಮ್ಮ ರೇಷನ್ ಕಾರ್ಡ್ ಇನ್ನೂ ಸಕ್ರಿಯವಾಗಿದೆಯೇ? ತಕ್ಷಣವೇ ಮೊಬೈಲಿನಲ್ಲಿ ಆನ್ಲೈನ್ ಮೂಲಕ ಚೆಕ್ ಮಾಡಿ. ಯಾರಿಗೆ ರದ್ದು, ಏಕೆ ರದ್ದು, ಮತ್ತೆ ಸಕ್ರಿಯಗೊಳಿಸುವ ವಿಧಾನ—ಎಲ್ಲಾ ಮಾಹಿತಿ ಇಲ್ಲಿ ಓದಿ!
- ಕೃಷಿ ಪಂಪ್ ಸೆಟ್ ಹೊಂದಿರುವ ರೈತರಿಗೆ ಮಹತ್ವದ ಮಾಹಿತಿ! ತಪ್ಪದೇ ಓದಿ !ಇಂಧನ ಸಚಿವ ಕೆ. ಜೆ.ಜಾರ್ಜ್ ಮಾತನಾಡಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದರಿಂದ ರಾಜ್ಯದಲ್ಲಿ ಎಷ್ಟು ಜನ ರೈತರು ಕೃಷಿ ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯುತ್ತಿದ್ದಾರೆ ಎಂಬುದುರ ಬಗ್ಗೆ ಮಾಹಿತಿ ಸಿಗುತ್ತದೆ.
- RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು ಸಾವಿರಾರು ರೈತರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಿದೆ. ಇನ್ನು ಹಲವು ವರ್ಷಗಳಿಂದ ಬಿತ್ತಿ ಬೆಳೆದ ಜಮೀನಿನ ಮೇಲೆ ಹೀಗೆ ಏಕಾಏಕಿ ಹಕ್ಕು ಚಲಾಯಿಸುತ್ತಿರುವ ವಕ್ಫ್ ಬೋರ್ಡ್ ವಿರೋಧಿಸಿ ಹಲವಾರು ರೈತರು ಪ್ರತಿಭಟನೆಗೆ ಇಳಿದಿದ್ದಾರೆ.
- ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಮತ್ತು ಸ್ಟೆಪ್–ಬೈ–ಸ್ಟೆಪ್ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.
- ನಿಮ್ಮ ಜಮೀನನ್ನು ನಿಮ್ಮ ನೆರೆಯವರು ಒತ್ತುವರಿ ಮಾಡಿದ್ದಾರೆಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ?










